Democracy Day: ಉಭಯ ಜಿಲ್ಲೆಗಳಲ್ಲಿ ಲಕ್ಷ ಜನರಿಂದ ಮಾನವ ಸರಪಳಿ

ಸೆ. 15ರಂದು ಬೈಂದೂರಿನಿಂದ ಹೆಜಮಾಡಿ, ಸಂಪಾಜೆಯಿಂದ ಹೆಜಮಾಡಿವರೆಗೆ : ಜಿಲ್ಲಾಧಿಕಾರಿಗಳು

Team Udayavani, Sep 12, 2024, 7:25 AM IST

Udupi-DC-Dr.-Vidya-kumari

ಮಣಿಪಾಲ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸೆ.15ರಂದು 9.30ಕ್ಕೆ ಜಿಲ್ಲೆಯಲ್ಲಿ 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ ಮಾಡಲಿದ್ದೇವೆ. ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸರಕಾರಿ ನೌಕರರು ಸಹಿತ 1 ಲಕ್ಷ ಜನರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮಾಹಿತಿ ನೀಡಿದರು.

ಜಿಲ್ಲೆಯ ಗಡಿಭಾಗವಾದ ಬೈಂದೂರು ಶಿರೂರಿನಿಂದ ಹೆಜಮಾಡಿ ತನಕ ಸರಪಳಿ ಇರಲಿದೆ. ಉಡುಪಿಯ ಕಿನ್ನಿಮೂಲ್ಕಿ ಸ್ವಾಗತಗೋಪುರದಲ್ಲಿ ರಾಷ್ಟ್ರಧ್ವಜ ಹಾಗೂ ಕನ್ನಡ ಬಾವುಟವನ್ನು ಹಿಡಿದು ಸಂಭ್ರಮಿಸಲಿದ್ದೇವೆ. ಮೊದಲಿಗೆ ಸಂವಿಧಾನ ಪೀಠಿಕೆ ಓದಿ, ಬಳಿಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಸಂದೇಶ ಸಾರಲಾಗುತ್ತದೆ. ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ ಎಂದು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಚಾರದಲ್ಲಿ ಬದಲಾವಣೆ
ಮಾನವ ಸರಪಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುವುದರಿಂದ ಒಂದು ಗಂಟೆ ಕಾಲ ವಾಹನಗಳು ದ್ವಿಪಥದಲ್ಲಿ ಸಂಚರಿಸಲಿವೆ. ಉಡುಪಿಯಿಂದ ಬೈಂದೂರಿಗೆ ಹೋಗುವಾಗ ಚತುಷ್ಪಥ ರಸ್ತೆಯ ಬಲಭಾಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಅಲ್ಲಿ ಮಾನವ ಸರಪಳಿ ಇರಲಿದೆ. ಸಮರ್ಥವಾಗಿ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.

ಶಾಲಾ ಕಾಲೇಜು, ಸಂಘ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ. ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳು ಇದನ್ನು ನಿರ್ವಹಿಸಲಿದ್ದು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪ್ರತಿ 100 ಮೀಟರ್‌ಗೆ ಓರ್ವ ಸೆಕ್ಷನ್‌ ಆಫೀಸರ್‌, ಪ್ರತಿ 1 ಕಿ.ಮೀ.ಗೆ ಓರ್ವ ಏರಿಯಾ ಆಫೀಸರ್‌, ಪ್ರತಿ 5 ಕಿ.ಮೀ.ಗೆ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರ ನಿಯೋಜನೆಯಾಗಿದೆ. ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ, ತುರ್ತು ಸೇವೆಗೆ ಆ್ಯಂಬುಲೆನ್ಸ್‌ ಕೂಡ ಇರಲಿದೆ. ಜಿಲ್ಲೆಯ ವಿವಿಧ ಸಾಂಪ್ರದಾಯಿಕ ಕಲೆಗಳ ಅನಾವರಣವೂ ನಡೆಯಲಿದೆ. ಡ್ರೋನ್‌ ಶೂಟಿಂಗ್‌ ಮಾಡಲಿದ್ದೇವೆ ಎಂದರು.

ಗಿಡ ನೆಡುವ ಕಾರ್ಯಕ್ರಮ
ಮಾನವ ಸರಪಳಿ ಕಾರ್ಯಕ್ರಮ ಮುಗಿದ ಕೂಡಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಿದ್ದೇವೆ. ಎಲ್ಲಿಲ್ಲಿ ಸಾಧ್ಯವೋ ಅಲ್ಲೆಲ್ಲ ಅರಣ್ಯ ಇಲಾಖೆ ಸಹಕಾರದೊಂದಿಗೆ ಗಿಡ ನೆಡಲಿದ್ದೇವೆ ಎಂದರು. ಜಿಲ್ಲಾ ಪಂಚಾಯತ್‌ನ ಚೀಫ್ ಪ್ರೋಗ್ರಾಂ ಆಫೀಸರ್‌ (ಸಿಪಿಒ) ಡಾ| ಉದಯಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.

