JDS ನಿಖಿಲ್ ಮೇಲೂ ಕೇಸ್‌ಗೆ ಚರ್ಚೆ: ಎಚ್.ಡಿ.ಕುಮಾರಸ್ವಾಮಿ ಕಿಡಿ
ಪ್ರಕರಣ ದಾಖಲಿಸುವ ಬಗ್ಗೆ ಡಿಜಿಪಿ ಕಚೇರಿಯಲ್ಲಿ ರಾತ್ರಿ 11 ಗಂಟೆವರೆಗೂ ಚರ್ಚೆ
Team Udayavani, Jul 13, 2024, 10:29 PM IST
ಬೆಂಗಳೂರು: ಎಚ್.ಡಿ. ದೇವೇಗೌಡರ ಕುಟುಂಬದಲ್ಲಿ ಎಲ್ಲರನ್ನೂ ಮುಗಿಸಿದ್ದೇವೆ. ನಿಖಿಲ್ ಒಬ್ಬ ಉಳಿದಿದ್ದಾನೆ. ಅವನನ್ನೂ ರಾಮನಗರದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಎ1 ಆರೋಪಿ ಮಾಡಲು ಹೊರಟ್ಟಿದಿರಾ? ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೊನ್ನೆ ರಾಮನಗರದಲ್ಲಿ ನಡೆದ ಪ್ರತಿಭಟನೆ ಬಗ್ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲಿಸುವ ಬಗ್ಗೆ ಡಿಜಿಪಿ ಕಚೇರಿಯಲ್ಲಿ ರಾತ್ರಿ 11 ಗಂಟೆವರೆಗೂ ಚರ್ಚೆ ಮಾಡಿದ್ದಾರೆ. ಸಚಿವರು ಹೇಳಿದ್ದಾರೆ ಎಂದು ಡಿಜಿಪಿ ಏನು ಮಾಡಲು ಹೊರಟಿದ್ದೀರಿ? ನಮ್ಮ ರಾಜ್ಯದ ಡಿಜಿಪಿ ಒಬ್ಬ ಕಾನ್ಸ್‌ಟೇಬಲ್ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಡಿಜಿಪಿಯವರು ತಮ್ಮ ಕಚೇರಿಯನ್ನು ಪೇದೆ ಕಚೇರಿ ಮಾಡಿದ್ದಾರೆ. ಡಿಜಿಪಿ ಕೆಲಸ ಮಾಡುತ್ತಾ ಇದ್ದೀರಾ ಅಥವಾ ಪೇದೆ ಕೆಲಸ ಮಾಡ್ತಾ ಇದ್ದೀರಾ ಎಂದು ಡಿಜಿಪಿ ವಿರುದ್ಧ ವಾಗ್ಧಾಳಿ ನಡೆಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಟಿ.ಎ.ಶರವಣ, ಶಾಸಕ ಶರಭಣಗೌಡ ಕಂದಕೂರ, ಪಕ್ಷದ ಹಿರಿಯ ಮುಖಂಡರಾದ ಪ್ರಕಾಶ್, ರವೀಶ್ ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.