ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ತರುವವರೆಗೆ ಯಾವುದೇ ಸಮಾವೇಶದ ವೇದಿಕೆಯಲ್ಲಿ ಕೂರಲ್ಲ : ಡಿಕೆಶಿ

Team Udayavani, Mar 22, 2022, 9:04 PM IST

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ತರುವವರೆಗೆ ಸಮಾವೇಶದ ವೇದಿಕೆ ಮೇಲೆ ಕೂರಲ್ಲ : ಡಿಕೆಶಿ

ಬೀದರ್ : ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಗಾಬರಿಯಾಗುವ ಅಗತ್ಯವಿಲ್ಲ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಡಿಜಿಟಲ್ ಸದಸ್ಯ ನೋಂದಣಿ ಅಭಿಯಾನದ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕರ್ನಾಟಕದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಎದೆಗುಂದುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಕಾರ್ಯಕರ್ತರು ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಪಕ್ಷದ ಬಾವುಟ ಹಿಡಿಯಲು ಸಜ್ಜಾಗಬೇಕೆಂದು ಕರೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರುವವರೆಗೆ ಸಮಾವೇಶದ ವೇದಿಕೆ ಮೇಲೆ ಕೂರುವುದಿಲ್ಲ ಎಂದು ನಿರ್ಣಯಿಸಿದ್ದೇವೆ ಎಂದು ಹೇಳಿದ ಶಿವಕುಮಾರ್, ಸದಸ್ಯರೇ ಪಕ್ಷದ ಆಧಾರ ಸ್ಥಂಬ ಮತ್ತು ದೊಡ್ಡ ಶಕ್ತಿ. 12 ವರ್ಷಗಳ ನಂತರ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಆರಂಭಿಸಲಾಗಿದೆ. ತ್ರಿವರ್ಣ ಧ್ವಜವುಳ್ಳ ಪಕ್ಷದ ಬಾವುಟವನ್ನು ಎದೆ ಮೇಲೆ ಹಾಕಿಕೊಳ್ಳಲು ಕಾಂಗ್ರೆಸ್ಸಿಗರಿಗೆ ಮಾತ್ರ ಸಾಧ್ಯ. ಹಾಗಾಗಿ ಈ ಪಕ್ಷದ ಸದಸ್ಯನಾಗುವುದೇ ದೊಡ್ಡ ಭಾಗ್ಯ ಎಂದು ಹೇಳಿದರು.

ಇದನ್ನೂ ಓದಿ : ವಿಶ್ವ ಜಲ ದಿನ: ಪ್ರತಿ ಹನಿ ನೀರನ್ನು ಉಳಿಸುವ ನಮ್ಮ ಪ್ರತಿಜ್ಞೆಯನ್ನು ಪುನರುಚ್ಚರಿಸೋಣ: ಮೋದಿ

ಸದಸ್ಯತ್ವ ಅಭಿಯಾನಕ್ಕೆ ಇನ್ನೂ ಒಂದು ವಾರ ಮಾತ್ರ ಉಳಿದಿದ್ದು, ಜವಾಬ್ದಾರಿ ಹೊತ್ತವರು ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕಾಂಗ್ರೆಸ್ ಸದಸ್ಯರನ್ನಾಗಿ ಮಾಡಬೇಕು. ಮನೆ ಮನೆಗೆ ಭೇಟಿ ಪಕ್ಷದ ಸಿದ್ಧಾಂತ ಸಾಧನೆಗಳು, ಜತೆಗೆ ಬಿಜೆಪಿ ಸರ್ಕಾರದ ದುರಾಡಳಿತದ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಜನರ ಹೃದಯ ಗೆಟ್ಟು ಅವರನ್ನು ಪಕ್ಷದೊಂದಿಗೆ ಜೋಡಿಸಿ ಕೊಳ್ಳಬೇಕು. ಅಷ್ಟೇ ಅಲ್ಲ ಬಿಜೆಪಿ ಕಾರ್ಯಕರ್ತರಿಗೆ ಡಬಲ್ ಇಂಜಿನ್ ಸರ್ಕಾರದ ಜನವಿರೋಧಿ ಆಡಳಿತದ ಬಗ್ಗೆ ತಿಳಿ ಹೇಳಿ ಅವರನ್ನು ಸಹ ಪಕ್ಷದತ್ತ ಸೆಳೆಯಬೇಕು ಎಂದು ಕಿವಿ ಮಾತು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾತನಾಡಿ, ಯಾವುದೇ ಪಕ್ಷಕ್ಕೆ ಸದಸ್ಯರೇ ಬುನಾದಿ. ರಾಜ್ಯದಲ್ಲಿ 60 ಲಕ್ಷ ಸದಸ್ಯತ್ವ ಗುರಿ ಇದ್ದು, ಅದರಂತೆ ಬೀದರನಲ್ಲಿ 2 ಲಕ್ಷ ಸದಸ್ಯರನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಕಾಂಗ್ರೆಸ್ ಉಳಿದರೆ ಮಾತ್ರ ರಾಷ್ಟ್ರ ಮತ್ತು ನಾವು ಉಳಿಯಲು ಸಾಧ್ಯ. ಹಾಗಾಗಿ ಬೇರು ಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಮತ್ತು ಭ್ರಷ್ಟ ಬಿಜೆಪಿ ಸರ್ಕಾರವನ್ನು ಬುಡ ಸಮೇತ ಕಿತ್ತು ಹಾಕಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಅತ್ಯಧಿಕ ಸದಸ್ಯತ್ವಕ್ಕೆ ಒತ್ತು ಕೊಡಬೇಕಿದೆ ಎಂದು ಹೇಳಿದರು.

