ಇಡಿ ಸಮನ್ಸ್ ಪ್ರಕರಣ : ಡಿಕೆಶಿ ತಾಯಿಗೆ ಸದ್ಯ ನಿರಾಳ
ಕನಕಪುರದ ನಿವಾಸದಲ್ಲೇ ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶ
Team Udayavani, Dec 18, 2019, 9:19 PM IST
ಬೆಂಗಳೂರು: ಹಣ ದುರ್ಬಳಕೆ ಕಾಯ್ದೆ ಅಡಿಯಲ್ಲಿನ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಅವರ ವಿಚಾರಣೆಯನ್ನು ಕನಕಪುರದ ಅವರ ನಿವಾಸದಲ್ಲಿಯೇ ನಡೆಸಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ ಹೈಕೋರ್ಟ್ ಬುಧವಾರ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 2019ರ ಅ.9ರಂದು ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ಪ್ರಶ್ನಿಸಿ ಗೌರಮ್ಮ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜಿ. ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಲದೇ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗೌರಮ್ಮ ಅವರನ್ನು ಕನಕಪುರದ ಅವರ ನಿವಾಸದಲ್ಲೇ ವಿಚಾರಣೆ ನಡೆಸಬೇಕು ಮತ್ತು ಹೇಳಿಕೆ ಪಡೆದುಕೊಳ್ಳಬೇಕು. ವಿಚಾರಣೆಯನ್ನು ಕನ್ನಡದಲ್ಲೇ ನಡೆಸಬೇಕು.
ವಿಚಾರಣೆಯ ಆಡಿಯೋ ರೆಕಾರ್ಡಿಂಗ್ ಮಾಡಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿತು.
ಇದೇ ವೇಳೆ, ವಿಚಾರಣೆ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಅಗತ್ಯ ಭದ್ರತೆ ಒದಗಿಸುವಂತೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದ ನ್ಯಾಯಪೀಠ, ಅಧಿಕಾರಿಗಳ ವಿಚಾರಣೆಗೆ ಅಡ್ಡಿಪಡಿಸುವಂತಿಲ್ಲ, ಯಾವುದೇ ಪ್ರತಿಭಟನೆ ನಡೆಸುವಂತಿಲ್ಲ ಎಂದು ಹೇಳಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ “”ಗೌರಮ್ಮ ಅವರಿಗೆ 85 ವರ್ಷವಾಗಿದೆ, ಹಲವು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ನೆನಪಿನ ಶಕ್ತಿ ಕಳೆದುಕೊಳ್ಳುತ್ತಾರೆ. ಹಾಗಾಗಿ ಅವರ ನಿವಾಸದಲ್ಲಿಯೇ ಹೇಳಿಕೆ ದಾಖಲಿಸಿಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ನಿರ್ದೇಶನ ನೀಡಬೇಕು. ಅಧಿಕಾರಿಗಳು ಉದ್ದೇಶಪೂರ್ವಕವಾಗಿಯೇ ಅರ್ಜಿದಾರರಿಗೆ ಕಿರುಕುಳ ನೀಡುತ್ತಿದ್ದಾರೆ. ಅವರ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಅಥವಾ ಆರೋಪ ಪಟ್ಟಿಯೂ ದಾಖಲಾಗಿಲ್ಲ.
ಬಲವಂತವಾಗಿ ಅವರ ಬಳಿ ಹೇಳಿಕೆ ಪಡೆಯಲು ಅಧಿಕಾರಿಗಳು ಪ್ರಯತ್ನ ನಡೆಸುತ್ತಿದ್ದಾರೆ” ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಜಾರಿ ನಿರ್ದೇಶನಾಲಯದ ಪರ ವಕೀಲರು, ಪ್ರಕರಣದಲ್ಲಿ ಗೌರಮ್ಮ ಆರೋಪಿಯಲ್ಲ. ಸಾಕ್ಷಿಯಾಗಿ ಹೇಳಿಕೆ ಪಡೆದುಕೊಳ್ಳಲು ಸಮನ್ಸ್ ನೀಡಲಾಗಿದೆ. ಅಷ್ಟಕ್ಕೂ ಸಮನ್ಸ್ ನೀಡಿರುವ ಅವಧಿ ಈಗ ಮುಗಿದಿದೆ. ಆದ್ದರಿಂದ ಅರ್ಜಿ ವಿಚಾರಣಾ ಮಾನ್ಯತೆ ಕಳೆದುಕೊಂಡಿದೆ. ಮೂರು ವಾರಗಳ ಕಾಲ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು
Table Space: ಟೇಬಲ್ ಸ್ಪೇಸ್ ಸ್ಥಾಪಕ ಅಮಿತ್ ಬ್ಯಾನರ್ಜಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.