ಸಮಗ್ರ ಕೃಷಿಯಿಂದ ಆರ್ಥಿಕ ಸ್ವಾವಲಂಬನೆ: ಬಿ.ಸಿ. ಪಾಟೀಲ್
"ನನ್ನ ಪಾಲಿಸಿ ನನ್ನ ಕೈಯಲ್ಲಿ' ಬೆಳೆ ಪಾಲಿಸಿ ವಿತರಣೆ
Team Udayavani, Feb 26, 2022, 9:15 PM IST
ಬೆಂಗಳೂರು: ಬೆಳೆ ವಿಮೆ ಮಾಡುವ ರೈತರಿಗೆ ಅದರ ಕುರಿತು ಸಂಪೂರ್ಣ ಮಾಹಿತಿ ಹೊಂದಿರುವ ಪಾಲಿಸಿಯನ್ನು ನೀಡುತ್ತಿದ್ದು, ಇದರಲ್ಲಿ ಯಾವ ಬೆಳೆಗೆ ಎಷ್ಟು ಪರಿಹಾರ ಸಿಗಲಿದೆ ಹಾಗೂ ಆಧಾರ್ ಕಾರ್ಡ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ವಿವರಗಳು ಇರಲಿವೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು.
ಶನಿವಾರ ನಗರದ ಕೃಷಿ ವಿಶ್ವವಿದ್ಯಾನಿಲಯದ ಬಿಎಸ್‌ಎಚ್ ಕಾಲೇಜಿನ ಆಡಿಟೋರಿಯಂ ನಾರ್ತ್ ವಿಂಗ್‌ನಲ್ಲಿ ಆಯೋಜಿಸಿದ್ದ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಹಮ್ಮಿಕೊಂಡ “ನನ್ನ ಪಾಲಿಸಿ ನನ್ನ ಕೈಯಲ್ಲಿ’ ಬೆಳೆ ವಿಮೆ ಪಾಲಿಸಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹವಾಮಾನ ವೈಪರೀತ್ಯದಿಂದ ಕೆಲವೊಮ್ಮ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಬೆಳೆ ಕೈ ಸೇರದೆ ರೈತರು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಅಂಥ ರೈತರು ಸೃದೃಢವಾಗಿರಲು ಸರಕಾರದಿಂದ ಅಗತ್ಯವಿರುವ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಬೆಳೆ ವಿಮೆಗೆ ರೈತರು ಹಿಂಗಾರು ಶೇ. 1.50 ಹಾಗೂ ಮುಂಗಾರು ಶೇ.2ರಷ್ಟು ಪಾವತಿ ಮಾಡುತ್ತಾರೆ. ಉಳಿದ ಹಣವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಪಾವತಿಸುತ್ತಿದೆ. ಇದುವರೆ 15 ಲಕ್ಷಕ್ಕಿಂತ ಹೆಚ್ಚು ರೈತರು ಬೆಳೆ ವಿಮೆ ಮಾಡಿದ್ದಾರೆ ಎಂದರು.
ಬೆಳೆ ವಿಮೆ ಪರಿಹಾರಕ್ಕೆ 1.21 ಕೋಟಿ ರೈತರ ಅರ್ಜಿ ಅನುಮೋದನೆಯಾಗಿದ್ದು, 6, 879 ಕೋಟಿ ರೂ. ವಿಮೆ ಮೊತ್ತ ರೈತರ ಖಾತೆಗೆ ಜಮೆಯಾಗಿದೆ. ರಾಜ್ಯದಲ್ಲಿ ಹಿಂಗಾರು 2021-22ರ ಹಂಗಾಮಿನಲ್ಲಿ ನೋಂದಣಿ ಮಾಡಿರುವ ರೈತರಿಗೆ ಪಾಲಿಸಿ ವಿವರವನ್ನು ಇನ್‌ಲ್ಯಾಂಡ್ ಲೆಟರ್ ನಮೂನೆಯಲ್ಲಿ ವಿತರಿಸಲಾಗಿದೆ. 2021ರ ಮುಂಗಾರು ಹಂಗಾಮಿನಲ್ಲಿ 113.49 ಕೋಟಿ ರೂ. ಬೆಳೆ ವಿಮೆ ಪರಿಹಾರ ಮೊತ್ತ ಸ್ಥಳೀಯ ಪ್ರಕೃತಿ ವಿಕೋಪದಡಿಯಲ್ಲಿ ಇತ್ಯರ್ಥವಾಗಿದೆ.
ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.