ನಾನು ಆರೋಗ್ಯ ಸಚಿವನಾಗಲು ಡಾ.ಜಿ.ಪರಮೇಶ್ವರ್ ಅವರೇ ಕಾರಣ: ಸಚಿವ ಡಾ.ಸುಧಾಕರ್

ನಾವೀಗ ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಅದರೆ... ಸುಧಾಕರ್ ಜನ ಮೆಚ್ಚುವ ಕೆಲಸ ಮಾಡಿದ್ದಾರೆ...!

Team Udayavani, Dec 24, 2022, 8:08 PM IST

1-dsdsadsa

ಕೊರಟಗೆರೆ: ನನಗೆ ಎಂಬಿಬಿಎಸ್ ಮಾಡಲು1993 ರಲ್ಲಿ ಡಾ. ಜಿ ಪರಮೇಶ್ವರವರು ಸೀಟ್ ಕೊಟ್ಟಿದ್ದರು. ಪ್ರಥಮ ಬಾರಿ ಎಂದರೆ 2013 ರಲ್ಲಿ ಮೊದಲ ಬಾರಿ ಶಾಸಕನಾಗಲು ಅವರೇ ಟಿಕೆಟ್ ನೀಡಿದ್ದರು. ಈ ಎಲ್ಲಾ ಅವಕಾಶದಿಂದಲೇ ನಾನು ಇಂದು ಆರೋಗ್ಯ ಸಚಿವನಾಗಲು ಸಾಧ್ಯವಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.

ಅವರು ದೊಡ್ಡಸಾಗ್ಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ , ನಾವೀಗ ಬೇರೆ ಬೇರೆ ಪಕ್ಷದಲ್ಲಿದ್ದೇವೆ. ಅದರೆ ಬೇರೆ ಮಾತು ನಾನು ರಾಜಕೀಯದ ಭಾಷಣ ಮಾಡಲು ಬಂದಿಲ್ಲ.ಡಾ.ಜಿ ಪರಮೇಶ್ವರರವರ ಆದರ್ಶದಾಯಕ ಆತ್ಮೀಯ ಮಾತು.ಮೃದು ಸ್ವಭಾವದವರು ಎಲ್ಲರನ್ನೂ ಪ್ರೀತಿ ಮಾಡುವಂತವರು ಎಂದು ಬಣ್ಣಿಸಿದರು.

ಕಳೆದ 2013ರಲ್ಲಿ ಅವರ ಜೊತೆಯಲ್ಲಿಯೇ ಇದ್ದೆ. ನೀವು ಸರಿಯಾಗಿ ಆಶೀರ್ವಾದ ಮಾಡಿದ್ದಿದ್ದರೆ ಈ ರಾಜ್ಯದ ಚುಕ್ಕಾಣಿ ಹಿಡಿಯುತ್ತಿದ್ದರು. ನಿಮ್ಮ ಮೇಲೆ ಆ ಒಂದು ಬೇಸರವಿದೆ. 2013 ರಲ್ಲಿ ಸೋಲಾಗಿದ್ದು ದುರದೃಷ್ಟ. ನಾವು ಅಂದು ದೊಡ್ಡ ಕನಸನ್ನು ಕಟ್ಟಿಕೊಂಡಿದ್ದೇವು. ಅದರೆ ಭವಿಷ್ಯದಲ್ಲಿ ಅವರಿಗೆ ಉತ್ತಮ ಅವಕಾಶವಿದೆ.ಆ ಭಗವಂತ ಆಶೀರ್ವಾದ ಮಾಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುವೆ ಎಂದರು.

ನಾನು ಎರಡೂ ಬಾರಿ ನಾಮ ಪತ್ರ ಸಲ್ಲಿಸ ಬೇಕಾದಾಗಲೂ ಕೂಡ ಅವರ ಧರ್ಮಪತ್ನಿಯವರೂ ನನಗೆ ತಾಯಿಯ ಸಮಾನರಾಗಿರುವ ಕನ್ನಿಕಾದೇವಿಯವರೂ ಮತ್ತು ಪರಮೇಶ್ವರ್ ಅವರ ಹತ್ತಿರ ಆಶೀರ್ವಾದ ಪಡೆದೇ ನಾಮ ಪತ್ರ ಸಲ್ಲಿಸಿದ್ದೆ. ಅದರೆ 2019 ರ ವೇಳೆಗೆ ನಾನು ಬಿಜೆಪಿಯಿಂದ ನಾಮಪತ್ರ ಸಲ್ಲಿಸುವಾಗಲೂ ಮನಸ್ಸಿನಲ್ಲಿಯೇ ನೆನೆದು ಸಲ್ಲಿಸಿದ್ದೇನೆ. ಇಂದು ಅವರ ಕ್ಷೇತ್ರಕ್ಕೆ ಆರೋಗ್ಯ ಭಾಗ್ಯವನ್ನೂ ಕೋಡುತ್ತಿರುವುದು ನನ್ನ ಭಾಗ್ಯ. ಕೊರಟಗೆರೆ ಕ್ಷೇತ್ರದಲ್ಲಿ ಡಾ.ಜಿ.ಪರಮೇಶ್ವರ ಋಣ ತಿರಿಸುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಅವರ ಆತ್ಮೀಯತೆ ಎಂದೂ ಮರೆಯಲೂ ಸಾಧ್ಯವಿಲ್ಲ. ತುಮಕೂರು ಅಭಿವೃದ್ಧಿ ವಿಚಾರದಲ್ಲಿ ಎಂದೂ ರಾಜಿಯಿಲ್ಲ ಎಂದರು.

