Doctor’s monthly stipend: ಸ್ಥಾನೀಯ ವೈದ್ಯ ವಿದ್ಯಾರ್ಥಿಗಳ ಶಿಷ್ಯವೇತನ ಶೇ. 25 ಏರಿಕೆ
Team Udayavani, Aug 24, 2024, 6:28 AM IST
ಬೆಂಗಳೂರು: ಸ್ಥಾನೀಯ ವೈದ್ಯಕೀಯ ವಿದ್ಯಾರ್ಥಿಗಳ ಹೋರಾಟಕ್ಕೆ ಸ್ಪಂದಿಸಿರುವ ರಾಜ್ಯ ಸರಕಾರ, ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಹಿರಿಯ ರೆಸಿಡೆಂಟ್ ವೈದ್ಯರ ಮಾಸಿಕ ಶಿಷ್ಯವೇತನವನ್ನು ಸರಾಸರಿ ಶೇ.25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪರಿಷ್ಕೃತ ಶಿಷ್ಯವೇತನವು ಆಗಸ್ಟ್ 1ರಿಂದಲೇ ಪೂರ್ವಾನ್ವಯ ಆಗಲಿದೆ.
ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯ ಸರಕಾರಿ ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸ್ನಾತ
ಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಹಿರಿಯ ರೆಸಿಡೆಂಟ್ ವೈದ್ಯರ ಮಾಸಿಕ ಶಿಷ್ಯವೇತನ ಹೆಚ್ಚಳ ಮಾಡಲಾಗಿದೆ.
ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಗಸ್ಟ್ 12ರಿಂದ ಕರ್ನಾಟಕ ಸ್ಥಾನಿಕ ವೈದ್ಯರ ಸಂಘ (ಕೆಎಆರ್‌ಡಿ) ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿತ್ತು. ಸಾವಿರಾರು ವೈದ್ಯರು ಇದರಲ್ಲಿ ಭಾಗವಹಿಸಿದ್ದರು.
ಪರಿಣಾಮ ರಾಜ್ಯಾದ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಮಧ್ಯೆ ಒಂದು ದಿನದ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಎಆರ್‌ಡಿ ಸದಸ್ಯರನ್ನು ಭೇಟಿಯಾಗಿ ಶಿಷ್ಯವೇತನ ಹೆಚ್ಚಳದ ಭರವಸೆ ನೀಡಿದ್ದರು. ಭರವಸೆ ಮೇರೆಗೆ ಮುಷ್ಕರ ಹಿಂಪಡೆದಿದ್ದರು. 2020ರ ಮೇ 16ರಂದು ಈ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿನ ವೈದ್ಯಕೀಯ ವಿದ್ಯಾರ್ಥಿಗಳ ಮಾಸಿಕ ಶಿಷ್ಯವೇತನವನ್ನು ಹೆಚ್ಚಿಸಲಾಗಿತ್ತು. ಇದಾಗಿ ನಾಲ್ಕು ವರ್ಷಗಳ ನಂತರ ಪರಿಷ್ಕರಣೆ ಮಾಡಲಾಗಿದೆ.
ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ವೈದ್ಯ ವಿದ್ಯಾರ್ಥಿಗಳು
ಬೆಂಗಳೂರು: ರಾಜ್ಯ ಸರಕಾರ ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುವ ವೈದ್ಯ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯವೇತನವನ್ನು ಶೇ.25ರಷ್ಟು ಹೆಚ್ಚಿಸಿದ ಆದೇಶದ ಬೆನ್ನಲ್ಲೇ ಶುಕ್ರವಾರ ವೈದ್ಯ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಮುಷ್ಕರವನ್ನು ಹಿಂಪಡೆದಿದ್ದಾರೆ.
ರಾಜ್ಯದ ಸರಕಾರಿ ವೈದ್ಯಕೀಯ ಕಾಲೇಜುಗಳೊಂದಿಗೆ ಸಂಯೋಜಿತವಾಗಿರುವ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ತುರ್ತು ಅಲ್ಲದ ಸೇವೆಗಳನ್ನು ಸ್ಥಗಿತಗೊಳಿಸಿ ಆ. 12ರಿಂದ ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುವ ವೈದ್ಯ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದ್ದರು.
ನಿರಂತರವಾಗಿ ನಡೆದ 12 ದಿನಗಳ ಪ್ರತಿಭಟನೆಯಲ್ಲಿ ರಾಜ್ಯಾದ್ಯಂತ 4 ಸಾವಿರ ವೈದ್ಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಂಘದ ಅಧ್ಯಕ್ಷ ಡಾ| ಸಿರೀಶ್ ಶಿವರಾಮಯ್ಯ ಮಾತನಾಡಿ, ಸ್ವೆ„ಪಂಡ್ ಅನ್ನು ಶೇ.100ಕ್ಕೆ ಏರಿಕೆ ಮಾಡುವಂತೆ ಬೇಡಿಕೆ ಇಡಲಾಗಿತ್ತು. ಪ್ರಸ್ತುತ ಸರಕಾರ ಶಿಷ್ಯ ವೇತನವನ್ನು ಶೇ.25ಕ್ಕೆ ಏರಿಕೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ್ಯಲ್ಲಿ ಸ್ನಾತಕೋತ್ತರ 3,540, ಸೂಪರ್ ಸ್ಪೆಷಾಲಿಟಿ 445 ಮತ್ತು ಹಿರಿಯ ಸ್ಥಾನಿಕ 527 ಸೇರಿ ಒಟ್ಟು 4,312 ಸೀಟುಗಳು ಮಂಜೂರಾಗಿವೆ. ಶೇ. 100ರಷ್ಟು ಶಿಷ್ಯವೇತನ ಪರಿಷ್ಕರಣೆಗೆ ಈ ಸ್ಥಾನಿಕ ವೈದ್ಯರು ಬೇಡಿಕೆ ಇಟ್ಟಿದ್ದರು. ಅವರೊಂದಿಗೆ ಚರ್ಚಿಸಿ, ಶೇ.25 ಪರಿಷ್ಕರಿಸಲಾಗಿದೆ. -ಡಾ| ಶರಣ ಪ್ರಕಾಶ ಪಾಟೀಲ್, ವೈದ್ಯಕೀಯ ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.