Dividend: ಧರ್ಮಸ್ಥಳಕ್ಕೆ ನ.14ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಗಮನ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಲಾಭಾಂಶ ವಿತರಣೆ
Team Udayavani, Nov 12, 2024, 6:27 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ನ.14ರಂದು ಬೆಳಗ್ಗೆ 10 ಗಂಟೆಗೆ ಧರ್ಮಸ್ಥಳದ ಅಮೃತ ವರ್ಷಿಣಿಯಲ್ಲಿ ನಡೆಯ ಲಿರುವ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಲಿದ್ದಾರೆ ಎಂದು ಎಸ್.ಕೆ.ಡಿ.ಆರ್.ಡಿ.ಪಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದ್ದಾರೆ.
ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ನಬಾರ್ಡ್ ಬ್ಯಾಂಕ್ ಅಧ್ಯಕ್ಷ ಶಾಜಿ. ಕೆ.ವಿ. ಮುಂಬಯಿ, ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವೀ. ಹೆಗ್ಗಡೆ, ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ ಮುಂತಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಒಂದು ಲಾಭರಹಿತ ಉದ್ದೇಶದೊಂದಿಗೆ ಚಾರಿಟೆಬಲ್ ಟ್ರಸ್ಟ್ ಆಗಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ್ದಾರೆ. ನಾಲ್ಕು ದಶಕಗಳಿಂದ ಸಂಸ್ಥೆಯು ಗ್ರಾಮೀಣ ಪ್ರದೇಶದ ರೈತರು, ಮಹಿಳೆಯರು ಮತ್ತು ಬಡವರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಶ್ರಮಿಸುತ್ತಿದೆ.
ನ.13: ವಿತ್ತ ಸಚಿವೆ ಜತೆ ಮಂಗಳೂರಿನಲ್ಲಿ ಸಂವಾದ
ಮಂಗಳೂರು: ಸಿಟಿಝನ್ ಕೌನ್ಸಿಲ್ ಮಂಗಳೂರು ಚಾಪ್ಟರ್ ವತಿಯಿಂದ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಜತೆ ಅನೌಪಚಾರಿಕ ಸಂವಾದ ಕಾರ್ಯಕ್ರಮ ನ.13ರಂದು ಸಂಜೆ 6.30ಕ್ಕೆ ನಗರದ ಟಿ.ಎಂ.ಪೈ ಕನ್ವೆನ್ಶನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸು ವವರು https://forms.gle/TZDfNHZVtmSHgnaj6 ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಕೌನ್ಸಿಲ್ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.