ಟೋಕಿಯೊ ಒಲಿಂಪಿಕ್ಸ್ ರದ್ದುಗೊಳಿಸಿ : ಮಾಧ್ಯಮದಿಂದಲೇ ಮನವಿ
Team Udayavani, May 27, 2021, 2:24 AM IST
ಟೋಕಿಯೊ : ಮುಂದಿನ ತಿಂಗಳು ಆರಂಭಗೊಳ್ಳಲಿರುವ ಟೋಕಿಯೊ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಗಳನ್ನು ರದ್ದುಪಡಿಸುವಂತೆ ಕ್ರೀಡಾಕೂಟದ ಅಧಿಕೃತ ಮಾಧ್ಯಮ ಪಾಲುದಾರ ಸಂಸ್ಥೆಗಳಲ್ಲಿ ಒಂದಾದ “ಅಸಾಹಿ ಶಿಂಬುನ್’ ಒತ್ತಾಯಿಸಿದೆ.
“ಕೋವಿಡ್ ಸಾಂಕ್ರಾಮಿಕ ಭೀತಿಯ ನಡುವೆ ದೇಶದ ನಾಗರಿಕರ ಸುರಕ್ಷತೆ ಮತ್ತು ಆರೋಗ್ಯ ವ್ಯವಸ್ಥೆ ಮೇಲಿನ ಒತ್ತಡ ನಿವಾರಿಸಲು ಕ್ರೀಡಾಕೂಟವನ್ನು ರದ್ದುಗೊಳಿಸುವುದೇ ಸೂಕ್ತ’ ಎಂದು ಪ್ರಧಾನಿ ಯೊಶಿಹಿಡೆ ಸುಗಾ ಅವರಿಗೆ ಪತ್ರ ಬರೆದಿದೆ.
“ಇಂಥ ಸಂದರ್ಭದಲ್ಲಿ ಒಲಿಂಪಿಕ್ಸ್ ನಡೆಸುವುದು ದೊಡ್ಡ ಗ್ಯಾಂಬ್ಲಿಂಗ್ ಎನಿಸುತ್ತದೆ. ಇಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಸುರಕ್ಷತೆ ನೀಡುವುದು ಸಂಘಟಕರಿಗೆ ಸಾಧ್ಯವಾಗದು. ಸಾರ್ವಜನಿಕರ ಅಭಿಪ್ರಾಯ ಕೂಡ ಒಲಿಂಪಿಕ್ಸ್ಗೆ
ವಿರೋಧವಾಗಿಯೇ ಇದೆ’ ಎಂದು ಶಿಂಬುನ್ ಉಲ್ಲೇಖೀಸಿದೆ. ಒಲಿಂಪಿಕ್ ಸಮಿತಿಯ ಉಪಾಧ್ಯಕ್ಷ ಜಾನ್ ಕೋಟ್ಸ್ ಅವರಿಗೂ ಮನವಿ ಸಲ್ಲಿಸಿದೆ. ಒಂದು ವೇಳೆ ಒಲಿಂಪಿಕ್ಸ್ ರದ್ದುಗೊಂಡರೆ ಆಗ ಜಪಾನ್ 1.8 ಟ್ರಿಲಿಯನ್ ಯೆನ್ (16.6 ಬಿಲಿಯನ್ ಡಾಲರ್) ನಷ್ಟಕ್ಕೊಳಗಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.