ದ.ಕ.: ಇಂದಿನಿಂದ ಸಣ್ಣ ಯಾಂತ್ರೀಕೃತ ಮೀನುಗಾರಿಕೆಗೆ ಷರತ್ತುಬದ್ಧ ಅನುಮತಿ


Team Udayavani, May 14, 2020, 5:45 AM IST

ದ.ಕ.: ಇಂದಿನಿಂದ ಸಣ್ಣ ಯಾಂತ್ರೀಕೃತ ಮೀನುಗಾರಿಕೆಗೆ ಷರತ್ತುಬದ್ಧ ಅನುಮತಿ

ಸಾಂದರ್ಭಿಕ ಚಿತ್ರ.

ಮಂಗಳೂರು: ಕೋವಿಡ್- 19 ಲಾಕ್‌ಡೌನ್‌ನಿಂದಾಗಿ ಮೀನುಗಾರಿಕಾ ಕ್ಷೇತ್ರಕ್ಕೆ ಪೆಟ್ಟು ಬಿದ್ದಿದ್ದು, ಮೀನುಗಾರರನ್ನು ಉತ್ತೇಜಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲೆಯೊಳಗೆ 110 ಅಶ್ವಶಕ್ತಿ ಸಾಮರ್ಥ್ಯದ ಸಣ್ಣ ಯಾಂತ್ರೀಕೃತ ಮೀನುಗಾರಿಕೆ ನಡೆಸಬಹುದು ಎಂದು ಮೀನುಗಾರಿಕಾ ಇಲಾಖೆಯು ಕೆಲವೊಂದು ಷರತ್ತುಗಳೊಂದಿಗೆ ಬುಧವಾರ ಆದೇಶಿಸಿದೆ.

ಮೀನುಗಾರಿಕಾ ಇಲಾಖೆ ಹೊರಡಿಸಿದ ಆದೇಶದಂತೆ, ತೋಟ ಬೆಂಗ್ರೆ, ಉಳ್ಳಾಲ ಕೋಡಿಯಲ್ಲಿ ನಿಗದಿತ ದಿನ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯ ಒಳಗೆ ಮೀನುಗಾರಿಕಾ ಬೋಟುಗಳು ಬಂದು ತಲುಪಬೇಕು. ನಿಗದಿತ ಮೀನುಗಾರಿಕಾ ಇಳಿದಾಣಗಳಿಗೆ ಹಂತ ಹಂತವಾಗಿ 5 ಬೋಟುಗಳು ಮೀರದಂತೆ ಹಿಂದಿರುಗಬೇಕು. ಬೇರೆ ರಾಜ್ಯದ ಮೀನುಗಾರಿಕಾ ಬಂದರು/ಇಳಿದಾಣ ಕೇಂದ್ರಗಳಿಗೆ ಪ್ರವೇಶಿಸಬಾರದು. ಜೂನ್‌ 1ರಿಂದ ಜುಲೈ 31ರ ವರೆಗೆ ಮೀನುಗಾರಿಕಾ ನಿಷೇಧ ಅವಧಿ ಇರುವುದರಿಂದ ಎಲ್ಲ ಯಾಂತ್ರೀಕೃತ ಬೋಟ್‌ಗಳು ಮೇ 31ರೊಳಗೆ ಬಂದರು/ಇಳಿದಾಣಗಳಿಗೆ ಮರಳಬೇಕು ಎಂದು ಆದೇಶ ನೀಡಿದೆ.

ಮೀನುಗಾರಿಕೆ ಬಂದರು/ಇಳಿದಾಣ ಕೇಂದ್ರಗಳಲ್ಲಿ ಮೀನು ಹಿಡುವಳಿಯ ಹರಾಜು ಪ್ರಕ್ರಿಯೆಯನ್ನು ತಡೆಹಿಡಿಯಲಾಗಿದೆ. ಮೀನುಗಳ ಚಿಲ್ಲರೆ ಮಾರಾಟಕ್ಕೆ ಅವಕಾಶವಿಲ್ಲ. ಇಳಿಸಲಾದ ಮೀನುಗಳನ್ನು ಸಾಗಾಟ ವಾಹನಗಳಿಗೆ ತುಂಬಿಸಿ ಬಂದರು/ಇಳಿದಾಣ ಕೇಂದ್ರಗಳಿಂದ ಆದಷ್ಟು ಬೇಗ ಹೊರಸಾಗಿಸಬೇಕು. ಮೀನುಗಾರಿಕಾ ದೋಣಿ ಮಾಲಕರು ಸ್ಥಳೀಯವಾಗಿ ಮೀನು ಮಾರಾಟ ಮಾಡಿ ಬಾಕಿ ಉಳಿದಿರುವ ಮೀನನ್ನು ರಾಜ್ಯದಲ್ಲಿರುವ, ಹೊರ ರಾಜ್ಯದಲ್ಲಿರುವ ಸಂಸ್ಕರಣಾ ಘಟಕಗಳಿಗೆ ಸಾಗಿಸಬಹುದಾಗಿದೆ.

