ತನ್ನನ್ನು ಬೆಳೆಸಿದ ಪಕ್ಷಕ್ಕೆ ಯಾರು ದ್ರೋಹ ಬಗೆದಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ:ಡಿಕೆಶಿ
Team Udayavani, Oct 24, 2020, 8:38 PM IST
ಬೆಂಗಳೂರು: ನಮಗೆ ಜಾತಿಯನ್ನು ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ. ಬೆಳೆಸಿದ ಪಕ್ಷಕ್ಕೆ ಮೋಸ ಮಾಡುವ ಮೂಲಕ ಹೆತ್ತ ತಾಯಿಗೆ ದ್ರೋಹ ಬಗೆದಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ರಾಜರಾಜೇಶ್ವರಿ ನಗರ ಉಪ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಶನಿವಾರ ಪ್ರಚಾರ ಮಾಡಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಚುನಾವಣೆ ಯಾವ ಕಾರಣಕ್ಕೆ ಬಂದಿದೆ? ಹಣ ಹಾಗೂ ಅಧಿಕಾರದ ಆಸೆಗೆ ಮತದಾರರಿಗೆ, ತನ್ನನ್ನು ಬೆಳೆಸಿದ ಪಕ್ಷಕ್ಕೆ ಯಾರು ದ್ರೋಹ ಬಗೆದಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದರು.
ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ದಬ್ಟಾಳಿಕೆ ನಡೆಸುತ್ತಿದ್ದಾರೆ. ಇದರ ವಿರುದ್ಧ ನಾವು ಹೋರಾಡುತ್ತೇವೆ. ಕ್ಷೇತ್ರದ ಮತದಾರ ಬದಲಾವಣೆ ಬಯಸಿದ್ದಾರೆ ಎಂದರು.
ಇದನ್ನೂ ಓದಿ:ಪ್ಲೇ ಸ್ಟೋರ್ ನಿಂದ 36 ಅಪ್ಲಿಕೇಶನ್ ಗಳನ್ನು ಕಿತ್ತೊಗೆದ ಗೂಗಲ್: ಈ Apps Uninstall ಮಾಡಿ !
ಕಷ್ಟಪಟ್ಟು ಪಕ್ಷ ಕಟ್ಟಿದ ಬಿಜೆಪಿ ಕಾರ್ಯಕರ್ತರು ನಾಯಕರಿಗೆ ಅಧಿಕಾರ ಇಲ್ಲ. ತಮ್ಮ ಮಾತೃ ಪಕ್ಷಕ್ಕೆ ದ್ರೋಹ ಬಗೆದವರಿಗೆ ಯಡಿಯೂರಪ್ಪನವರು ಅಧಿಕಾರ ನೀಡಿದ್ದಾರೆ. ಕಳೆದೊಂದು ವರ್ಷದಿಂದ ಈ ಬಿಜೆಪಿ ಅಭ್ಯರ್ಥಿಯನ್ನು ಮನೆಯಲ್ಲಿ ಕೂರಿಸಿದ್ದರು. ಹೀಗಾಗಿ ಜನರ ಆಕ್ರೋಶಕ್ಕೆ ಹೆದರಿ ಯಡಿಯೂರಪ್ಪನವರು ಬಿಜೆಪಿ ನಾಯಕರು ಇಲ್ಲಿ ಪ್ರಚಾರಕ್ಕೆ ಬಂದಿಲ್ಲ ಎಂದು ತಿಳಿಸಿದರು.
ಬಿಜೆಪಿಯವರು ಕಾಂಗ್ರೆಸ್ ಪಕ್ಷದ ಶಾಸಕರು ಬರಲು ಸಿದ್ಧವಾಗಿದ್ದಾರೆ ಎನ್ನುತ್ತಿದ್ದಾರೆ. ಅವರು ಆದಷ್ಟು ಬೇಗ ಆ ಕೆಲಸ ಮಾಡಲಿ. ತಡ ಮಾಡಬಾರದು. ಯಾರೆಲ್ಲ ಬರುತ್ತಾರೋ ಅವರನ್ನು ಕರೆದುಕೊಂಡು ಹೋಗಲಿ. ಒಂದಿಬ್ಬರು ಮಾತ್ರವಲ್ಲ ನಮ್ಮ ಪಕ್ಷದಲ್ಲಿರುವ ಎಲ್ಲರನ್ನು ಕರೆದುಕೊಂಡು ಹೋಗಲಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.