Disabilities Day: ಅಂಗವಿಕಲರ ಆರೈಕೆದಾರರಿಗೆ ಮಾಸಿಕ ಸಾವಿರ ರೂಪಾಯಿ ಭತ್ತೆ: ಸಿದ್ದರಾಮಯ್ಯ

ವಿಶೇಷ ಚೇತನರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿ ರೂ.ಗಳನ್ನು ಮಂಜೂರು, ವಿಕಲಚೇತನರ ದಿನಾಚರಣೆಯಲ್ಲಿ ಸಿಎಂ ಘೋಷಣೆ

Team Udayavani, Dec 4, 2024, 7:10 AM IST

Handicap-prog-CM

ಬೆಂಗಳೂರು: ದೇಶದಲ್ಲಿಯೇ ಮೊದಲ ಬಾರಿಗೆ ನಾಲ್ಕು ವಿಧವಾದ ಅಂಗವಿಕಲರ ಆರೈಕೆದಾರರಿಗೆ ಪ್ರತೀ ತಿಂಗಳು 1 ಸಾವಿರರೂ. “ಆರೈಕೆದಾರರ ಭತ್ತೆ’ ನೀಡುವ ಯೋಜನೆಯನ್ನು ರಾಜ್ಯ ಸರಕಾರ ಘೋಷಿಸಿದೆ. ಮಂಗಳವಾರ ನಡೆದ “ವಿಶ್ವ ವಿಕಲಚೇತನರ ದಿನಾಚರಣೆ-2024′ ಸಮಾರಂಭದಲ್ಲಿ ಐವರಿಗೆ ಸಾಂಕೇತಿಕವಾಗಿ ಈ ಭತ್ತೆಯನ್ನು ವಿತರಿಸಲಾಯಿತು.

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ “ವಿಶ್ವ ವಿಕಲಚೇತನರ ದಿನಾಚರಣೆ-2024′ ಸಮಾರಂಭವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2023-24ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ 7 ಜಿಲ್ಲೆಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ತೆರೆಯಲಾಗಿದ್ದು, ಇನ್ನೂ 13 ಹೊಸ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಲಾಗಿದೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಅವಲಂಬಿತರಿಗೆ ನೀಡಲಾಗುವ ಮರಣ ಪರಿಹಾರ ನಿಧಿಯನ್ನು 2023ನೇ ಸಾಲಿನಲ್ಲಿ 50 ಸಾವಿರದಿಂದ 1 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ವಿವರಿಸಿದರು.

ವಿಕಲಚೇತನರಿಗೆ ಸರಕಾರಿ ಉದ್ಯೋಗಗಳಲ್ಲಿ “ಸಿ’ ಮತ್ತು ಡಿ’ ಸಮೂಹದ ಹುದ್ದೆಗಳಲ್ಲಿ ಶೇ. 5 ಹಾಗೂ “ಎ’ ಮತ್ತು “ಬಿ’ ಹುದ್ದೆಗಳಲ್ಲಿ ಶೇ. 4ರಷ್ಟು ಮೀಸಲಾತಿ ನೀಡಲಾಗಿದೆ. ಅಲ್ಲದೆ ಇವರು ನಿರ್ವಹಿಸಬಹುದಾದಂತಹ ಹುದ್ದೆಗಳನ್ನು ಗುರುತಿಸಲು ರಾಜ್ಯ ಮಟ್ಟದಲ್ಲಿ ತಜ್ಞರ ಸಮಿತಿ ರಚಿಸಲಾಗಿದ್ದು, ಇಲಾಖೆಗಳಲ್ಲಿನ ಹುದ್ದೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ವಿಕಲಚೇತನರ ಅನುಕೂಲಕ್ಕಾಗಿ ವಾಹನಗಳನ್ನು ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಶ್ರೇಯೋಭಿವೃದ್ಧಿಗೆ 44 ಕೋಟಿ ರೂ. ಮಂಜೂರು ಭರವಸೆ
ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ, ಅವರು ಸಮಾಜದ ಆಸ್ತಿ. ವಿಶೇಷ ಚೇತನರ ಸಶಕ್ತೀಕರಣಕ್ಕೆ ಸರಕಾರ ಸದಾ ಬದ್ಧವಾಗಿದ್ದು, ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿ ರೂ.ಗಳನ್ನು ಮಂಜೂರು ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು.
ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರಕಾರದ ಕರ್ತವ್ಯ ಎಂದರು.

