Yashpal Suvarna ಸದೃಢ ಭಾರತ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ
20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನ ಕಾರ್ಯಕ್ರಮ ಉದ್ಘಾಟನೆ
Team Udayavani, Jun 1, 2024, 12:57 AM IST
ಉಡುಪಿ: ಎಸೆಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಹಾಗೂ ದ್ವಿತೀಯ ಪಿಯುಸಿಯಲ್ಲಿ ದ್ವಿತೀಯ ಸ್ಥಾನ ಪಡೆದಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಉಡುಪಿಯ ಕೀರ್ತಿಯನ್ನು ಪಸರಿಸುವ ಕೆಲಸ ಜಿಲ್ಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರ ಹಾಗೂ ಶಿಕ್ಷಣ ಇಲಾಖೆಯ ಪರಿಶ್ರಮದಿಂದ ಯಶಸ್ವಿಯಾಗಿದೆ.
ದೇಶದ ಭವಿಷ್ಯ ಬರೆಯಲಿರುವ ವಿದ್ಯಾವಂತ ಯುವ ಜನಾಂಗದಿಂದ ಮಾತ್ರ ಸಧೃಡ ಭಾರತ ನಿರ್ಮಾಣಕ್ಕೆ ಶಕ್ತಿ ತುಂಬಲಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಉಡುಪಿ ಜಿಲ್ಲೆಯ ಸಾಧನೆ ಇದೇ ರೀತಿ ನಿರಂತರವಾಗಿ ಮುಂದುವರೆದು ಇತರರಿಗೂ ಮಾದರಿಯಾಗಲಿ ಎಂದು ಪುಷ್ಪಾನಂದ ಫೌಂಡೇಶನ್ ಪ್ರವರ್ತಕ, ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಪಡೆದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 20 ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಬಾಯರಿ, ನಿವೃತ್ತ ಪ್ರಾಂಶುಪಾಲೆ ಹಂಸಾವತಿ, ತಾರಾದೇವಿ, ಸಮಾಜ ಸೇವಕಿ ನಿರುಪಮಾ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.
ಫೌಂಡೇಶನ್ ವತಿಯಿಂದ ಶೇ. 100 ಫಲಿತಾಂಶ ಪಡೆದ ಶಿಕ್ಷಣ ಸಂಸ್ಥೆಗಳಿಗೆ ಅಭಿನಂದನ ಪತ್ರದೊಂದಿಗೆ ತಲಾ 15 ಸಾವಿರ ರೂ. ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು. ಶಾಲೆಯ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.