Donald Trump ಗೆದ್ದಿದ್ದಕ್ಕೆ ಮದ್ವೆ ಆಗಲ್ಲ, ಮಕ್ಕಳ ಹೆರಲ್ಲ:ಸ್ತ್ರೀಯರ ಪ್ರತಿಜ್ಞೆ
ಅಮೆರಿಕದಲ್ಲಿ ಟ್ರಂಪ್ ವಿರುದ್ಧ ಹೊಸ ಅಭಿಯಾನ
Team Udayavani, Nov 10, 2024, 6:50 AM IST
ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಮತ್ತೆ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ದೇಶದ ಸಾಕಷ್ಟು ಮಹಿಳೆಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ಪುರುಷರ ವಿರುದ್ಧ ಪ್ರತಿಭಟನೆ ಆರಂಭಿಸಿದ್ದು, ಡೇಟ್, ಮದುವೆ, ಲೈಂಗಿಕತೆ ಮತ್ತು ಮಕ್ಕಳನ್ನು ಹೆರುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.
ಚುನಾವಣೆ ಸಮಯದಲ್ಲಿ ಟ್ರಂಪ್ ಅವರ ಸ್ತ್ರೀ ವಿರೋಧಿ ಧೋರಣೆಗಳನ್ನು ಕಮಲಾ ಹ್ಯಾರಿಸ್ ಬಹಿರಂಗಪಡಿಸಿದ್ದು, ಈ 4ಬಿ ಪ್ರತಿಭಟನೆ ಆರಂಭವಾಗಲು ಕಾರಣ ಎನ್ನಲಾಗಿದೆ. ಅಮೆರಿಕದ ಸಾಕಷ್ಟು ಮಹಿಳೆಯರು ಈ ಬಗ್ಗೆ ವೀಡಿಯೋ ಹಂಚಿಕೊಂಡಿದ್ದು, ನಾವೆಲ್ಲರೂ 4ಬಿ ಪ್ರತಿಭಟನೆಯ ಭಾಗ ಎಂದು ಹೇಳಿಕೊಂಡಿದ್ದಾರೆ. ಹೊಸ ಸರಕಾರ ಹಾಗೂ ಪುರುಷರು ತಮ್ಮನ್ನು ತುಳಿಯುತ್ತಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
ಏನಿದು 4ಬಿ ಪ್ರತಿಭಟನೆ?: 4ಬಿ ಪ್ರತಿಭಟನೆ ಮೊದಲು ಆರಂಭವಾಗಿದ್ದು ದಕ್ಷಿಣ ಕೊರಿಯಾದಲ್ಲಿ. ಅಲ್ಲಿನ ಸರಕಾರದ ವಿರುದ್ಧ ಮಹಿಳೆಯರು ಈ ಪ್ರತಿಭಟನೆ ಆರಂಭಿಸಿದ್ದರು. ಕೊರಿಯಾದಲ್ಲಿ “ಇಲ್ಲ’ ಎನ್ನುವ ಶಬ್ದಕ್ಕೆ ಪರ್ಯಾಯವಾಗಿ ಬಳಸುವ “ಬಿ’ ಶಬ್ದವನ್ನು ಈ ಪ್ರತಿಭಟನೆಯ ಹೆಸರಿನಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ.
ಟ್ರಂಪ್ ನಿವಾಸದ ಭದ್ರತೆಗೆ ರೊಬೋ ಶ್ವಾನ ನಿಯೋಜನೆ
ವಾಷಿಂಗ್ಟನ್: ಡೊನಾಲ್ಡ್ ಟ್ರಂಪ್ ಹತ್ಯೆಗೆ ರೂಪಿಸಲಾಗಿದ್ದ ಸಂಚುಗಳು ಬಯಲಾದ ಬೆನ್ನಲ್ಲೇ ಮಾರ್-ಎ-ಲಾಗೋ ಎಸ್ಟೇಟ್‌ನಲ್ಲಿರುವ ಅವರ ನಿವಾಸಕ್ಕೆ ಭಾರೀ ಭದ್ರತೆ ನೀಡಲಾಗಿದೆ. ಟ್ರಂಪ್ ನಿವಾಸದ ಸುತ್ತ ರೊಬೋಟಿಕ್ ಶ್ವಾನಗಳನ್ನು ನಿಯೋಜಿ ಸಲಾಗಿದ್ದು, ಅವು ಗಸ್ತು ತಿರುಗುತ್ತಿರುವ ವೀಡಿಯೋ ವೈರಲ್ ಆಗಿವೆ. ಈ ಶ್ವಾನಗಳು ಬಾಂಬ್ ಮತ್ತು ರಾಸಾಯನಿಕ ಬೆದರಿಕೆ ಪತ್ತೆ ಹಚ್ಚುವಲ್ಲಿ ಸಮರ್ಥವಾಗಿದ್ದು, ಅವುಗಳಿಗೆ ಉತ್ತಮ ತಂತ್ರಜ್ಞಾನ ಹಾಗೂ ಹೈ ರೆಸಲ್ಯೂಶನ್ ಕೆಮರಾಗಳನ್ನು ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.