Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

ಸ್ವಲ್ಪ ಧಡೂತಿ ದೇಹದವನಾದರೂ ಕೆಲಸಕ್ಕೇನೂ ಕಳ್ಳಾಟವಿರಲಿಲ್ಲ

Team Udayavani, Sep 14, 2024, 12:50 PM IST

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

ಇದೊಂದು ಚಿಕ್ಕ ಊರು. ಬೃಹತ್ತಾಗಿದ್ದ ಅಡವಿಗೆ ಹೊಂದಿಕೊಂಡಿದ್ದ ಗ್ರಾಮ. ಜನಸಂಖ್ಯೆಯೂ ತೀರಾ ಕಡಿಮೆಯಿತ್ತು. ಮೂಲತಃ ವ್ಯವಸಾಯವೇ ಪ್ರಮುಖ ಕಸುಬಾಗಿತ್ತಾದರೂ ಕೆಲವರು ಕಾಡಿಗೆ ತೆರಳಿ ಒಣಮರಗಳನ್ನು ಕಡಿದು ಕಟ್ಟಿಗೆಯನ್ನು ಹೊತ್ತೂಯ್ದು ಕಾಡಿನಿಂದಾಚೆ ಇದ್ದ ನಗರದಲ್ಲಿ ಮಾರಿ ಜೀವನ ಸಾಗಿಸುತ್ತಿದ್ದರು. ಅಂತವರಲ್ಲಿ ನಿಜಗುಣನೂ ಒಬ್ಬ.

ಸ್ವಲ್ಪ ಧಡೂತಿ ದೇಹದವನಾದರೂ ಕೆಲಸಕ್ಕೇನೂ ಕಳ್ಳಾಟವಿರಲಿಲ್ಲ. ಅವನಿಗೆ ಅವನ ಮೈಯೊಂದೇ ಸ್ವಲ್ಪ ಭಾರವೆನಿಸಿ ಕೆಲಸದ ನಡುವೆ ಆಗಾಗ್ಗೆ ವಿಶ್ರಾಂತಿ ಪಡೆಯುತ್ತಿದ್ದುದೊಂದೇ ಅವನ ಅವಗುಣ. ಇಂತಹ ನಿಜಗುಣನು ಅಂದೂ ಸಹ ತನ್ನ ನಿತ್ಯದ ಕಾರ್ಯಕ್ಕಾಗಿ ಕಾಡಿಗೆ ತೆರಳಲು ಸಿದ್ಧವಾದನು. ಅವನ ತಾಯಿ ಅವನಿಗೆ ದೊಡ್ಡದೊಂದು ಡಬ್ಬಿಯಲ್ಲಿ ಆಹಾರವನ್ನು ತುಂಬಿಕೊಟ್ಟು ಮನೆಯಿಂದ ಬೀಳ್ಕೊಟ್ಟಳು. ಕಾಡಿನೊಳಗೆ ಸ್ವಲ್ಪದೂರದ ವರೆಗೂ ನಡೆದ ನಿಜಗುಣನಿಗೆ ತಲೆಯ ಮೇಲೆ ಹೊತ್ತಿದ್ದ ಡಬ್ಬಿ ಹಾಗೂ ಬೃಹತ್‌ ಗಾತ್ರದ ಮೈಯಿಂದಾಗಿ ದೂರ ನಡೆಯುವುದು ಆಯಾಸವಾಗತೊಡಗಿತು.

ಸಮೀಪದ ಮರದ ನೆರಳೊಂದರಡಿ ಕುಳಿತ ನಿಜಗುಣನು ಅಮ್ಮ ಕೊಟ್ಟಿದ್ದ ಬುತ್ತಿಯ ಡಬ್ಬಿಯನ್ನು ಬಿಚ್ಚಿ ಅದರಲ್ಲಿದ್ದ ಆಹಾರವನ್ನು ಸೇವಿಸಿದನು. ಕೆಲವು ಸಮಯದ ವಿಶ್ರಾಂತಿಯನ್ನೂ ಪಡೆದ ಅನಂತರ ಅವನಲ್ಲಿ ಹೊಸದೊಂದು ಉತ್ಸಾಹ ಮೂಡಿತು. ತಲೆಯ ಮೇಲಿದ್ದಾಗ ಭಾರವೆನಿಸಿದ್ದ ಆಹಾರವು ಹೊಟ್ಟೆಗಿಳಿದಾಗ ಭಾರವೆನಿಸಲಿಲ್ಲ.

ತನ್ನೆಲ್ಲ ಆಯಾಸವನ್ನೂ ಮರೆತ ಅವನು ಕಟ್ಟಿಗೆಯನ್ನು ಕಡಿದು ಗಂಟುಕಟ್ಟಿ ಹೊತ್ತೂಯ್ದು ನಗರದಲ್ಲಿ ಮಾರಿ ಬಂದನು. ಇಲ್ಲಿ ನಾವು ತಿಳಿಯಬಹುದಾದ ಅಂಶವೇನೆಂದರೆ ನಾವೂ ಸಹ ನಿಜಗುಣನಂತೆಯೇ ನಮ್ಮ ಜ್ಞಾನ ಹಾಗೂ ಬುದ್ಧಿ ಮಟ್ಟವನ್ನು ಕೇವಲ ತಲೆಯ ಮೇಲೆ ಬುತ್ತಿಯನ್ನು ಹೊತ್ತಂತೆ ಹೊತ್ತು ಗರ್ವದಿಂದ ತಿರುಗುತ್ತಿರುತ್ತೇವೆ. ಅದರಿಂದ ನಮಗೆ ಕೇಡಾಗುವುದೇ ವಿನಃ ಯಾವುದೇ ಲಾಭವಾಗದು.

ಅದರ ಬದಲಿಗೆ ಆ ಜ್ಞಾನವನ್ನೇ ಬಳಸಿಕೊಂಡು ಅದರ ಆಶಯದಂತೆ ಸತ್ಯ ಹಾಗೂ ಸಹಕಾರಗುಣವನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕಿದರೆ ಜೀವನವೂ ಸಹ ತ್ರಾಸದಾಯಕವಾಗಿರದೇ ಸಂತಸ ಹಾಗೂ ಸುಖಕರವಾಗುತ್ತದೆ. ಕಲಿತ ಅಥವಾ ತಿಳಿದ ಜ್ಞಾನವು ನಮ್ಮ ಪ್ರಯೋಜನಕ್ಕೆ ಬಳಕೆಯಾದಾಗಲೇ ಅದು ಶ್ರೇಷ್ಠತೆಯನ್ನು ಗಳಿಸುತ್ತದೆ.

ಟಾಪ್ ನ್ಯೂಸ್

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಆಕಾಶದ ಮೈದಾನದಲ್ಲಿ ಸಾಹಸ ಯಾತ್ರೆ-ಬಾನಂಗಳದಲ್ಲಿ ಬಣ್ಣಗಳ ಚಿತ್ತಾರ

Desi Swara: ಆಕಾಶದ ಮೈದಾನದಲ್ಲಿ ಸಾಹಸ ಯಾತ್ರೆ-ಬಾನಂಗಳದಲ್ಲಿ ಬಣ್ಣಗಳ ಚಿತ್ತಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.