DVS:ಮೊಯ್ಲಿ ವಿರುದ್ಧ ಗೆಲುವು…ವಕೀಲ ವೃತ್ತಿಯಿಂದ ಸಿಎಂ ಗಾದಿ…ಇದು ಡಿ.ವಿ. ರಾಜಕೀಯ ಪಯಣ
ಸಿರ್ಸಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕೆಲ ಕಾಲ ಸೇವೆ ಸಲ್ಲಿಸಿದ್ದರು.
Team Udayavani, Nov 9, 2023, 4:20 PM IST
ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂಧ ಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ಸುಮಾರು ಮೂರು ದಶಕಗಳ ಕಾಲ ದೇವರಗುಂಡ ವೆಂಕಪ್ಪ ಸದಾನಂದ ಗೌಡ ರಾಜಕೀಯ ಕ್ಷೇತ್ರದಲ್ಲಿದ್ದು, ತಳಮಟ್ಟದಿಂದ ಹಿಡಿದು ಉನ್ನತ ಮಟ್ಟದ ಸ್ಥಾನಮಾನ ಪಡೆದಿದ್ದರು.
ಇದನ್ನೂ ಓದಿ:World Cup 2023; ಡೇನಿಯಲ್ ವೆಟೋರಿ ದಾಖಲೆ ಸರಿಗಟ್ಟಿದ ಮಿಚೆಲ್ ಸ್ಯಾಂಟ್ನರ್
ವೃತ್ತಿ ಜೀವನ:
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಗೌಡ ಪರಿವಾರದ ವೆಂಕಪ್ಪಗೌಡ ಮತ್ತು ಕಮಲ ದಂಪತಿಯ ಪತ್ರನಾಗಿ ಸದಾನಂದ ಗೌಡ ಜನಿಸಿದ್ದರು. ಪುತ್ತೂರು ತಾಲೂಕಿನ ಕೆಯ್ಯೂರ್ ನಲ್ಲಿ ಪ್ರಾಥಮಿಕ ವಿಧ್ಯಾಭ್ಯಾಸ ನಂತರ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ಪದವಿ ಪಡೆದಿದ್ದರು.
ಬಳಿಕ ವೈಕುಂಠ ಬಾಳಿಗಾ ಲಾ ಕಾಲೇಜಿನಲ್ಲಿ ಕಾನೂನು ಪದವಿ, ಕಾನೂನು ವಿದ್ಯಾರ್ಥಿ ಸಂಘದ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಜಿಲ್ಲಾ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ಮುಖ್ಯ ಕಾರ್ಯದರ್ಶಿಯಾಗಿ ಜನಪ್ರಿಯರಾಗಿದ್ದರು. 1976ರಲ್ಲಿ ಸುಳ್ಯ ಮತ್ತು ಪುತ್ತೂರಿನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. ಬಳಿಕ ಉತ್ತರಕನ್ನಡ ಜಿಲ್ಲೆಯ ಸಿರ್ಸಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಕೆಲ ಕಾಲ ಸೇವೆ ಸಲ್ಲಿಸಿದ್ದರು.
ರಾಜಕೀಯ ಪ್ರವೇಶ:
ಡಿ.ವಿ.ಸದಾನಂದ ಗೌಡ ಅವರು ಜನ ಸಂಘದ ಸದಸ್ಯರಾಗುವ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. ನಂತರ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷರಾಗಿ, 1983-1988ರವರೆಗೆ ರಾಜ್ಯ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
2003-4ರಲ್ಲಿ ರಾಜ್ಯ ಬಿಜೆಪಿ ಪಕ್ಷದ ಕಾರ್ಯದರ್ಶಿಯಾಗಿ, 2004ರಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದರು. 1994 ಮತ್ತು 1999ರಲ್ಲಿ ದಕ್ಷಿಣ ಕನ್ನಡದ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಅವರನ್ನು 32,314 ಮತಗಳಿಂದ ಸೋಲಿಸಿ 14ನೇ ಲೋಕಸಭೆಗೆ ಆಯ್ಕೆಯಾಗಿದ್ದರು. 2006ರಲ್ಲಿ ಡಿವಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರು. 2008ರಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅಧ್ಯಕ್ಷರಾಗಿದ್ದ ಡಿವಿ ಸದಾನಂದ ಗೌಡರು ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡರು. 2009ರಲ್ಲಿ ಡಿವಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಜಯ ಸಾಧಿಸಿದ್ದರು. 2011ರಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆಪ್ತ ಬಿಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ ಸದಾನಂದ ಗೌಡರು ಕರ್ನಾಟಕದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. 2013ರ ಚುನಾವಣೆಯಲ್ಲಿ ಬಿಜೆಪಿ ಭಾರೀ ಸೋಲನ್ನು ಅನುಭವಿಸಿದ್ದು, ಡಿವಿ ಸದಾನಂದ ಗೌಡರನ್ನು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿತ್ತು.
2014ರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ ಡಿ.ವಿ.ಸದಾನಂದ ಗೌಡರನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಚುನಾಯಿತ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಈ ಸಂದರ್ಭದಲ್ಲಿ ರೈಲ್ವೆ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.
2019ರಲ್ಲಿಯೂ ಸದಾನಂದ ಗೌಡರು ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.