ಬಿಜೆಪಿ ಸರ್ಕಾರದ ವೈಫಲ್ಯ, ಕೋಮು ದ್ವೇಷ ಜನತೆಗೆ ತಿಳಿಸಿ : ಕಾರ್ಯಕರ್ತರಿಗೆ ಡಿಕೆಶಿ ಸಲಹೆ
Team Udayavani, Apr 21, 2022, 8:45 PM IST
ಗಂಗಾವತಿ : ಜನರ ಅಭಿಪ್ರಾಯಕ್ಕೆ ವಿರುದ್ಧವಾಗಿ ಕಳ್ಳ ಮಾರ್ಗದಲ್ಲಿ ರಚನೆಯಾಗಿರುವ ರಾಜ್ಯದ ಬಿಜೆಪಿ ಸರ್ಕಾರದ ವೈಫಲ್ಯ ಹಾಗೂ ಕೋಮು ದ್ವೇಷದ ನಿರ್ಧಾರಗಳನ್ನು ಜನತೆಗೆ ತಿಳಿಸುವಂತೆ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆಂದು ಕೆಪಿಸಿಸಿ ಕಾರ್ಯದರ್ಶಿ ಬಸವರಾಜಸ್ವಾಮಿ ಮಳಿಮಠ ತಿಳಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆ ಮತ್ತು ಪಕ್ಷ ಸಂಘಟನೆ ಕುರಿತು ಬೆಂಗಳೂರಿನಲ್ಲಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಸಂದರ್ಭದಲ್ಲಿ ಗಂಗಾವತಿ ಕ್ಷೇತ್ರದ ಸಮಗ್ರ ಮಾಹಿತಿಯನ್ನು ಡಿಕೆಶಿ ಪಡೆದುಕೊಂಡಿದ್ದು ಮುಂಬರುವ ದಿನಗಳಲ್ಲಿ ಇನ್ನಷ್ಟು ಸಂಘಟನೆ ಮಾಡುವ ಉದ್ದೇಶದಿಂದ ಹಲವಾರು ಕ್ರಮ ಕೈಗೊಳ್ಳಲಾಗುತ್ತದೆ ಸ್ಥಳೀಯವಾಗಿ ಕಾರ್ಯಕರ್ತರು ಮತ್ತು ಡಿಜಿಟಲ್ ಸದಸ್ಯತ್ವ ಪಡೆದವರನ್ನು ಸತತವಾಗಿ ಸಂಪರ್ಕಿಸುವ ಮೂಲಕ ಬಿಜೆಪಿ ಸರ್ಕಾರದ ವೈಫಲ್ಯಗಳು ಮತ್ತು ಕೋಮು ಭಾವನೆಗಳನ್ನು ತಿಳಿಸುತ್ತಿರಬೇಕು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ರೈತ ಮತ್ತು ಕೃಷಿ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯವನ್ನು ಅವರಿಗೆ ಮನವರಿಕೆ ಮಾಡಬೇಕೆಂದು ಸೂಚನೆ ನೀಡಿದ್ದು ಪಕ್ಷ ಸಂಘಟನೆ ಮತ್ತು ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆ ಕುರಿತು ಮನವರಿಕೆ ಮಾಡಿಕೊಡಲು ಪ್ರವಾಸ ಕೈಗೊಳ್ಳುವ ಯೋಜನೆ ರೂಪಿಸಲಾಗುತ್ತದೆ .
ಇದನ್ನೂ ಓದಿ : ಮದುವೆಗೆಂದು IPL ತೊರೆದ ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಆಟಗಾರ
ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಕ್ಷದ ಹೈಕಮಾಂಡ್ ಯಾರಿಗೆ ಕೊಟ್ಟರೂ ಕಾರ್ಯಕರ್ತರು ಮುಖಂಡರು ಒಟ್ಟಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ಸೂಚಿಸಿ ಗೆಲ್ಲುವಂತೆ ಮಾಡಲಾಗುತ್ತಿದೆ .ಪಕ್ಷದ ಚುನಾವಣಾ ಕಾರ್ಯತಂತ್ರಗಳ ಸಾಮೂಹಿಕ ಸಂಘಟನೆಯ ಆದೇಶವನ್ನು ಪಾಲಿಸಬೇಕಾಗುತ್ತದೆ ಎಂದರು .
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಯುವ ಮುಖಂಡ ರಾಜು ನಾಯ್ಕ್ ಸೇರಿದಂತೆ ಅನೇಕರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.