Dysp M.K.Ganapathi Suside Case: ಕೆ.ಜೆ. ಜಾರ್ಜ್‌ಗೆ ಸುಪ್ರೀಂ ಕ್ಲೀನ್‌ಚಿಟ್
ಸುಪ್ರೀಂ ಮೆಟ್ಟಿಲೇರಿದ್ದ ಗಣಪತಿ ಸೋದರಿ
Team Udayavani, Aug 28, 2024, 6:25 AM IST
ಹೊಸದಿಲ್ಲಿ: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಸುಪ್ರೀಂ ಕೋರ್ಟ್ ಕ್ಲೀನ್‌ಚಿಟ್ ನೀಡಿದೆ. ಸಿಬಿಐ ಕ್ಲೀನ್‌ಚಿಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ.
ಸಿಬಿಐ ಆದೇಶವನ್ನು ಪ್ರಶ್ನಿಸಿ ಗಣಪತಿ ಅವರ ಸೋದರಿ ಸಬಿತಾ ಹಾಗೂ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ| ಬೇಲಾ ಎಂ. ತ್ರಿವೇದಿ ಮತ್ತು ನ್ಯಾ| ಸತೀಶ್‌ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ ವಜಾಗೊಳಿಸಿದೆ. ಗಣಪತಿ ಅವರ ಆತ್ಮಹತ್ಯೆಗೆ ಸಚಿವ ಜಾರ್ಜ್, ಅಧಿಕಾರಿಗಳಾದ ಎಂ.ಎಂ. ಪ್ರಸಾದ್ ಮತ್ತು ಪ್ರಣವ್ ಮೊಹಂತಿ ಕಾರಣ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಸಿಬಿಐ ಈ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿತ್ತು.
ಆದರೆ ಸಿಬಿಐ ವರದಿಯನ್ನು ತಿರಸ್ಕರಿಸಿದ್ದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಿಗೆ ಸಮನ್ಸ್ ನೀಡಿತ್ತು. ಈ ಆದೇಶವನ್ನು ಹೈಕೋರ್ಟ್ ವಜಾಗೊಳಿಸಿತ್ತು. ಪಶ್ಚಿಮ ವಲಯ (ಮಂಗಳೂರು) ಐಜಿಪಿ ಕಚೇರಿಯಲ್ಲಿ ಡಿವೈಎಸ್‌ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಗಣಪತಿ ಅವರು 2016ರ ಜು. 7ರಂದು ಮಡಿಕೇರಿಯ ಲಾಡ್ಜ್ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೂ ಮೊದಲು ಆಗ ಗೃಹಸಚಿವರಾಗಿದ್ದ ಕೆ.ಜೆ. ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಸಾದ್ ಮತ್ತು ಮೊಹಾಂತಿ ತನಗೆ ಕಿರುಕುಳ ನೀಡಿದ್ದರು ಎಂದು ಟೀವಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು
ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ
Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.