ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರ ;ಗುಣಮಟ್ಟದಲ್ಲೂ ಪ್ರಶಂಸೆ
2017-18 ರಾಜ್ಯ ಮಟ್ಟದಲ್ಲಿ ಮೊದಲ ಸ್ಥಾನ
Team Udayavani, Mar 12, 2022, 3:10 PM IST
ದೋಟಿಹಾಳ: ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವು ರಾಜ್ಯ ಮಟ್ಟದಲ್ಲಿ ಕಾಯಕಲ್ಪ ಪ್ರಶಸ್ತಿ ಪಡೆದುಕೊಂಡಿದ್ದು. ಇದೀಗ 2021-22ನೇ ಸಾಲಿನ ಗುಣಮಟ್ಟ ವಿಭಾಗದಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿ ಆರೋಗ್ಯ ಕೇಂದ್ರವು ಪ್ರಶಂಸೆಗೆ ಪಾತ್ರವಾಗಿದೆ.
ಕಳೆದ 2016-17ನೇ ಸಾಲಿನಲ್ಲಿ ರಾಜ್ಯ ಮಟ್ಟದಲ್ಲಿ ಕಾಯಕಲ್ಪ ಪ್ರಶಸ್ತಿಯಲ್ಲಿ(ಸಮಾಧಾನಕರ) ಪಡೆದು, ರಾಜ್ಯ ಮಟ್ಟದಲ್ಲಿ 2017-18ನೇ ಸಾಲಿನಲ್ಲಿ ಕಾಯಕಲ್ಪ ಪ್ರಶಸ್ತಿಯನ್ನು ಪಡೆದುಕೊಂಡಿತ್ತು. 2020-21ರಲ್ಲಿ ರಾಷ್ಟ್ರೀಯ ಗುಣಮಟ್ಟದ ಪ್ರಶಸ್ತಿಗೆ ಅರ್ಹತೆ ಪಡೆದುಕೊಂಡು. ಈಗ 2021-22ನೇ ಸಾಲಿನಲ್ಲಿ ಕೇಂದ್ರದ ಎನ್‌ಕ್ಯೂಎಎಸ್‌ಗೆ(ರಾಷ್ಟ್ರೀಯ ಗುಣಮಟ್ಟದ ಭರವಸೆ ಮಾನದಂಡಗಳು)ಆಯ್ಕೆಯಾಗಿದೆ.
ಪ್ರಾಥಮಿಕ ಕೇಂದ್ರದ 24 ಜನ ಸಿಬ್ಬಂದಿಗಳು ಇದು, ಇದರಲ್ಲಿ ವೈದ್ಯಾಧಿಕಾರಿಗಳು, ಫಾರ್ಮಸಿಸ್ಟ್, ಲ್ಯಾಬ್ ಟೆಕ್ನೀಷಿಯನ್, ಐದು ಜನ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಮೂವರು ಸ್ಟಾಫ್‌ನರ್ಸ್, ಒಬ್ಬರು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಹಾಗೂ ಇಬ್ಬರು ಗ್ರೂಪ್ ಡಿ ನೌಕರರಿದ್ದಾರೆ. ಈ ಕೇಂದ್ರದಲ್ಲಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು. ಸಾರ್ವಜನಿಕರಿಗೆ 24/7 ರೀತಿಯಲ್ಲಿ ಉತ್ತಮ ರೀತಿಯಲ್ಲಿ ಸೇವೆ ನೀಡಲಾಗುತ್ತಿದೆ. ಚಿಕಿತ್ಸೆ, ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಲಾಗುತ್ತಿದೆ. ಕೇಂದ್ರದಲ್ಲಿ ಪ್ರತಿ ತಿಂಗಳ ಸುಮಾರು 20-25 ಹೆರಿಗೆ ಪ್ರಕರಣಗಳಾಗುತ್ತಿವೆ. ಮುಂದಿನ ದಿನಗಳಲ್ಲಿ ಇದು ಹೆಚ್ಚಾಗು ಲಕ್ಷಣಗಳು ಇವೆ.
ಪ್ರಾಥಮಿಕ ಆರೋಗ್ಯ ಕೇಂದ್ರವು ಸುಮಾರು ನಾಲ್ಕಿ ಎಕರೆ ಜಾಗದಲ್ಲಿ ಇದು, ಕೇಂದ್ರದ ಆವರಣದಲ್ಲಿ ಗಿಡ ಮೂಲಿಕೆ ಸಸಿಗಳನ್ನು ಬೆಳೆಸಲಾಗಿದ್ದು, ಉತ್ತಮವಾಗಿ ಪರಿಸಸವಿವಂತೆ ಕಾಳಜಿ ವಹಿಸಲಾಗಿದೆ.
