Drinking Water: ಎತ್ತಿನಹೊಳೆ ಚಾಲನೆಯು ರಾಜಕೀಯ ಜೀವನದ ಸಾರ್ಥಕ ಕ್ಷಣ: ಸಿಎಂ
ಬರದ ಭೂಮಿಗೆ ಜೀವಜಲವನ್ನುಣಿಸಲು ಸಿದ್ಧವಾಗಿ ನಿಂತ ಎತ್ತಿನಹೊಳೆ
Team Udayavani, Sep 6, 2024, 3:28 AM IST
ಬೆಂಗಳೂರು: ಶಂಕುಸ್ಥಾಪನೆ ನೆರವೇರಿಸಿದ್ದ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ತಾವೇ ಚಾಲನೆ ನೀಡುತ್ತಿರುವುದು “ರಾಜಕೀಯ ಜೀವನದ ಇನ್ನೊಂದು ಸಾರ್ಥಕ ಕ್ಷಣ’ ಎಂದು ಮುಖ್ಯಮಂತ್ರಿ ಸಂತಸ ಹಂಚಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಎತ್ತಿನಹೊಳೆ ಯೋಜನೆ ಬಗ್ಗೆ ಪೋಸ್ಟ್ ಮಾಡಿರುವ ಅವರು, 2014ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದ ವೇಳೆ ವಿಸ್ತೃತ ಯೋಜನಾ ವರದಿಗೆ ಅನುಮೋದನೆ ನೀಡಿ, ನಾನೇ ಶಂಕುಸ್ಥಾಪನೆ ನೆರವೇರಿಸಿದ್ದ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಮುಕ್ತಾಯವಾಗಿ, ಬರದ ಭೂಮಿಗೆ ಜೀವಜಲವನ್ನುಣಿಸಲು ಸಿದ್ಧವಾಗಿ ನಿಂತಿದೆ. ಇದು ನನ್ನ ರಾಜಕೀಯ ಜೀವನದ ಇನ್ನೊಂದು ಸಾರ್ಥಕ ಕ್ಷಣ ಎಂದಿದ್ದಾರೆ.
ಈ ಯೋಜನೆಯಿಂದ ಮಳೆಗಾಲದಲ್ಲಿ ಸಮುದ್ರ ಪಾಲಾಗುತ್ತಿದ್ದ 24.01 ಟಿಎಂಸಿ ನೀರಿನ ಸದ್ಬಳಕೆ ಆಗಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ 7 ಜಿಲ್ಲೆಗಳ 29 ತಾಲೂಕಿನ 38 ಪಟ್ಟಣ ಪ್ರದೇಶದಲ್ಲಿನ 6,657 ಗ್ರಾಮಗಳ ಸುಮಾರು 75.59 ಲಕ್ಷ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ.
ಕುಡಿಯುವ ನೀರು ಪೂರೈಕೆಗಾಗಿ 14.05 ಟಿಎಂಸಿ ಹಾಗೂ ಕೆರೆ ತುಂಬಿಸಲು 9.95 ಟಿಎಂಸಿ ನೀರು ಬಳಕೆಯಾಗಲಿದೆ. 23,251 ಕೋಟಿ ರೂ. ವೆಚ್ಚದ ಈ ಬೃಹತ್ ಯೋಜನೆಗಾಗಿ ಇದುವರೆಗೆ 16,152 ಕೋಟಿ ರೂ. ವೆಚ್ಚ ಮಾಡಲಾಗಿದೆ. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಯೋಜನೆಯನ್ನು ಲೋಕಾರ್ಪಣೆಗೊಳಿಸಲಿದ್ದೇನೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindi ಹೇರಿದರೆ ಗೋಕಾಕ್ ಮಾದರಿ ಹೋರಾಟ: ಸಾ.ರಾ.ಗೋವಿಂದು
Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?
Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ
C.T.Ravi Case: ನಕ್ಸಲರು ರವಿಗೆ ಗುಂಡು ಹೊಡೆಯಲಿ ಎಂದು ಕರೆದೊಯ್ದರೇ?: ಆರ್.ಅಶೋಕ್
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.