ಡಿನೋಟಿಫಿಕೇಷನ್ ಪ್ರಕರಣ:ಖುದ್ದು ಹಾಜರಾತಿಯಿಂದ ಎಚ್‌ಡಿಕೆಗೆ ವಿನಾಯಿತಿ
Team Udayavani, Oct 1, 2019, 7:45 PM IST
ಬೆಂಗಳೂರು: ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಖುದ್ದು ಹಾಜರಾತಿಯಿಂದ ಹೈಕೋರ್ಟ್ ವಿನಾಯಿತಿ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ವಿಶೇಷ ನ್ಯಾಯಾಲಯ ಜಾರಿಗೊಳಿಸಿರುವ ಸಮನ್ಸ್ ರದ್ದುಪಡಿಸುವಂತೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಪಿ.ಜಿ.ಎಂ. ಪಾಟೀಲ್ ಅವರಿದ್ದ ರಜಾ ಕಾಲದ ಏಕಸದಸ್ಯ ನ್ಯಾಯಪೀಠ, ಈ ವಿನಾಯಿತಿ ನೀಡಿ ವಿಚಾರಣೆಯನ್ನು ಅ.14ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಕುಮಾರಸ್ವಾಮಿ ಪರ ವಕೀಲರು ವಾದ ಮಂಡಿಸಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ತಡೆ ನೀಡುವಂತೆ ಕೋರಿದರು. ಆದರೆ ಮನವಿಯನ್ನು ಪುರಸ್ಕರಿಸಲು ನಿರಾಕರಿಸಿದ ನ್ಯಾಯಪೀಠ, ತಡೆ ಬೇಕಿದ್ದರೆ ಅದನ್ನು ರಜಾ ಕಾಲದ ಅನಂತರದ “ನಿಯಮಿತ ಪೀಠ’ದಲ್ಲಿ (ರೆಗ್ಯೂಲರ್ ಬೆಂಚ್) ಕೇಳಿಕೊಳ್ಳಿ. ಸದ್ಯಕ್ಕೆ ಖುದ್ದು ಹಾಜರಾತಿಯಿಂದ ವಿನಾಯಿತಿ ಕೊಡಬಹುದಷ್ಟೇ ಎಂದು ವಿಶೇಷ ನ್ಯಾಯಾಲಯದ ವಿಚಾರಣೆಗೆ ಖುದ್ದು ಹಾಜರಾತಿಯಿಂದ ನಾಲ್ಕು ವಾರ ವಿನಾಯಿತಿ ನೀಡಿ ಆದೇಶಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅ.4ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕುಮಾರಸ್ವಾಮಿಯವರಿಗೆ ಸಮನ್ಸ್ ಜಾರಿಗೊಳಿಸಿತ್ತು. ಹೈಕೋರ್ಟ್ ಆದೇಶದಿಂದ ಇದೀಗ ಮಾಜಿ ಮುಖ್ಯಮಂತ್ರಿಯವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Abhimanyu Kashinath; ಸೂರಿ ಲವ್ ಗೆ ಉಪ್ಪಿ ಮೆಚ್ಚುಗೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.