Drinking water scheme: ನಿರ್ಣಾಯಕ ಘಟ್ಟ ತಲುಪಿದ ಎತ್ತಿನಹೊಳೆ ಯೋಜನೆ: ಡಿಸಿಎಂ
2027ರ ಅಂತ್ಯಕ್ಕೆ ಆದ್ಯತೆ ಮೇರೆಗೆ ಯೋಜನೆ ಪೂರ್ಣ: ಡಿ.ಕೆ. ಶಿವಕುಮಾರ್
Team Udayavani, Aug 24, 2024, 12:42 AM IST
ಬೆಂಗಳೂರು: ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ತುಮಕೂರು ವ್ಯಾಪ್ತಿಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಈಗ ನಿರ್ಣಾಯಕ ಘಟ್ಟ ತಲುಪಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇತ್ತೀಚೆಗೆ ಯೋಜನೆಯ ಗುರುತ್ವ ಕಾಲುವೆಗೆ ಯಶಸ್ವಿಯಾಗಿ ನೀರು ಹರಿಸಲಾಗಿದ್ದು, ಗುರುತ್ವ ಕಾಲುವೆಯಲ್ಲಿನ ನೀರು 32.50 ಕಿ.ಮೀ.ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ವೇದಾ ವ್ಯಾಲಿ ಪ್ರವೇಶಿಸಿ, ಹಳೇಬೀಡು ಮತ್ತು ಬೆಳವಾಡಿ ಕೆರೆಗಳು ತುಂಬಿ ಕೋಡಿ ಬಿದ್ದು, ವಾಣಿವಿಲಾಸ ಸಾಗರದತ್ತ ನೀರು ಹರಿಯುತ್ತಿದೆ. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗಾಗಿ ಜುಲೈ-2024ರ ಅಂತ್ಯದವರೆಗೆ ಒಟ್ಟಾರೆ ಸಂಚಿತ ರೂ. 16,152.05 ಕೋಟಿ ರೂ.ಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದ್ದು, 2027ರ ಅಂತ್ಯಕ್ಕೆ ಆದ್ಯತೆ ಮೇರೆಗೆ ಪೂರ್ಣಗೊಳಿಸುವ ಗುರಿ ಹೊಂದಿದೆ.
ಯೋಜನೆ ಅಡಿ ಹಾಸನದ ಸಕಲೇಶಪುರ ತಾಲೂಕಿನ, ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ (139 ದಿನಗಳು) 24.01 ಟಿಎಂಸಿ ಪ್ರಮಾಣದ ಪ್ರವಾಹದ ನೀರನ್ನು ಏಳು ಜಿಲ್ಲೆಗಳ ಬರಪೀಡಿತ 29 ತಾಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6,657 ಗ್ರಾಮಗಳ ಸುಮಾರು 75.59 ಲಕ್ಷ (ಅಂದಾಜು ಜನಸಂಖ್ಯೆ) ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿಎಂಸಿ ಕುಡಿಯುವ ನೀರನ್ನು ಒದಗಿಸುವ ಉದ್ದೇಶ ಹೊಂದಲಾಗಿದೆ. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.