ನಗರಗಳಲ್ಲಿ ಡಲ್‌, ಗ್ರಾಮಗಳಲ್ಲಿ ಥ್ರಿಲ್‌


Team Udayavani, Apr 19, 2019, 6:30 AM IST

nagara

ಬೆಂಗಳೂರು: ಗ್ರಾಮಗಳಲ್ಲಿ ಇರುವಷ್ಟು “ಮತ ಸಂಭ್ರಮ’ ನಗರಗಳಲ್ಲಿ ಕಾಣಿಸಲೇ ಇಲ್ಲ. ಅದರಲ್ಲೂ ಬೆಂಗ ಳೂರು ನಗರದ 4 ಕ್ಷೇತ್ರಗಳಲ್ಲಂತೂ ಅತ್ಯಂತ ಕಡಿಮೆ ಮತದಾನವಾಗಿದೆ.

ಮೊದಲ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ನಡೆದ ಮತ ದಾನ ದಲ್ಲಿ ಮಂಡ್ಯ ಕ್ಷೇತ್ರದಲ್ಲಿ ಗರಿಷ್ಠ ಮತದಾನವಾಗಿದೆ. ಇಲ್ಲಿ ಶೇ.80.23 ಮತದಾನವಾಗಿದೆ. ಅತೀ ಕಡಿಮೆ ಎಂದರೆ, ಬೆಂಗಳೂರು ಕೇಂದ್ರದಲ್ಲಿ ಶೇ.49.76ರಷ್ಟು ಮತದಾನವಾಗಿದ್ದು, ಓಟ್‌ ಮಾಡಲು ನಗರದ ಜನ ನಿರಾಸಕ್ತಿ ತೋರಿದ್ದಾರೆ. ಉಳಿದಂತೆ ದ.ಕ.ದಲ್ಲೂ ಉತ್ತಮ ಮತದಾನವಾಗಿದೆ. 14 ಕ್ಷೇತ್ರಗಳಲ್ಲಿ ಒಟ್ಟಾರೆಯಾಗಿ ಶೇ.67.67ರಷ್ಟು ಮತದಾನವಾಗಿದೆ.

ಪ್ರತಿ ಬಾರಿಯಂತೆಯೇ ಈ ಬಾರಿಯೂ ಕೆಲವು ಕಡೆಗಳಲ್ಲಿ ಇವಿಎಂಗಳ ದೋಷ ಹಾಗೂ ಸಣ್ಣಪುಟ್ಟ ಗೊಂದಲದ ಘಟನೆ ಗಳು ನಡೆದಿವೆ. ಉಳಿದಂತೆ ಮತದಾನ ಬಹುತೇಕ ಶಾಂತಿಯುತ ವಾಗಿತ್ತು. ಇವಿಎಂ ಯಂತ್ರದೋಷದಿಂದ ಕೆಲವೆಡೆ ಮತದಾನ ವಿಳಂಬ, ಅಭ್ಯರ್ಥಿಗಳ ಪರ ಕಾರ್ಯಕರ್ತರ ನಡುವೆ ವಾಕ್ಸಮರ, ಮೂಲ ಸೌಕರ್ಯ ಒದಗಿಸಿಲ್ಲ ಎಂದು ಮತದಾನ ಬಹಿಷ್ಕಾರ, ಮತ ದಾರ ರಿಗೆ ಹಂಚಲು ತಂದಿದ್ದ ಹಣ ವಶ ಹಾಗೂ ಹಲವರ ಬಂಧನ ಪ್ರಕರಣಗಳು ನಡೆದಿವೆ. ಮತದಾರರ ಪಟ್ಟಿಯಿಂದ ಹೆಸರು ತೆಗೆಯ ಲಾಗಿದೆ ಎಂಬ ಆರೋಪಗಳು ಈ ಬಾರಿಯೂ ಕೇಳಿಬಂದವು. ಚಾಮರಾಜನಗರದಲ್ಲಿ ಹೃದಯಾಘಾತದಿಂದ ಚುನಾ ವಣಾಧಿ ಕಾರಿ ಶಾಂತಮೂರ್ತಿ, ಮಂಡ್ಯದಲ್ಲಿ ಬೊಮ್ಮೇಗೌಡ ಎಂಬ ವ್ಯಕ್ತಿ ಮತದಾನ ಮಾಡಿದ ಅನಂತರ ಮೃತಪಟ್ಟಿದ್ದಾರೆ.