ಮಾಜಿ ಕೇಂದ್ರ ಸಚಿವರಾದ ರಾಜ್ಯದ ಪಿಆರ್‌ಒ ಸುದರ್ಶನ ನಾಚಿಯಪ್ಪ ಮಾತನಾಡಿ, ಕಾಂಗ್ರೆಸ್ ಸದಸ್ಯತ್ವದಲ್ಲಿ ಕರ್ನಾಟಕ ಎಂದಿಗೂ ಮುಂಚೂಣಿಯಲ್ಲಿರುತ್ತದೆ. ಸದಸ್ಯತ್ವಕ್ಕೆ ಇನ್ನೊಂದು ವಾರ ಮಾತ್ರ ಅವಕಾಶ ಇದ್ದು, ಕಾರ್ಯಕರ್ತರು ಶಕ್ತಿ ಮೀರಿ ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.

ಶಾಸಕರಾದ ರಾಜಶೇಖರ ಪಾಟೀಲ ಮತ್ತು ರಹೀಮ್ ಖಾನ್ ಮಾತನಾಡಿದರು. ಸಭೆಯಲ್ಲಿ ಅಭಿಯಾನದ ರಾಜ್ಯ ಎಪಿಆರ್‌ಒ ಮೊತಿಲಾಲ್ ದೇವಕಲ್, ಎಂಎಲ್‌ಸಿ ಅರವಿಂದ ಅರಳಿ, ಮಾಜಿ ಶಾಸಕರಾದ ಅಶೋಕ ಖೇಣಿ, ವಿಜಯಸಿಂಗ್, ವೆಂಕಟೇಶ್, ರಘುನಂದನ್, ಸುರೇಶ ಹೆಗಡೆ, ಮಾಲಾ ನಾರಾಯಣ, ನರಸಿಂಗರಾವ್ ಸೂರ್ಯವಂಶಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪ್ರಧಾನ ಕಾರ್ಯದರ್ಶಿ ದತ್ತು ಮೂಲಗೆ ಇನ್ನಿತರರು ಭಾಗವಹಿಸಿದ್ದರು.

ಬೀದರ್ ನಲ್ಲಿ ಸದಸ್ಯತ್ವಕ್ಕೆ ಅಸಮಾಧಾನ

ಬೀದರ ಜಿಲ್ಲೆಯಲ್ಲಿ ಈವರೆಗೆ ನಡೆದಿರುವ ಕಾಂಗ್ರೆಸ್ ಸದಸ್ಯತ್ವ ಸಮಧಾನಕರವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಬೇಸರ ವ್ಯಕ್ತಪಡಿಸಿದರು. ಏಳು ಜನ ಟಿಕೆಟ್ ಕೇಳುವ ಬಸವಕಲ್ಯಾಣ ಕ್ಷೇತ್ರದಲ್ಲಿ ಕೇವಲ 7600 ಸದಸ್ಯತ್ವ ಅಗಿದೆ. 40 ಸಾವಿರ ಸದಸ್ಯತ್ವ ಮಾಡಿ ಟಿಕೆಟ್ ಕೇಳಿದರೆ ಕಿಮ್ಮತ್ತು ಇರುತ್ತದೆ ಎಂದ ಡಿಕೆಶಿ, ಶಾಸಕ ರಹೀಮ್ ಖಾನ್ ಕ್ಷೇತ್ರವಾದ ಬೀದರ ಉತ್ತರದಲ್ಲಿ 7400 ಆಗಿದ್ದು, ಅವರು ನನ್ನ ಶಿಷ್ಯ ಎಂದು ಹೇಳಿಕೊಳ್ಳಲು ನಾಚಿಕೆ ಆಗುತ್ತದೆ ಎಂದು ವ್ಯಂಗ್ಯವಾಡಿದರು. ಭಾಲ್ಕಿ ಕ್ಷೇತ್ರದಲ್ಲಿ 20 ಸಾವಿರ ನೋಂದಣಿ ಆಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮರ್ಯಾದೆ ಉಳಿಸಿಕೊಂಡಿದ್ದಾರೆ. ಇನ್ನೂ ಕಾಂಗ್ರೆಸ್ ಶಾಸಕರಿಲ್ಲದ ಔರಾದ ಕ್ಷೇತ್ರದಲ್ಲಿ 17 ಸಾವಿರಕ್ಕೂ ಅಧಿಕ ಸದಸ್ಯತ್ವ ಆಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಹುಮನಾಬಾದನಲ್ಲಿ 17 ಸಾವಿರ ಆಗಿದ್ದು, ಇನ್ನೂ ಹೆಚ್ಚಾಗಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

“40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress: “40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.