BJP-JDS Padayathre; ಕೇವಲ 16 ತಿಂಗಳಲ್ಲಿ ರಾಜ್ಯಕ್ಕೆ ದುಸ್ಥಿತಿ: ಬಿ.ವೈ. ವಿಜಯೇಂದ್ರ ಟೀಕೆ
ರಾಜ್ಯ ಕಾಂಗ್ರೆಸ್ ಸರಕಾರವನ್ನು ಬುಡ ಸಮೇತ ಕಿತ್ತು ಹಾಕಲು ಯಾತ್ರೆ
Team Udayavani, Aug 7, 2024, 6:38 AM IST
ಮದ್ದೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಕಷ್ಟು ಭರವಸೆ ಕೊಟ್ಟಿದ್ದರು. ಕಳೆದ 16 ತಿಂಗಳಲ್ಲಿ ರಾಜ್ಯ ದುಸ್ಥಿತಿಗೆ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೂರಿದರು.
ಬಿಜೆಪಿ-ಜೆಡಿಎಸ್ ಪಾದಯಾತ್ರೆ 4ನೇ ದಿನ ಮಂಗಳವಾರ ಮದ್ದೂರು ಪಟ್ಟಣ ತಲುಪಿದಾಗ ಶ್ರೀರಾಮ ಮಂದಿರ ಪಾರ್ಕ್ ಬಳಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ದಿನಬಳಕೆ ವಸ್ತುಗಳ ದರ ಏರಿಕೆಯಾಗಿದ್ದು ರೈತರಿಗೆ ಹಾಲಿನ ಪ್ರೋತ್ಸಾಹಧನ ನೀಡದೆ ಸಿದ್ದರಾಮಯ್ಯ ರೈತರ ಬಗ್ಗೆ ಮೊಸಳೆ ಕಣ್ಣೀರು ಹಾಕುತ್ತ ಜನರನ್ನು ವಂಚಿಸುತ್ತಿದ್ದಾರೆ ಎಂದರು.
ನಮಗೆ ಅಧಿಕಾರದ ದಾಹ ಇಲ್ಲ. ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಬುಡ ಸಮೇತ ಕಿತ್ತು ಹಾಕುವುದಕ್ಕಾಗಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ. ಸಾವಿರಾರು ಕೋಟಿ ರೂ. ರೈತರ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡದೆ ಅಯೋಗ್ಯ ಕಾಂಗ್ರೆಸ್ ಸರಕಾರ ಬಂದ ಮೇಲೆ 1.95 ಲಕ್ಷ ಕೋಟಿ ರೂ. ಸಾಲ ಮಾಡಿದೆ. ಎಸ್‌ಇಪಿ, ಟಿಎಸ್ಪಿ ಹಣ ಬೇರೆ ಕಡೆಗೆ ವರ್ಗಾವಣೆ ಮಾಡಲಾಗಿದೆ. ದಲಿತರ ಹೆಸರು ಹೇಳಿ ಅ ಧಿಕಾರಕ್ಕೆ ಬಂದ ಕಾಂಗ್ರೆಸ್ ದಲಿತರಿಗೆ ಅನ್ಯಾಯ ಮಾಡಿದ್ದು ಇಂತಹ ಭ್ರಷ್ಟ ಮುಖ್ಯಮಂತ್ರಿ ನಮಗೆ ಬೇಕಾ ಎಂದು ಪ್ರಶ್ನಿಸಿ ಇವರಿಂದ ಜನರಿಗೆ, ರೈತರಿಗೆ ಒಳ್ಳೆಯದಾಗುವುದಿಲ್ಲ ಎಂದರು.
ಎಚ್‌ಡಿಕೆ ಸೇರಿ ಹಿರಿಯ ನಾಯಕರು ಗೈರು
ಮಂಡ್ಯ: ಮೈತ್ರಿ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿ ಬಿಜೆಪಿ ಹಿರಿಯ ನಾಯಕರು ಗೈರು ಹಾಜರಾಗಿದ್ದರು. ಮಂಡ್ಯ ಜಿಲ್ಲೆಯ ಸಂಸದರಾಗಿ ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಜಿಲ್ಲೆಯಲ್ಲಿ ನಡೆಯುವ ಪಾದಯಾತ್ರೆಗೆ ಆಗಮಿಸಲಿದ್ದಾರೆ ಎಂದು ನಿರೀಕ್ಷಿಸ ಲಾಗಿತ್ತು. ವಿಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಚಿವ ಹಾಗೂ ಶಾಸಕ ಡಾ| ಅಶ್ವತ್ಥನಾರಾಯಣ, ಬಿ. ಶ್ರೀರಾಮುಲು, ಕೆ.ಸಿ. ನಾರಾಯಣ ಗೌಡ ಹೊರತುಪಡಿಸಿದರೆ ಹಿರಿಯ ಬಿಜೆಪಿ ನಾಯಕರು ಭಾಗವಹಿಸಲಿಲ್ಲ.
ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ನಿಖಿಲ್
ಮದ್ದೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರ, ಹಗರಣ, ಅಕ್ರಮಗಳಲ್ಲಿ ಮುಳುಗಿದೆ. ಸಿದ್ದರಾಮಯ್ಯ ಅವರಿಗೆ ಕಿಂಚಿತ್ತಾದರೂ ಅಹಿಂದ ವರ್ಗದ ಮೇಲೆ ಕಾಳಜಿ ಇದ್ದರೆ ಹಾಗೂ ನೈತಿಕತೆ ಪದದ ಅರ್ಥ ಗೊತ್ತಿದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖೀಲ್ ಕುಮಾರಸ್ವಾಮಿ ಹೇಳಿದರು.
ಪಟ್ಟಣದಲ್ಲಿ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ, ವಾಲೀ¾ಕಿ, ಮುಡಾ ಹಗರಣದಲ್ಲಿ ಹಣ ಲೂಟಿ ಮಾಡಲಾಗಿದೆ. ಕನ್ನಡಿಗರ ತೆರಿಗೆ ಹಣವನ್ನು ನುಂಗಿದ್ದಾರೆ. ಅದಕ್ಕಾಗಿ ಬಿಜೆಪಿ-ಜೆಡಿಎಸ್ ಪಕ್ಷಗಳು ಮೈಸೂರು ಚಲೋ ಪಾದಯಾತ್ರೆ ಮಾಡಲಾಗುತ್ತಿದೆ ಎಂದರು.
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತದಿಂದ ಎಚ್.ಡಿ.ಕುಮಾರಸ್ವಾಮಿ ಗೆದ್ದು ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದು ಇದಕ್ಕೆ ಮದ್ದೂರು ಜನರ ಆಶೀರ್ವಾದ ಇದೆ. ಕುಮಾರಸ್ವಾಮಿ ಅವರ ಅವ ಧಿ ಪೂರೈಸುವುದರೊಳಗೆ ಜಿಲ್ಲೆಯ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ ಸೃಷ್ಟಿ ಮಾಡಲು ಚಿಂತನೆ ನಡೆಸುವ ಜತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕನಸು ಕಂಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.