ಡಿಕೆಶಿ ಸಂಧಾನ ವಿಫಲ, ರಾಜೀನಾಮೆಗೆ ಬದ್ಧ ಎಂದ ಶಾಸಕ ಮುನಿರತ್ನ
Team Udayavani, Jul 6, 2019, 4:40 PM IST
ಬೆಂಗಳೂರು: ಕೆಲವು ಅತೃಪ್ತ ಶಾಸಕರ ಮನವೊಲಿಸುವಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ವಿಫಲರಾಗಿದ್ದು, ನಾವು ನೀಡಿರುವ ರಾಜೀನಾಮೆಗೆ ಈಗಲೂ ಬದ್ಧರಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ಮುನಿರತ್ನ ತಿಳಿಸಿದ್ದಾರೆ.
ಡಿಕೆಶಿ ಜೊತೆ ಸಂಧಾನ ವಿಫಲವಾದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಮುನಿರತ್ನ, ಹಿರಿಯರಾದ ರಾಮಲಿಂಗಾರೆಡ್ಡಿ ಅವರು ನಮ್ಮ ನಾಯಕರು. ನಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ರೆಡ್ಡಿ ಅವರ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ ಎಂದರು.
ನಾವು ಬೆಂಗಳೂರಿನ ಶಾಸಕರೆಲ್ಲಾ ಒಗ್ಗಟ್ಟಾಗಿದ್ದೇವೆ. ಯಾವುದೇ ವಿಚಾರ ಮಾತನಾಡುವುದಿದ್ದರೂ ರಾಮಲಿಂಗಾರೆಡ್ಡಿ ಅವರ ಜೊತೆ ಮಾತನಾಡಿ ಎಂದು ಮುನಿರತ್ನ ಹೇಳಿದರು.
ನಾವ್ಯಾರು ಸಚಿವ ಸ್ಥಾನದ ಆಕಾಂಕ್ಷಿಗಳಲ್ಲ, ಕೆಲವು ಸಣ್ಣ, ಪುಟ್ಟ ಬೇಡಿಕೆಗಳಿದ್ದವು. ಸಂಜೆ ವೇಣುಗೋಪಾಲ್ ಅವರು ಬಂದಾಗ ಚರ್ಚಿಸುತ್ತೇವೆ ಎಂದು ಶಾಸಕ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.