ಪ್ರತೀ ದೋಣಿಯ ಮಾಲಕರು ಎಲ್ಲ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್‌, ಸೋಪ್‌, ಹ್ಯಾಂಡ್‌ವಾಶ್‌ ವ್ಯವಸ್ಥೆ ಮಾಡಿಕೊಳ್ಳ ಬೇಕು. ಮೀನುಗಾರಿಕಾ ಬಂದರು ಇಳಿದಾಣಗಳಲ್ಲಿ ಸಾಮಾಜಿಕ ಅಂತರ, ಶುಚಿತ್ವ ಕಾಪಾಡಿಕೊಳ್ಳಬೇಕು. ಒಂದು ಬೋಟಿನ ಕಾರ್ಮಿಕರು ಸಮುದ್ರದ ಇನ್ನೊಂದು ಬೋಟಿನ ಕಾರ್ಮಿಕರೊಂದಿಗೆ ಸಂಪರ್ಕ/ವಸ್ತುಗಳ ಬದಲಾವಣೆ ಮಾಡಬಾರದು.

ಮೀನುಗಾರಿಕೆಯಲ್ಲಿ ತೊಡಗಿದಾಗ ಕೆಮ್ಮು, ತಲೆನೋವು, ಕ್ವರ, ಮೈ-ಕೈನೋವು, ಉಸಿರಾಟದ ಸಮಸ್ಯೆ ಇತ್ಯಾದಿ ಕಂಡುಬಂದಲ್ಲಿ ಕೂಡಲೇ ಸ್ಥಳೀಯ ಮೀನುಗಾರಿಕಾ ಅಧಿಕಾರಿಗೆ/ವೈದ್ಯಾಧಿಕಾರಿಗಳಿಗೆ ತಿಳಿಸಿ ಕೂಡಲೇ ಬೋಟುಗಳು ಹಿಂದಿರುಗಬೇಕು. ಇಂತಹ ಸಂದರ್ಭದಲ್ಲಿ ಹಿಡಿದ ಮೀನು ಸಮುದ್ರಕ್ಕೆ ಎಸೆಯಬಾರದು.

ಸಣ್ಣ ಯಾಂತ್ರೀಕೃತ ಮೀನುಗಾರಿಕೆಗೆ ಅವಕಾಶ ನೀಡಬೇಕು ಎನ್ನುವುದು ಮೀನುಗಾರರ ಬೇಡಿಕೆಯಾಗಿತ್ತು. ಈ ಬಗ್ಗೆ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ, ಅವಕಾಶ ನೀಡಲಾಗಿದೆ.
– ಹರೀಶ್‌ ಕುಮಾರ್‌, ಮೀನುಗಾರಿಕಾ ಉಪ ನಿರ್ದೇಶಕರು, ದ.ಕ.

ದ.ಕ. ಜಿಲ್ಲೆಯಲ್ಲಿ ಸುಮಾರು 150 ಸಣ್ಣ ಯಾಂತ್ರೀಕೃತ ಬೋಟ್‌ಗಳಿಗೆ.ಮೀನು ಗಾರಿಕಾ ಇಲಾಖೆಯ ಈ ನಿರ್ಧಾರದಿಂದ ನೂರಾರು ಮೀನುಗಾರರಿಗೆ ಅನುಕೂಲವಾಗಲಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ನಿರ್ವಹಿಸಬೇಕು.
– ನಿತಿನ್‌ ಕುಮಾರ್‌, ಮೀನುಗಾರರ ಮುಖಂಡರು

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

9

Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗ‌ಳಲ್ಲೇ ಬಸ್‌ ನಿಲುಗಡೆ; ಅನಾಹುತಕ್ಕೆ ಎಡೆ

8(1)

Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು

7(1)

Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.