Dengue ತುರ್ತುಸ್ಥಿತಿ: ಸಂಸದ ಡಾ.ಸಿ.ಎನ್. ಮಂಜುನಾಥ್ ಸಲಹೆ
ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ , ಕಾರ್ಯಪಡೆ ರಚಿಸಲು ಸರಕಾರಕ್ಕೆ ಸಂಸದ ಆಗ್ರಹ
Team Udayavani, Jul 7, 2024, 7:30 AM IST
ಬೆಂಗಳೂರು: ಡೆಂಗ್ಯೂ ನಿಯಂತ್ರಣಕ್ಕೆ ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ ಆಗಬೇಕು. ಸರಕಾರ ತತ್‌ಕ್ಷಣವೇ ರಾಜ್ಯದಲ್ಲಿ “ವೈದ್ಯಕೀಯ ತುರ್ತು ಪರಿಸ್ಥಿತಿ’ (ಮೆಡಿಕಲ್ ಎಮರ್ಜೆನ್ಸಿ) ಘೋಷಿಸಬೇಕು ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಆಗ್ರಹಿಸಿದ್ದಾರೆ.
ಡೆಂಗ್ಯೂ ಜ್ವರ ನಿಯಂತ್ರಣ ಎಂದರೆ ಸೊಳ್ಳೆಗಳ ನಿಯಂತ್ರಣ. ಡೆಂಗ್ಯೂ ಕಾಯಿಲೆಗೆ ನಿರ್ದಿಷ್ಟವಾದ ಚಿಕಿತ್ಸೆ ಇಲ್ಲ. ಸೊಳ್ಳೆಗಳ ನಿಯಂತ್ರಣ ಬಹಳ ಮುಖ್ಯ. ಇಲ್ಲವಾದರೆ ಮಾರಕ ಕಾಯಿಲೆಗಳಾದ ಚಿಕೂನ್ ಗುನ್ಯಾ, ಝೀಕಾ ವೈರಸ್ ಹರಡಬಹುದು ಎಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಎಚ್ಚರಿಸಿದರು. ಡೆಂಗ್ಯೂಗೆ ತುರ್ತು ಚಿಕಿತ್ಸೆಯ ಅಗತ್ಯವಿದೆ ಎಂದ ಡಾ. ಮಂಜುನಾಥ್, ಇದರ ನಿಯಂತ್ರಣಕ್ಕಾಗಿ ರಾಜ್ಯ ಸರಕಾರಕ್ಕೆ ಹತ್ತಾರು ಸಲಹೆಗಳನ್ನು ನೀಡಿದ್ದಾರೆ.
ಪ್ರಮುಖ ಸಲಹೆಗಳೇನು?
– ಡೆಂಗ್ಯೂಗೆ ಕೋವಿಡ್ ಮಾದರಿ ಚಿಕಿತ್ಸಾ ವ್ಯವಸ್ಥೆ ಜಾರಿಗೆ ತರಬೇಕು.
– ರಾಜ್ಯ ಮಟ್ಟದಲ್ಲಿ ಕಾರ್ಯಪಡೆ ರಚಿಸಬೇಕು.
– ಡೆಂಗ್ಯೂ ಪರೀಕ್ಷೆಗೆ ಹೆಚ್ಚಿನ ಹಣ ವಸೂಲಿ ಮಾಡುವ ಲ್ಯಾಬ್‌ಗಳನ್ನು ಮುಚ್ಚಬೇಕು.
– ಸ್ಲಂ, ವಠಾರದಂತಹ ಜನನಿಬಿಡ ಪ್ರದೇಶಗಳಲ್ಲಿ ಸೊಳ್ಳೆ ಪರದೆ ಉಚಿತವಾಗಿ ಹಂಚಬೇಕು.
– ಅರ್ಧಕ್ಕೆ ನಿಂತ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ ಸೊಳ್ಳೆ ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು.
– ಶಾಲಾ-ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿ ಆಡಳಿತ ಮಂಡಳಿಗಳ ಜತೆ ಸಭೆ ನಡೆಸಬೇಕು.
ಐಸಿಯುನಲ್ಲಿ ಸರಕಾರ: ಅಶ್ವತ್ಥನಾರಾಯಣ್
ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಮಾತನಾಡಿ, ರಾಜ್ಯ ಸರಕಾರ ದಿವಾಳಿಯ ಅಂಚಿನಲ್ಲಿದೆ. ಸರಕಾರ, ಆರೋಗ್ಯ ಇಲಾಖೆ ಐಸಿಯುಗೆ ದಾಖಲಾದಂತಿದೆ ಎಂದು ಟೀಕಿಸಿದರು. ಎಲ್ಲ ಜಿಲ್ಲೆಗಳಲ್ಲಿ ಡೆಂಗ್ಯೂ ಮಹಾಮಾರಿ ಇದೆ. ಒಂದು ತಿಂಗಳಿನಿಂದ ಅದು ರಾಜ್ಯವನ್ನೇ ಆವರಿಸಿದೆ. ಮಲೇರಿಯಾ, ವೈರಲ್ ಜ್ವರ ಸಾಮಾನ್ಯವಾಗಿ ಋತುವಿಗೆ ಅನುಗುಣವಾಗಿ ಬರುತ್ತವೆ. ಸರಕಾರ ಇದರ ಕುರಿತು ಮುನ್ನೆಚ್ಚರಿಕೆ ಕ್ರಮ ವಹಿಸಿಲ್ಲ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇವಲ ಪ್ರವಾಸದಲ್ಲಿ ಇರುತ್ತಾರೆ. ತಮ್ಮ ಇಲಾಖೆಯ ಜವಾಬ್ದಾರಿ ಕಡೆ ಗಮನ ಹರಿಸುತ್ತಿಲ್ಲ ಎಂದು ಆಕ್ಷೇಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.