Mumbai: ಮುಂಬೈಗೆ ಉಗ್ರರು ಪ್ರವೇಶಿಸಿದ್ದಾರೆ….ನಕಲಿ ಕರೆ ಮಾಡಿದಾತ ಈಗ ಪೊಲೀಸರ ಅತಿಥಿ!
Team Udayavani, Nov 27, 2023, 1:32 PM IST
ಮುಂಬೈ: ಮುಂಬಯಿಗೆ ಕೆಲವು ಉಗ್ರರು ಪ್ರವೇಶಿಸಿದ್ದಾರೆ ಎಂದು ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ದೂರವಾಣಿ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Pakistan; ಬ್ಯಾಟ್ ನಲ್ಲಿ ಪಾಲಿಸ್ತಿನ್ ಧ್ವಜದ ಸ್ಟಿಕ್ಕರ್ ಹಾಕಿದ ಪಾಕ್ ಬ್ಯಾಟರ್ ಗೆ ದಂಡ
ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ಮುಂಬೈಗೆ ಕೆಲವು ಉಗ್ರರು ಬಂದಿದ್ದಾರೆ ಎಂದು ತಿಳಿಸಿದ್ದ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕರೆ ಮಾಡಿದ ವ್ಯಕ್ತಿಯ ಜಾಡು ಹಿಡಿದು ಹೊರಟಾಗ, ಕುಡಿದ ಅಮಲಿನಲ್ಲಿ ಈತ ನಕಲಿ ಕರೆ ಮಾಡಿರುವುದು ಪತ್ತೆಯಾಗಿತ್ತು ಎಂದು ವರದಿ ವಿವರಿಸಿದೆ.
ವರದಿಯ ಪ್ರಕಾರ, ಅಂದಾಜು 2-3 ಉಗ್ರರು ಮುಂಬೈ ಪ್ರವೇಶಿಸಿದ್ದು, ಅವರು ಮನ್ ಕುರ್ದ್ ನ ಏಕ್ತಾ ನಗರಕ್ಕೆ ಆಗಮಿಸಿದ್ದಾರೆ. ಅವರು ಏನೋ ಸಂಚು ನಡೆಸುತ್ತಿದ್ದಾರೆ ಎಂದು ನಕಲಿ ಕರೆ ಮಾಡಿದಾತ ಪೊಲೀಸರಿಗೆ ಮಾಹಿತಿ ನೀಡಿದ್ದ.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ವ್ಯಕ್ತಿಯನ್ನು ಪತ್ತೆ ಹಚ್ಚಿದಾಗ ಆತ ಕುಡಿದ ಅಮಲಿನಲ್ಲಿ ಪೊಲೀಸ್ ಕಂಟ್ರೋಲ್ ರೂಂಗೆ ನಕಲಿ ಕರೆ ಮಾಡಿರುವುದು ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಕ್ಷ್ಮಣ್ ನಾನಾವರೆ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.