![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Jun 21, 2020, 4:15 PM IST
ನವದೆಹಲಿ: ಯೋಗವು ಮಾನವ ಜನಾಂಗದ ಏಳ್ಗೆಗಾಗಿ ಭಾರತವು ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆಯಾಗಿದೆ” ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಶ್ರೀ ಡಿ ವಿ ಸದಾನಂದ ಗೌಡ ಅವರು ಜನತೆಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯ ಕೋರಿದ್ದಾರೆ.
2014ರ ಸೆಪ್ಟೆಂಬರ್ ೨೭ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆ ಸಾಮಾನ್ಯ ಸಭೆಯಯಲ್ಲಿ ಯೋಗದ ಮಹತ್ವವನ್ನು ತಿಳಿಸಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಸ್ತಾವನೆಯನ್ನು ಮಂಡಿಸಿದ್ದರು. ಪರಿಣಾಮವಾಗಿ 2015ರ ಜೂನ್ 21ರಂದು ಮೊಟ್ಟಮೊದಲ ಬಾರಿಗೆ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಇಂದು ವಿಶ್ವದ ಬಹುತೇಕ ದೇಶಗಳಲ್ಲಿ ಈ ದಿನವನ್ನು ಯೋಗ ದಿನವಾಗಿ ಆಚರಿಸಲಾಗುತ್ತಿದೆ.
ಭಾರತವು ಇದರ ನೇತೃತ್ವ ವಹಿಸಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತಕ್ಕೆ ಸಂದ ಗೌರವ ಇದಾಗಿದೆ ಎಂದು ಸಚಿವರು ತಿಳಿಸಿದರು.
ಯೋಗವು ಬರೀ ಆಸನ, ಪ್ರಾಣಾಯಾಮ, ಸೂರ್ಯನಮಸ್ಕಾರ, ವ್ಯಾಯಾಮವಲ್ಲ. ಬದಲಿಗೆ ಜನರು ದೈಹಿಕವಾಗಿ, ಮಾನಸಿಕವಾಗಿ ಸ್ವಾಸ್ಥ್ಯ ಜೀವನ ನಡೆಸಲು ಇರುವ ಸಮಗ್ರ ಸಾಧನವಾಗಿದೆ. ವಿಶ್ವದ ಇಂದಿನ ಕಾಲಘಟ್ಟದಲ್ಲಿ ಯೋಗವು ಹಿಂದೆಂದಿಗಿಂತಲೂ ಪ್ರಸ್ತುತವಾಗಿದೆ. ಯೋಗಾಭ್ಯಾಸದಿಂದ ನಮ್ಮ ಒಟ್ಟಾರೆ ರೋಗನಿರೋಧಕ ಶಕ್ತಿ ವೃದ್ಧಿಸುತ್ತದೆ. ಮಾನಸಿಕ ಒತ್ತಡವನ್ನು ನಿಯಂತ್ರಣಕ್ಕೆ ತರಬಹುದು.
ಪ್ರಾಣಾಯಾಮದಿಂದ ಶ್ವಾಸಕೋಶ ಬಲಗೊಳ್ಳುತ್ತದೆ. ಕೊರೊನಾ ಮುಂತಾದ ವೈರಾಣುಗಳಿಂದ ರಕ್ಷಿಸಿಕೊಳ್ಳಲು ಇದು ತುಂಬಾನೇ ಸಹಕಾರಿ. ನಮ್ಮ ಯೋಗಾಭ್ಯಾಸ ಇವತ್ತೊಂದೇ ದಿನಕ್ಕೆ ಕೊನೆಯಾಗದೆ ಜೀವನದ ಅವಿಭ್ಯಾಜ್ಯ ಅಂಗವಾಗಲಿ ಎಂದು ಅವರು ಆಶಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.