ತೈಲೋತ್ಪನ್ನ ಮಾರಾಟದಿಂದ ಸಂಗ್ರಹವಾದ ಹಣ ಅಭಿವೃದ್ಧಿ ಕಾರ್ಯಕ್ಕೆ ಬಳಕೆ : ಧರ್ಮೇಂದ್ರ ಪ್ರಧಾನ್
Team Udayavani, Jun 14, 2021, 7:40 AM IST
ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಕಳವಳಕಾರಿಯಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಒಪ್ಪಿಕೊಂಡಿದ್ದಾರೆ. ಆದರೆ ತೈಲೋತ್ಪನ್ನಗಳ ಮಾರಾಟದಿಂದ ಸಂಗ್ರಹವಾಗಿರುವ ಮೊತ್ತವನ್ನು ಅಭಿವೃದ್ಧಿ ಕಾರ್ಯಕ್ಕೆ ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
1ವರ್ಷದ ಅವಧಿಯಲ್ಲಿ 35 ಸಾವಿರ ಕೋಟಿ ರೂ. ಮೊತ್ತವನ್ನು ಲಸಿಕೆಗಾಗಿ ಬಳಕೆ ಮಾಡಲಾಗಿದೆ. 1 ಲಕ್ಷ ಕೋಟಿ ರೂ. ಮೊತ್ತವನ್ನು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿಯಲ್ಲಿ ಬಡವರಿಗೆ ಉಚಿತ ಪಡಿತರ ನೀಡಿಕೆಗೆ ನೀಡಲಾಗಿದೆ.
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಮೊತ್ತ ಜಮೆ ಮಾಡಲಾಗಿದೆ ಎಂದು ಹೊಸದಿಲ್ಲಿ ಯಲ್ಲಿ ತಿಳಿಸಿದ್ದಾರೆ.
ತೈಲ ದರ ಇಳಿಕೆ ಮಾಡಬೇಕು ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ ಆಡಳಿತ ಇರುವ ರಾಜಸ್ಥಾನ, ಮಹಾರಾಷ್ಟ್ರಗಳಲ್ಲಿ ಮೊದಲು ತೆರಿಗೆ ಪ್ರಮಾಣ ಇಳಿಕೆ ಮಾಡಲಿ ಎಂದರು. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಪೆಟ್ರೋಲ್ ದರ 100 ರೂ. ಆಗಿದೆ ಎಂಬ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.