ಸುಮಾ-ನಿಖೀಲ್‌ ಬೆಂಬಲಿಗರ ನಡುವೆ ಮಾರಾಮಾರಿ
ಹೈ ವೋಲ್ಟೆàಜ್‌ ಕ್ಷೇತ್ರ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಮದ್ದೂರಿನ ದೊಡ್ಡರಸಿಕೆರೆಯಲ್ಲಿ ಮಾತಿನ ಚಕಮಕಿ ಮತ್ತು ಹೊಡೆದಾಟ ಸಂಭವಿಸಿದೆ. ದೊಡ್ಡರಸಿನಕೆರೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖೀಲ್‌ ಅವರು ರೋಡ್‌ಶೋ ಮೂಲಕ ಪ್ರಚಾರ ನಡೆಸಿದರು. ದೊಡ್ಡರಸಿನಕೆರೆಯಲ್ಲಿ ಮತದಾನ ಮಾಡಲು ಬಂದಿದ್ದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಮತದಾನದ ಅನಂತರ ಗ್ರಾಮದಲ್ಲಿ ಪಾದಯಾತ್ರೆ ಮೂಲಕ ಪ್ರಚಾರ ಮಾಡಲು ಮುಂದಾದಾಗ ಜೆಡಿಎಸ್‌ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿ ನಿಖೀಲ್‌ಗೆ ಅವಕಾಶ ಕೊಟ್ಟು ಇವರಿಗೆ ಯಾಕೆ ಆಕ್ಷೇಪ ಎಂದು ವಿರೋಧ ತೋರಿದರು. ಆಗ ಸುಮಲತಾ ಬೆಂಬಲಿಗರು ಮತ್ತು ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಎರಡೂ ಗುಂಪುಗಳನ್ನು ಚದುರಿಸಿದರು.

ಮಳವಳ್ಳಿಯ ಬಸವನಪುರದ ಮತಗಟ್ಟೆಯೊಂದರಲ್ಲಿ ಸುಮಲತಾ ಪರ ಏಜೆಂಟ್‌ ಚೆನ್ನಬಸವಯ್ಯ ಅವರ ಮೇಲೆ ಜೆಡಿಎಸ್‌ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆಯೂ ಸಂಭವಿಸಿದೆ. ವೃದ್ಧರನ್ನು ಮತಗಟ್ಟೆಗೆ ಕರೆತರುತ್ತಿದ್ದ ಜೆಡಿಎಸ್‌ ಕಾರ್ಯಕರ್ತರು ನಿಖೀಲ್‌ ಪರ ಮತ ಹಾಕಿಸುತ್ತಿದ್ದಾರೆ ಎಂದು ಸುಮಲತಾ ಪರ ಏಜೆಂಟ್‌ ಆರೋಪಿಸಿ ಪ್ರಶ್ನಿಸಿದ್ದರಿಂದ ಜೆಡಿಎಸ್‌ ಕಾರ್ಯಕರ್ತರು ಅವರ ಶರ್ಟ್‌ ಹರಿದು ಹಲ್ಲೆ ನಡೆಸಿದ್ದಾರೆ.ಬೆಂಗಳೂರಿನ ಕೆ.ಆರ್‌.ಪುರದ ಅಂಜನಾಪುರ ಮತಗಟ್ಟೆ ಬಳಿ ಅಭ್ಯರ್ಥಿಗಳ ಪರ ಟೇಬಲ್‌ ಹಾಕುವ ವಿಚಾರದಲ್ಲಿ ಜಗಳ ಉಂಟಾಗಿ ಮಾರಾಮಾರಿ ಸಂಭವಿಸಿದೆ.

ಹಣ ಹಂಚಿಕೆ
ಮತದಾನದ ದಿನವೂ ಹಲವೆಡೆ ಬಹಿರಂಗವಾಗಿ ಹಣ ಹಂಚಿಕೆ ಮಾಡುತ್ತಿದ್ದ ಪ್ರಕರಣಗಳು ನಡೆದಿದ್ದು, ಮಂಡ್ಯದಲ್ಲಿ ಜೆಡಿಎಸ್‌ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಯುವಕನೊಬ್ಬನ್ನು ಬಂಧಿಸಲಾಯಿತು. ಅದೇ ರೀತಿ ಚಿಂತಾಮಣಿಯಲ್ಲಿ ಮತಗಟ್ಟೆ ಸಮೀಪ ಕಾಂಗ್ರೆಸ್‌ ಅಭ್ಯರ್ಥಿ ಪರ ಮತ ಹಂಚಿಕೆ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಕೋಲಾರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬೆಂಬಲಿಗರ ಮನೆ ಮೇಲೆ ಚುನಾವಣ ಆಯೋಗದ ಅಧಿಕಾರಿಗಳು ದಾಳಿ ನಡೆಸಿ 15 ಲಕ್ಷ ರೂ. ವಶಕ್ಕೆ ಪಡೆದಿದ್ದಾರೆ.