17 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸುಧಾಕರ್ ಚಾಲನೆ

ಕೊರಟಗೆರೆ ತಾಲೂಕಿನ ದೊಡ್ಡಸಾಗ್ಗೆರೆ, ಬುಕ್ಕಾಪಟ್ಟಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶನಿವಾರ ಏರ್ಪಡಿಸಲಾಗಿದ್ದ 5 ಕೋಟಿ ರೂ. ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೂತನ ಕಟ್ಟಡದ ಉದ್ಘಾಟನೆ ಹಾಗೂ 12 ಕೋಟಿ 50 ಲಕ್ಷ ರೂ. ವೆಚ್ಚದ ತೋವಿನಕೆರೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಮಾತನಾಡಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ನನ್ನ ನಡುವೆ ತಂದೆ-ಮಗನ ಸಂಬಂಧವಿದೆ.ಅವರ ಅಭಿಮಾನಕ್ಕೆ ನಾನು ಅಭಾರಿ ಆಗಿದ್ದೇನೆ. ಆರೋಗ್ಯ ಸೇವೆಯಲ್ಲಿ ಸುಧಾಕರ್ ಜನರು ಮೆಚ್ಚುವಂತಹ ಕೆಲಸ ಮಾಡಿದ್ದಾರೆ. ಕೊರೊನಾ ನಿರ್ವಹಣೆಯ ಜವಾಬ್ದಾರಿಯಲ್ಲಿ ಯಶಸ್ಸು ಕಂಡಿದ್ದಾರೆ. ಕೊರಟಗೆರೆಗೆ ಸಾರ್ವಜನಿಕ ಆಸ್ಪತ್ರೆ, ವೈದ್ಯಕೀಯ ತಂಡ ಮತ್ತು ಸಿಬ್ಬಂದಿಗಳನ್ನು ಕೋಟ್ರೇ ನೀವೇ ನನ್ನ ಕ್ಷೇತ್ರದ ನಿಜವಾದ ದೇವರು ಎಂದು ತಿಳಿಸಿದರು.

ಸಮಾರಂಭದಲ್ಲಿ ಮಾಜಿ ಸಚಿವ ಸಿ.ವೀರಣ್ಣ, ಡಿಹೆಚ್‌ಓ ಡಾ.ಮಂಜುನಾಥ, ಟಿಹೆಚ್‌ಓ ವಿಜಯಕುಮಾರ್, ತಹಶೀಲ್ದಾರ್ ನಾಹೀದಾ, ಸ್ವಾತಂತ್ರ ಹೋರಾಟಗಾರ ಕೆ.ಸಿ.ನಾರಾಯಣಪ್ಪ, ಗ್ರಾಪಂ ಅಧ್ಯಕ್ಷ ಶಿವರಾಮು, ರಾಮಯ್ಯ, ಮುಖಂಡರಾದ ಅರಕೆರೆಶಂಕರ್, ಅನಿಲ್‌ಕುಮಾರ್, ಸುಜಯ್.ಪಿ.ಮಂಜುನಾಥ, ವಿನಯ್‌ಕುಮಾರ್ ಸೇರಿದಂತೆ ಇತರರು ಇದ್ದರು.

ಕಾಂಗ್ರೆಸ್-ಬಿಜೆಪಿ ಬೆಂಬಲಿಗರ ಜೈಕಾರ..
ದೊಡ್ಡಸಾಗ್ಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡದ ಉದ್ಘಾಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಡಾ.ಜಿ.ಪರಮೇಶ್ವರ್ ಮತ್ತು ಜೈ ಹನುಮಾನ್ ಪರವಾಗಿ ಜೈಕಾರ ಕೊಗಿದರೇ ಬಿಜೆಪಿ ಕಾರ್ಯಕರ್ತರು ನರೇಂದ್ರಮೋದಿ ಮತ್ತು ಜೈಶ್ರೀರಾಮ್ ಪರವಾಗಿ ಘೋಷಣೆ ಕೂಗಿದರು.
ಇದೇ ಸಂದರ್ಭದಲ್ಲಿ ಸಮಾರಂಭದ ಉದ್ಘಾಟನೆಗೆ ಆಗಮಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಕಾಲಿಗೆ ನಮಸ್ಕರಿಸಿ ಆರ್ಶಿವಾದ ಪಡೆದರು.