ಸ್ವಚ್ಛತಾ ಹೀ ಸೇವಾ ಪ್ರಾಕ್ಷಿಕ
ಕೇಂದ್ರ ಹಾಗೂ ರಾಜ್ಯ ಸರಕಾದ ಸೂಚನೆಯಂತೆ ಸೆ.14ರಿಂದ ಅ.1ರ ವರೆಗೂ ಜಿಲ್ಲಾದ್ಯಂತ ಸ್ವಚ್ಛತಾ ಅಭಿಯಾನವು ಸ್ವಭಾವ್‌ ಸ್ವಚ್ಛತಾ– ಸಂಸ್ಕಾರ್‌ ಸ್ವಚ್ಛತಾ ಘೋಷವಾಕ್ಯದಡಿ ಕಾರ್ಯಕ್ರಮ ನಡೆಯಲಿದೆ. ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತೆ , ಸ್ಪರ್ಧೆ, ವಾಕಥಾನ್‌, ಗಿಡ ನೆಡುವುದು ಇತ್ಯಾದಿ ನಡೆಯಲಿವೆ. ಸಫಾಯಿ ಮಿತ್ರಾ ಸುರûಾ ಶಿಬಿರಗಳು, ಸಾರ್ವಜನಿಕ ಶೌಚಾಲಯಗಳ ಸ್ವಚ್ಛತೆ , ರೈಲು ನಿಲ್ದಾಣ, ಜಲಮೂಲಗಳ ಸ್ವತ್ಛತೆ ನಡೆಯಲಿದೆ. ಶಾಲೆಗಳಲ್ಲಿ ಮಕ್ಕಳಿಗೆ ಸ್ವತ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯವೂ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ತಿಳಿಸಿದರು.

ದಕ್ಷಿಣ ಕನ್ನಡ: 130 ಕಿ.ಮೀ. ಉದ್ದದ ಮಾನವ ಸರಪಳಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂಲ್ಕಿ ತಾಲೂಕಿನ ಹೆಜಮಾಡಿ ಟೋಲ್‌ಗೇಟ್‌ನಿಂದ ಸುಳ್ಯ ತಾಲೂಕಿನ ಸಂಪಾಜೆ ಗೇಟ್‌ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ 130 ಕಿ.ಮೀ. ವರೆಗೆ 1 ಲಕ್ಷಕ್ಕೂ ಹೆಚ್ಚು ಜನರಿಂದ ಬೃಹತ್‌ ಮಾನವ ಸರಪಳಿ ನಿರ್ಮಿಸಲಾಗುವುದು.

ಇದನ್ನು ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಸಿದ್ಧತೆ ಮಾಡಲಾಗಿದೆ. ಸರಕಾರೇತರ ಸಂಸ್ಥೆಗಳು, ಸಾರ್ವಜನಿಕ ವಲಯ ಉದ್ಯಮಗಳು, ಖಾಸಗಿ ವಲಯ, ನಾಗರಿಕ ಸಮಾಜ ಮತ್ತು ವಿಶೇಷವಾಗಿ ಹಿಂದುಳಿದ ಮತ್ತು ದುರ್ಬಲ ವರ್ಗಗಳ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸಂಘ ಸಂಸ್ಥೆಗಳು, ಹಾದು ಹೋಗುವ ಗ್ರಾಮ ಪಂಚಾಯತ್‌ ಅಥವಾ ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಾರ್ವಜನಿಕರು, ಸ್ವಸಹಾಯ ಸಂಘಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಎಲ್ಲ ಇಲಾಖೆಗಳ ಅಧಿಕಾರಿ ಸಿಬಂದಿ ಸೇರಿದಂತೆ ಪ್ರತಿಯೊಬ್ಬರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅತ್ಯಂತ ಯಶಸ್ವಿಯಾಗಿ ಆಚರಣೆಯಾಗುವಂತೆ ಕೈಜೋಡಿಸಬೇಕು.

ಮಾನವ ಸರಪಳಿ ಜತೆಗೆ ಜಿಲ್ಲಾದ್ಯಂತ ಗಿಡನೆಡುವ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ.ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಎಕ್ಸ್‌, ಇನ್‌ಸ್ಟ್ರಾಗ್ರಾಂ, ಫೇಸ್‌ಬುಕ್‌ನಲ್ಲಿ ಹ್ಯಾಶ್‌ಟ್ಯಾಗ್‌ #Karnataka Democracy Day 2024 ಉಪಯೋಗಿಸಿ ಹಂಚಿಕೊಳ್ಳ ಬಹುದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.