ಅನರ್ಹ ಶಾಸಕರ ಸ್ಪರ್ಧೆ ಸಾಧ್ಯವೇ?
Team Udayavani, Sep 22, 2019, 5:28 AM IST
ಬೆಂಗಳೂರು: ಸ್ಪೀಕರ್ ಆದೇಶದಂತೆ ಅನರ್ಹ ಶಾಸಕರು ಈ ವಿಧಾನ ಸಭೆ ಅವಧಿ ಮುಗಿಯುವವರೆಗೆ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಸುಪ್ರೀಂ ವಿಚಾರಣೆ ಬಾಕಿ ಇರುವಾಗ ವೇಳಾಪಟ್ಟಿ ಪ್ರಕಟ ಸರಿಯೇ ಎಂಬ ಪ್ರಶ್ನೆ ಇದೆ. ಇದಕ್ಕೆ ಕಾನೂನು ತಜ್ಞರು ಹೇಳುವುದಿಷ್ಟು.
1. ಸುಪ್ರೀಂ ಮಧ್ಯಪ್ರವೇಶ ಮಾಡಬಹುದು
ಅರ್ಜಿ ಇತ್ಯರ್ಥವಾಗುವವರೆಗೆ ಚುನಾವಣೆ ನಡೆಸಬೇಡಿ ಎಂದು ಅನರ್ಹ ಶಾಸಕರು ಸುಪ್ರೀಂಗೆ ಮನವಿ ಮಾಡಬಹುದು. ಈ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲು ಅವಕಾಶವಿದೆ ಎಂದು ಮಾಜಿ ಅಡ್ವೊಕೇಟ್ ಜನರಲ್ ಅಶೋಕ ಹಾರನಹಳ್ಳಿ ಅಭಿಪ್ರಾಯಪಡುತ್ತಾರೆ.
2. ಚುನಾವಣೆಗೆ ತಡೆ ಅಸಾಧ್ಯ
ಸಂವಿಧಾನದ ಪರಿಚ್ಛೇದ 329 ಬಿ ಪ್ರಕಾರ ಯಾವುದೇ ಚುನಾವಣೆ ಘೋಷಣೆಯಾದ ಮೇಲೆ ತಡೆ, ಮಧ್ಯಪ್ರವೇಶ ಇಲ್ಲವೇ ಹಸ್ತಕ್ಷೇಪಕ್ಕೆ ಅವಕಾಶ ಇಲ್ಲ. ಅನರ್ಹ ಶಾಸಕರು ತಮ್ಮ ಗುರಿ ಈಡೇರಿಸಿಕೊಳ್ಳಲು ಪರಿಚ್ಛೇದ 329 ಬಿ ಬಹುದೊಡ್ಡ ಅಡ್ಡಿಯಾಗಲಿದೆ. ಅನರ್ಹ ಶಾಸಕರಿಗೆ ಸ್ಪರ್ಧಿಸಲು ಅವಕಾಶವಿಲ್ಲ ಎಂದು ಮತ್ತೂಬ್ಬ ಮಾಜಿ ಅಡ್ವೋಕೇಟ್ ಜನರಲ್ ಪ್ರೊ| ರವಿವರ್ಮ ಕುಮಾರ್ ಹೇಳುತ್ತಾರೆ.
3. ಸೀಮಿತ ಅನುಮತಿ ಕೊಡಬಹುದು
ಚುನಾವಣೆಗೆ ಸ್ಪರ್ಧಿಸುವ ಅರ್ಹತೆ ನಿಗದಿ ಪಡಿಸುವ ಅಧಿಕಾರ ವ್ಯಾಪ್ತಿ ಸ್ಪೀಕರ್‌ಗೆ ಇಲ್ಲ, ಹಾಗಾಗಿ ಅನರ್ಹತೆ ಪ್ರಕರಣದ ಅಂತಿಮ ತೀರ್ಪಿಗೆ ಒಳಪಟ್ಟು ಚುನಾವಣೆಗೆ ಸ್ಪರ್ಧಿಸುವಂತೆ ಅನರ್ಹ ಶಾಸಕರಿಗೆ ಚುನಾವಣಾ ಆಯೋಗ ಸೀಮಿತ ಅನುಮತಿ ಕೊಡಬಹುದು ಎಂದು ಸುಪ್ರೀಂಕೋರ್ಟ್ ವಕೀಲ ಕೆ. ಧನಂಜಯ ಹೇಳುತ್ತಾರೆ.
4. ಸ್ಪರ್ಧಿಸಲು ಅಡ್ಡಿ ಇಲ್ಲ
ಸುಪ್ರಿಂಕೋರ್ಟ್‌ನಲ್ಲಿ ಪ್ರಕರಣ ಇದ್ದು, ಸೋಮವಾರ ಅರ್ಜಿ ವಿಚಾರಣೆಗೆ ನಿಗದಿಯಾಗಿರುವಾಗ ಶನಿವಾರ ಅಧಿಸೂಚನೆ ಹೊರಡಿಸಿ ರುವುದು ಸರಿಯಲ್ಲ, ಇದು ಕಾನೂನು ಬಾಹಿರ ಅಲ್ಲದಿದ್ದರೂ ಅಸಮರ್ಪ ಕತೆಯ ಪರಮಾವಧಿ – ಇದು ಮಾಜಿ ಅಡ್ವೋಕೇಟ್ ಜನರಲ್ ಬಿ.ವಿ. ಆಚಾರ್ಯ ಅಭಿಪ್ರಾಯ.
5. ತಡೆ ಸಿಗುವ ಸಂಭವ ಇಲ್ಲ
ಚುನಾವಣೆಗೆ ತಡೆ ಸಿಗಲಿಕ್ಕಿಲ್ಲ. ಆದರೆ ಸ್ಪೀಕರ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದರೆ ಅನರ್ಹ ಶಾಸಕರಿಗೆ ಸ್ಪರ್ಧಿಸಲು ಸಮಸ್ಯೆ ಎದುರಾಗದು. ಅಷ್ಟಕ್ಕೂ ಸುಪ್ರೀಂಕೋರ್ಟ್‌ನಲ್ಲಿ ಸೋಮವಾರ ಏನಾಗುತ್ತದೆ ಎಂಬುದರ ಮೇಲೆ ಎಲ್ಲವೂ ಅವಲಂಬಿತವಾಗಿವೆ ಎಂದು ಹಿರಿಯ ನ್ಯಾಯವಾದಿ ಎ.ಎಸ್. ಪೊನ್ನಣ್ಣ ಹೇಳುತ್ತಾರೆ.
ರಫೀಕ್ ಅಹ್ಮದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.