100 ಬೆಡ್‌ಗಳ ಸರಕಾರಿ ಆಸ್ಪತ್ರೆಯ ಆಶ್ವಾಸನೆ..

ಕೊರಟಗೆರೆ ಪಟ್ಟಣದಲ್ಲಿ 100 ಬೆಡ್‌ಗಳ ಸರಕಾರಿ ಆಸ್ಪತ್ರೆ, ಕೋಳಾಲ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಕೆ, ವೈದ್ಯಕೀಯ ತಂಡ ಮತ್ತು ಸಿಬ್ಬಂದಿಗಳ ನೇಮಕ ಸೇರಿದಂತೆ ಕೊರಟಗೆರೆ ಕ್ಷೇತ್ರಕ್ಕೆ ಅವಶ್ಯಕತೆ ಇರುವಂತಹ ಆರೋಗ್ಯ ಸೇವೆಯನ್ನು ತ್ವರಿತವಾಗಿ ನೀಡುತ್ತೇನೆ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಕೇಳಿದ ಎಲ್ಲಾ ಬೇಡಿಕೆಯನ್ನು ತ್ವರಿತವಾಗಿ ಪೂರೈಸುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು.

ಭಾರತ ದೇಶದಲ್ಲಿ 700 ಜನರಿಗೆ ಒಬ್ಬ ವೈದ್ಯರು ಇದ್ದಾರೇ. ಆರೋಗ್ಯ ಕ್ಷೇತ್ರದಲ್ಲಿ ಇನ್ನಷ್ಟು ವಿಶೇಷ ಬದಲಾವಣೆ ಅಗತ್ಯ. ಆರೋಗ್ಯ ಕ್ಷೇತ್ರದ ಬಗ್ಗೆ ಡಾ.ಕೆ.ಸುಧಾಕರ್‌ಗೆ ವಿಶೇಷ ಕಾಳಜಿ ಇದೆ. ಕೊರಟಗೆರೆ ಕ್ಷೇತ್ರದ ಆರೋಗ್ಯ ಕ್ಷೇತ್ರಕ್ಕೆ ಆರೋಗ್ಯ ಸಚಿವರು ವಿಶೇಷ ಅನುಧಾನ ನೀಡಬೇಕಿದೆ. ವೈದ್ಯಕೀಯ ತಂಡ ಮತ್ತು ಸಿಬಂದಿಗಳ ಕೊರತೆ ಪೂರೈಸಿದರೇ ಕೊರಟಗೆರೆ ಕ್ಷೇತ್ರದ ಜನತೆ ನಿಮ್ಮನ್ನು ದೇವರಂತೆ ಪೂಜಿಸುತ್ತಾರೆ- ಡಾ.ಜಿ.ಪರಮೇಶ್ವರ್

ಬುಕ್ಕಾಪಟ್ಟಣ ಬಡಜನರ ಬಹುದಿನದ ಆಸ್ಪತ್ರೆಯ ಬೇಡಿಕೆಯು ಈಗ ನನಸಾಗಿದೆ. ವೈದ್ಯಕೀಯ ಸೇವೆಗೆ ಮತ್ತೊಂದು ಹೆಸರೇ ಡಾ.ಜಿ.ಪರಮೇಶ್ವರ್. ಬಿಜೆಪಿ ಪಕ್ಷದ ಆರೋಗ್ಯ ಸಚಿವರೇ ಪರಮೇಶ್ವರ್‌ರನ್ನ ಮೆಚ್ಚಿ ಹಾಡಿ ಹೋಗಳಿರುವುದೇ ಪ್ರಮುಖ ಸಾಕ್ಷಿ ಅಲ್ಲವೇ. 2023ಕ್ಕೆ ಮತ್ತೆ ಕೊರಟಗೆರೆ ಕ್ಷೇತ್ರದಿಂದ ಪರಮೇಶ್ವರ್‌ಗೆ ಪೂರ್ಣ ಬೆಂಬಲ ಇರಲಿ ಎಂದು ಹಾರೈಸುವೆ.-ಸಿ.ವೀರಣ್ಣ, ಮಾಜಿ ಸಚಿವ. ಕೊರಟಗೆರೆ

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.