ಮಧುಗಿರಿಯಲ್ಲಿ ಹಣ ಹಂಚಿಕೆ ಮಾಡುತ್ತಿದ್ದ ಎಂಜಿನಿಯರಿಂಗ್‌ ಕಾಲೇಜಿನ ಅಟೆಂಡರ್‌ ರಾಜುವನ್ನು ಬಂಧಿಸಿ 5.80 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ. ಕಾಲೇಜಿನ ಸಮೀಪ ಹಣ ಹಂಚಿಕೆ ಮಾಡುತ್ತಿದ್ದು ಈ ಕಾಲೇಜು ಬಿಜೆಪಿ ಅಭ್ಯರ್ಥಿಗೆ ಸೇರಿದ್ದು ಎಂದು ಹೇಳಲಾಗಿದೆ. ಕೆಜಿಎಫ್ನ ಸ್ವರ್ಣ ನಗರ ಮತಗಟ್ಟೆಯಲ್ಲಿ ಹಣ ಹಂಚಿಕೆ ಮಾಡುತ್ತಿದ್ದು ಕಾಂಗ್ರೆಸ್‌ ಕಾರ್ಯಕರ್ತನನ್ನು ಬಂಧಿಸಲಾಗಿದೆ.

ಮೊಬೈಲ್‌ನಲ್ಲಿ ವೀಡಿಯೋ-ವೈರಲ್‌
ಮತಗಟ್ಟೆಗಳಿಗೆ ಮೊಬೈಲ್‌ ಕೊಂಡೊಯ್ಯುವುದಕ್ಕೆ ನಿಷೇಧ ಹೇರಲಾಗಿದ್ದರೂ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಪರ ಮತ ಚಲಾಯಿಸಿದ ವೀಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಕಾಣಿಸಿಕೊಂಡವು.

ತಿಂಗಳು ಕಾಯಬೇಕು
ಅಭ್ಯರ್ಥಿಗಳ‌ ಭವಿಷ್ಯ ಇವಿಎಂ ಯಂತ್ರಗಳಲ್ಲಿ ಭದ್ರ ವಾಗಿದ್ದು, ಫ‌ಲಿತಾಂಶಕ್ಕಾಗಿ ಒಂದು ತಿಂಗಳು ಕಾಯಬೇಕು. ಮೇ 23ರಂದು ಮತ ಎಣಿಕೆ ನಡೆಯಲಿದೆ

ದಾಖಲೆ ಮುರಿದ ದ.ಕ., ಉಡುಪಿ
ಮಂಗಳೂರು/ಉಡುಪಿ: ಈ ಬಾರಿಯ ಲೋಕಸಭಾ ಚುನಾ ವಣೆ ಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳು ಮತದಾನದಲ್ಲಿ ದಾಖಲೆಯನ್ನು ನಿರ್ಮಿಸಿವೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ದಲ್ಲಿ ಶೇ. 77.78ರಷ್ಟು ಪ್ರಮಾಣದ ಮತದಾನ ವಾಗಿದೆ. 2014ಕ್ಕೆ ಹೋಲಿಸಿದರೆ ಈ ಬಾರಿ ಮತದಾನದಲ್ಲಿ ತುಸು ಹೆಚ್ಚಳವಾಗಿದ್ದು, ಹಿಂದಿನ ದಾಖಲೆಯನ್ನು ಮುರಿದಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರ ದಲ್ಲಿ ಶೇ.77.19 ಮತದಾನವಾಗಿದ್ದು, ಅದು ರಾಜ್ಯದಲ್ಲೇ ಅತೀ ಹೆಚ್ಚು ಎಂಬ ಹೆಗ್ಗಳಿಕೆ ಪಡೆದಿತ್ತು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಈ ಬಾರಿ ಶೇ.75.8 ಮತದಾನವಾಗಿರುವುದು ಸಾರ್ವಕಾಲಿಕ ದಾಖಲೆಯಾಗಿದೆ. 2014ರಲ್ಲಿ ಶೇ. 74.46 ಮತದಾನ ವಾಗಿತ್ತು. ಹಿಂದಿನ ಬಾರಿಗೆ ಹೋಲಿ ಸಿದರೆ ತುಸು ಹೆಚ್ಚಾಗಿದೆ. ಅಂತಿಮ ಲೆಕ್ಕಾ ಚಾರ ದಲ್ಲಿ ಶುಕ್ರವಾರ ಸ್ವಲ್ಪ ಹೆಚ್ಚು ಕಡಿಮೆ ಯಾಗಬಹುದು.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.