Dharmasthala ಯೋಜನೆಯ ಕಾರ್ಯಕ್ರಮ 1,030 ಶಾಲೆಗಳಿಗೆ ಜ್ಞಾನದೀಪ ಅತಿಥಿ ಶಿಕ್ಷಕರು
Team Udayavani, Jul 31, 2024, 6:30 AM IST
ಬೆಳ್ತಂಗಡಿ: ರಾಜ್ಯಾದ್ಯಂತ ಗ್ರಾಮೀಣ ಶಾಲೆಗಳ ಶಿಕ್ಷಕರ ಕೊರತೆಯನ್ನು ಗಮನಿಸಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 1,030 ಶಾಲೆಗಳಿಗೆ ಸಂಸ್ಥೆಯ ವತಿಯಿಂದ ಜ್ಞಾನದೀಪ ಅತಿಥಿ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದೆ ಎಂದು ಶ್ರೀ ಕ್ಷೇ ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದರು.
61.16 ಕೋಟಿ ರೂ. ಸಹಾಯಧನ
30 ವರ್ಷಗಳ ಹಿಂದೆ ಜಾರಿಗೆ ತರಲಾಗಿದ್ದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮಟ್ಟ ಸುಧಾರಣೆ ಹಾಗೂ ಕಲಿಕಾ ವಾತಾವರಣ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಇದರಂತೆ ಶಾಲಾ ಮೂಲಭೂತ ಸೌಕರ್ಯಗಳಾದ ಶಾಲಾ ಕೊಠಡಿ, ಶೌಚಾಲಯ, ಆಟದ ಮೈದಾನ, ಶಾಲಾ ಆವರಣ, ವಿದ್ಯುದ್ಧೀಕರಣ, ಕುಡಿಯುವ ನೀರು, ರಂಗಮಂದಿರ, ಶಾಲಾ ಕಟ್ಟಡಗಳ ದುರಸ್ತಿ, ಡೆಸ್ಕ್-ಬೆಂಚ್‌ಗಳ ಒದಗಣೆ ಮೊದಲಾದವುಗಳಿಗೆ ಈ ಕಾರ್ಯಕ್ರಮದ ಮೂಲಕ ಈವರೆಗೆ ಒಟ್ಟು 61.16 ಕೋಟಿ ರೂ. ಮೊತ್ತದ ಸಹಾಯಧನ ನೀಡಲಾಗಿದೆ.
21.33 ಕೋಟಿ ರೂ. ಮೊತ್ತ ವಿನಿಯೋಗ
ಶಿಕ್ಷಕರ ತೀವ್ರ ಕೊರತೆಯಿರುವ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ನಿಯೋಜನೆ ಮಾಡಲಾಗುತ್ತಿದೆ. ಈ ಶಿಕ್ಷಕರಿಗೆ ಮಾಸಿಕ ಗೌರವಧನವನ್ನು ಸಂಸ್ಥೆಯ ವತಿಯಿಂದ ಪಾವತಿಸಲಾಗುತಿದೆ. ಇದಕ್ಕಾಗಿಯೇ ಸಂಸ್ಥೆಯಿಂದ ಇದುವರೆಗೆ ಒಟ್ಟು 21.33 ಕೋಟಿ ರೂ. ಮೊತ್ತ ವಿನಿಯೋಗಿಸಲಾಗಿದೆ.
ಜ್ಞಾನದೀಪ ಶಿಕ್ಷಕರ ಮೂಲಕ ವಿದ್ಯಾಭ್ಯಾಸದ ಮಧ್ಯದಲ್ಲಿ ಶಾಲೆ ಬಿಟ್ಟ 6ರಿಂದ 14 ವರ್ಷ ಪ್ರಾಯದ ಮಕ್ಕಳ ಮನೆ ಸಂದರ್ಶಿಸಿ, ಕಾರಣ ತಿಳಿಯುವುದು ಹಾಗೂ ಕುಟುಂಬದ ಸಂಪರ್ಕ ಬೆಳೆಸಿ ಅವರನ್ನು ಮತ್ತೆ ಶಾಲೆಗೆ ಸೇರ್ಪಡೆಗೊಳಿಸಲು ಶ್ರಮಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಪ್ರತೀ ವಿದ್ಯಾರ್ಥಿ ಯೂ ವಿದ್ಯಾಭ್ಯಾಸ ಪಡೆಯಲು ಪ್ರೇರಣೆ
ನೀಡುವಂತೆ ಹೆತ್ತವರ ಮನವೊಲಿಸು ವುದು, ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಒಟ್ಟು ಹಾಜರಾತಿ ವೃದ್ಧಿಸುವ ಕಾರ್ಯಕ್ರಮ, ಶಾಲೆಯನ್ನು ಆಕರ್ಷಕ ಕೇಂದ್ರವಾಗುವಂತೆ ಮಾಡುವಲ್ಲಿ ಪ್ರಯತ್ನ, ರಾಷ್ಟ್ರೀಯ ದಿನಾಚರಣೆಗಳು, ಶಾಲಾ ವರ್ಧಂತ್ಯುತ್ಸವ, ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಲ್ಲಿ ಸಹಕರಿಸಲಾಗುತ್ತಿದೆ.
240 ಶಾಲೆಗಳ ಏಕೋಪಾಧ್ಯಾಯ ಶಾಲೆ
ರಾಜ್ಯಾದ್ಯಂತ ವಿವಿಧ ಶಾಲೆಗಳಿಗೆ ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು 1,030 ಜ್ಞಾನದೀಪ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಈ ಪೈಕಿ 240 ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿರುವುದು ಉಲ್ಲೇಖನೀಯವಾಗಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಈ ಶಿಕ್ಷಕರು ಆಯಾ ಶಾಲೆಗಳಿಗೆ ಮಹತ್ತರ ಕೊಡುಗೆ ನೀಡಲಿದ್ದಾರೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
Sullia: ಪರಾರಿಯಾಗುತ್ತಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
Puttur: ಬಸ್ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.