ದ.ಕ.: ದಾಖಲೆಯ 583 ಮಂದಿಗೆ ಕೋವಿಡ್ ದೃಢ; ಉಡುಪಿ: 250 ಪಾಸಿಟಿವ್
ಮಂಗಳೂರು ಪಾಸಿಟಿವಿಟಿ ದರ ಶೇ. 5.73
Team Udayavani, Jan 12, 2022, 6:45 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ದಿನದ ವರದಿ ದಿನೇದಿನೆ ಏರುತ್ತಿದ್ದು ಮಂಗಳವಾರ 583 ಮಂದಿಗೆ ಸೋಂಕು ದೃಢಪಟ್ಟಿದೆ. 94 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1,872 ಸಕ್ರಿಯ ಪ್ರಕರಣಗಳಿವೆ. ಈವರೆಗೆ 1,705 ಮಂದಿ ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಮೆಡಿಕಲ್ ವಸತಿ ನಿಲಯದ 10 ಮಂದಿಯಲ್ಲಿ ಕೊರೊನಾ ದೃಢಪಟ್ಟಿದೆ. ಮಂಗಳೂರು ತಾಲೂಕಿನ ವಸತಿ ಸಮುಚ್ಚಯದ 7 ಮಂದಿಯಲ್ಲಿ ಮತ್ತು ಕಾಪ್ರಿಗುಡ್ಡದ ನಿರ್ಮಾಣ ಹಂತದ ಕಾಮಗಾರಿ ಪ್ರದೇಶದಲ್ಲಿ 8 ಮಂದಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಸದ್ಯ ಶೇ. 5.73 ಪಾಸಿಟಿವಿಟಿ ದರ ದಾಖಲಾಗಿದೆ.
ಉಡುಪಿ: 250 ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 250 ಮಂದಿಗೆ ಕೊರೊನಾ ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇ. 6.29ಕ್ಕೆ ಏರಿಕೆದೆ. 13 ಮಂದಿ ಕೋವಿಡ್ ಕೇರ್ ಸೆಂಟರ್‌ಗೆ, 16 ಮಂದಿ ಕೋವಿಡ್ ಆಸ್ಪತ್ರೆಗೆ ಹಾಗೂ 221 ಮಂದಿ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3,960 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. 66 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,342 ಪ್ರಕರಣಗಳು ಸಕ್ರಿಯವಾಗಿವೆ.
17 ವಿದ್ಯಾರ್ಥಿಗಳಿಗೆ ಕೊರೊನಾ
ಬ್ರಹ್ಮಾವರ: ಇಲ್ಲಿನ ಸ.ಹಿ.ಪ್ರಾ. ಶಾಲೆಯ ಓರ್ವ ಶಿಕ್ಷಕಿ ಹಾಗೂ 17 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದಾಖಲಾಗಿದೆ. ಎಲ್ಲರೂ ಹೋಂ ಐಸೊಲೇಶನ್‌ಲ್ಲಿದ್ದು, ಶಾಲೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಶುಕ್ರವಾರ ಪ್ರಾರಂಭದಲ್ಲಿ ಇಬ್ಬರಿಗೆ ಕೊರೊನಾ ದೃಢಪಟ್ಟಿದ್ದು, ಆನಂತರ ಸಂಖ್ಯೆ ಹೆಚ್ಚತೊಡಗಿತು. ಶಾಲೆಯನ್ನು ಸ್ಯಾನಿಟೈಸ್‌ಗೊಳಿಸಲಾಗಿದ್ದು, ಗುರುವಾರ ಪುನರಾರಂಭಗೊಳ್ಳುವ ನಿರೀಕ್ಷೆ ಇದೆ.
ಕಾಸರಗೋಡು: 118 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ಮಂಗಳವಾರ 118 ಮಂದಿಗೆ ಕೊರೊನಾ ದೃಢಪಟ್ಟಿದೆ. 45 ಮಂದಿ ಗುಣಮುಖರಾಗಿದ್ದಾರೆ. 869 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಐವರಿಗೆ ಒಮಿಕ್ರಾನ್ ದೃಢಪಟ್ಟಿದೆ.
ಕೇರಳದಲ್ಲಿ 9,066 ಪ್ರಕರಣ
ಕೇರಳದಲ್ಲಿ ಮಂಗಳವಾರ 9,066 ಮಂದಿಗೆ ಕೊರೊನಾ ದೃಢಪಟ್ಟಿದೆ. 2,064 ಮಂದಿ ಗುಣಮುಖರಾಗಿದ್ದಾರೆ. 19 ಮಂದಿ ಸಾವಿಗೀಡಾಗಿದ್ದು, ಒಟ್ಟು ಸಾವಿನ ಸಂಖ್ಯೆ 50,053ಕ್ಕೇರಿದೆ. 44,441 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಡಗು: 27 ಮಂದಿಗೆ ಕೊರೊನಾ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ 27 ಮಂದಿಗೆ ಕೊರೊನಾ ದೃಢಪಟ್ಟಿದೆ. 8 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 289 ಸಕ್ರಿಯ ಪ್ರಕರಣಗಳಿವೆ. ಕಂಟೈನ್‌ಮೆಂಟ್ ವಲಯಗಳ ಸಂಖ್ಯೆ 54 ಆಗಿದೆ. ಪಾಸಿಟಿವಿಟಿ ದರ ಶೇ. 0.84 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಲಸಿಕೆ ಮಾಹಿತಿ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,845 ಮಂದಿಗೆ ಮೊದಲ ಡೋಸ್, 2,410 ಮಂದಿಗೆ ಎರಡನೇ ಡೋಸ್ ಮತ್ತು 2,032 ಮಂದಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ 913 ಮಂದಿ ಕೋವಿಡ್ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.