ಡೆಂಗೆ-ಚಿಕೂನ್ ಗುನ್ಯಾ ತಡೆಗೆ ಕೇಂದ್ರದ ವ್ಯಾಪ್ತಿಯಲ್ಲಿ ಹಳ್ಳಿಗಳಲ್ಲಿ ಲಾರ್ವಾ ಸಮೀಕ್ಷೆ ಮಾಡಲಾಗಿದು. ಇದರ ಜೊತಗೆ ಲಾರ್ವಾಹಾರ ಮೀನಗಳ ಸಾಕಣೆಗೆ ತೊಟ್ಟಿ ನಿರ್ಮಿಸಲಾಗಿದೆ. ಈ ಎಲ್ಲಾ ಆಂಶಗಳನ್ನಾಧರಿಸಿ ಈ ಕೇಂದ್ರಕ್ಕೆ ಪ್ರಶಸ್ತಿ ನೀಡಲಾಗಿದೆ.
ಸದ್ಯ ಕೇಂದ್ರದ ಕಾಂಪೌಂಡ್ ಕಾಮಗಾರಿ ಆರಂಭವಾಗಿದ್ದು. ನಂತರ ಆವರಣದಲ್ಲಿ ಇನ್ನೂಷ್ಟು ಗಿಡಗಳನ್ನು ಬೆಳೆಸಲಾಗುತ್ತದೆ.
ಪ್ರಾಥಮಿಕ ಆರೋಗ್ಯ ಕೇಂದ್ರವು ಇಂದು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಯ್ಕೆಯಾಗಿರುವುದಕ್ಕೆ ಇಲ್ಲಿನ ಸಿಬ್ಬಂದಿ ಒಗ್ಗಟ್ಟಿನ ಕೆಲಸ ಕಾರಣವಾಗಿದೆ. ವೈದ್ಯಾಧಿಕಾರಿ ಡಾ|| ಸಂತೋಷಕುಮಾರ ಬಿರದಾರ ಅವರು ಕಳೆದ ಒಂದು ವರ್ಷದಿಂದ ಉತ್ತಮ ಸೇವೆ ಸಲಿಸುತ್ತಿದ್ದು. ಕೇಂದ್ರದ ಸಿಬ್ಬಂದಿಗಳನ್ನು ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡು ಹೋಗುವ ಮೂಲಕ ಸಾಧನೆಗೆ ಕಾರಣರಾಗಿದ್ದಾರೆ.
ಸರಕಾರಿ ಆಸ್ಪತ್ರೆಗಳೆಂದರೆ ಜನರು ಹಿಂದಕ್ಕೆ ಸರಿಯುವ ಇಂತಹ ಕಾಲದಲ್ಲಿ ಗ್ರಾಮೀಣ ಭಾಗದ ಈ ಪ್ರಾಥಮಿಕ ಆರೋಗ್ಯ ಕೇಂದ್ರವು ದೋಟಿಹಾಳ ಗ್ರಾಮದ ಸುತ್ತಮುತ್ತಲ್ಲ ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡುತ್ತಿರುವುದರಿಂದ ಜನರಿಗೆ ಮಾತ್ರ ಅಲ್ಲದೆ ಸರಕಾದ ಮಟ್ಟದಲ್ಲಿಯೂ ಮೆಚ್ಚುಗೆಗೆ ಪಾತ್ರವಾಗಿದೆ.
ನಮ್ಮ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮಗಳನ್ನು ಉತ್ತಮ ಸೇವೆಯೊಂದಿಗೆ ಸಾರ್ವಜನಿಕ ಪ್ರತಿಯೊಬ್ಬರಿಗೂ ತಲುಪಿಸುವ ಮುಖ್ಯ ಉದ್ದೇಶವನ್ನು ನಾವು ಹೊಂದಿದ್ದೇವೆ. ಇಂದು ನಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವುದು ನಮ್ಮೆಲ್ಲ ಸಿಬ್ಬಂದಿಗಳ ಪರಿಶ್ರಮದಿಂದ ಮಾತ್ರ.
– ಡಾ|| ಸಂತೋಷಕುಮಾರ ಬಿರದಾರ
ವೈದ್ಯಾಧಿಕಾರಿ ಪ್ರಾಥಮಿಕ ಕೇಂದ್ರ ದೋಟಿಹಾಳ.
ದೋಟಿಹಾಳ ಪ್ರಾಥಮಿಕ ಕೇಂದ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವದು ನಮ್ಮ ತಾಲೂಕಿಗೆ ಹೆಮ್ಮೆ ವಿಷಯ. ಇದುವರೆಗೂ ತಾಲೂಕಿನಲ್ಲಿ ಯಾವುದೇ ಆರೋಗ್ಯ ಕೇಂದ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿಲ್ಲಿ. ಇದೇ ಮೊದಲ ಭಾರಿಗೆ ದೋಟಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರ ಆಯ್ಕೆಯಾಗಿದೆ. ಇದನ್ನೇ ಮಾದರಿಯಾಗಿ ಇಟ್ಟುಕೊಂಡು ಉಳಿದ ಕೇಂದ್ರಗಳನ್ನು ಅಭಿವೃದ್ಧಿ ಮಾಡುತ್ತೇವೆ.
– ಡಾ||ಆನಂದ ಗೋಟೂರ.
ತಾಲೂಕ ಆರೋಗ್ಯ ಅಧಿಕಾರಿ ಕುಷ್ಟಗಿ.
– ಮಲ್ಲಿಕಾರ್ಜುನ ಮೆದಿಕೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.