ರಾಜಿ ಬೇಡ: ಡಿಸಿಎಂ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತನಾಡಿ, ಅಂಗವೈಕಲ್ಯ ವರವೂ ಅಲ್ಲ, ಶಾಪವೂ ಅಲ್ಲ. ದೇವರು ಜೀವನದಲ್ಲಿ ನೀಡಿರುವ ಪರೀಕ್ಷೆ. ಇದನ್ನು ಮೆಟ್ಟಿನಿಂತು ಸಾಧನೆಗೈದ ಪುಟ್ಟರಾಜ ಗವಾಯಿ, ಪಂಚಾಕ್ಷರಿ ಗವಾಯಿ ಮತ್ತಿತರ ಅನೇಕರು ಸಮಾಜಕ್ಕೆ ಪ್ರೇರಣೆಯಾಗಿದ್ದಾರೆ ಎಂದರು. ನಿಮಗೆಲ್ಲ ಗಣಪತಿ ಸ್ಫೂರ್ತಿ. ಆನೆಯ ತಲೆ, ಸೊಂಡಿಲು, ಮುರಿದ ದಂತವಿದ್ದರೂ ಆತನನ್ನು ವಿಘ್ನ ನಿವಾರಿಸುವ ನಾಯಕ ಎಂದು ಪೂಜಿಸುತ್ತೇವೆ. ಅದೇ ರೀತಿ ನಿಮ್ಮಲ್ಲಿ ಮನೋಬಲ ಹೆಚ್ಚಾಗಿರಬೇಕು. ನಿಮಗೆ ಎಲ್ಲ ರೀತಿಯ ಸಾಧನೆ ಮಾಡುವ ಶಕ್ತಿ ಇದೆ. ಸಾಧನೆಯ ಹಾದಿಯಲ್ಲಿ ಯಾವುದೇ ರಾಜಿ ಬೇಡ ಎಂದು ವಿಶೇಷ ಚೇತನ ಮಕ್ಕಳಲ್ಲಿ ವಿಶ್ವಾಸ ತುಂಬಿದರು.

ಟಾಪ್ ನ್ಯೂಸ್

Belagavi: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ ಶಿಕ್ಷೆ

Belagavi: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ ಶಿಕ್ಷೆ

13-koratagere

CM, DCM, ಗೃಹಸಚಿವರ ವಿರೋಧ ಪೋಸ್ಟ್ ;10 ಜಿಲ್ಲೆಯ 15 ಠಾಣೆಗಳಲ್ಲಿ ಪ್ರಕರಣ ದಾಖಲು

MH-Govt-Gov

Mahayuti Claim: ಮಹಾರಾಷ್ಟ್ರಕ್ಕಾಗಿ ನಾವು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ: ಫಡ್ನವೀಸ್

Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ

Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ

12-dandeli

Dandeli: ಪಿಎಸ್ಐ ಕಿರಣ್ ಪಾಟೀಲ್ ನೇತೃತ್ವದಲ್ಲಿ ಮಿಂಚಿನ ಕಾರ್ಯಾಚರಣೆ

Allu Arjun: ʼಪುಷ್ಪ-2ʼ ಬಳಿಕ ಅಲ್ಲು ಅರ್ಜುನ್‌ ಮುಂಬರುವ ಸಿನಿಮಾಗಳು ಯಾವುವು?

Allu Arjun: ʼಪುಷ್ಪ-2ʼ ಬಳಿಕ ಅಲ್ಲು ಅರ್ಜುನ್‌ ಮುಂಬರುವ ಸಿನಿಮಾಗಳು ಯಾವುವು?

11-uv-fusion

UV Fusion: ಅವಕಾಶವು ಆಶಾದಾಯಕವಾಗಿರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ ಶಿಕ್ಷೆ

Belagavi: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ ಶಿಕ್ಷೆ

Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ

Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ

ಜೀವನ ಅತ್ಯಮೂಲ್ಯ, ಮಾದಕ ವ್ಯಸನ ಒಳ್ಳೆಯದಲ್ಲ: ವಿದ್ಯಾರ್ಥಿಗಳಿಗೆ ನಟ ಉಪೇಂದ್ರ ಕಿವಿಮಾತು

ಜೀವನ ಅತ್ಯಮೂಲ್ಯ, ಮಾದಕ ವ್ಯಸನ ಒಳ್ಳೆಯದಲ್ಲ: ವಿದ್ಯಾರ್ಥಿಗಳಿಗೆ ನಟ ಉಪೇಂದ್ರ ಕಿವಿಮಾತು

belagavi

Belagavi: ಜೀವ ವಿಮಾ ಪಾಲಿಸಿಯ ಹಣಕ್ಕಾಗಿ ಸಹೋದರನನ್ನೇ ಕೊ*ಲೆ ಮಾಡಿದ ತಮ್ಮ

9-ckm

ಪ್ರವಾಸಿಗರೇ ಗಮನಿಸಿ.. ಈ ನಾಲ್ಕು ದಿನ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

14-movie

Mugila Mallige: ನವತಂಡದ ಮುಡಿಗೆ ಮುಗಿಲ ಮಲ್ಲಿಗೆ

Belagavi: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ ಶಿಕ್ಷೆ

Belagavi: ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ ಶಿಕ್ಷೆ

13-koratagere

CM, DCM, ಗೃಹಸಚಿವರ ವಿರೋಧ ಪೋಸ್ಟ್ ;10 ಜಿಲ್ಲೆಯ 15 ಠಾಣೆಗಳಲ್ಲಿ ಪ್ರಕರಣ ದಾಖಲು

MH-Govt-Gov

Mahayuti Claim: ಮಹಾರಾಷ್ಟ್ರಕ್ಕಾಗಿ ನಾವು ಮೂವರು ಒಟ್ಟಾಗಿ ಕೆಲಸ ಮಾಡುತ್ತೇವೆ: ಫಡ್ನವೀಸ್

Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ

Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.