ಹೈಟಿ ಭೂಕಂಪ: 300ಕ್ಕೂ ಹೆಚ್ಚು ಸಾವು

Team Udayavani, Aug 16, 2021, 7:20 AM IST

ಹೈಟಿ ಭೂಕಂಪ: 300ಕ್ಕೂ ಹೆಚ್ಚು ಸಾವು

ಲೆಸ್‌ ಕೇಯೆಸ್‌ (ಹೈಟಿ): ಕೆರೀಬಿಯನ್‌ ದ್ವೀಪರಾಷ್ಟ್ರ ಹೈಟಿಯಲ್ಲಿ ಶನಿವಾರ ಸಂಭವಿಸಿದ ಭೂಕಂಪದ ಪರಿಣಾಮ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ರಿಕ್ಟರ್‌ ಮಾಪಕದಲ್ಲಿ ಸುಮಾರು 7.2 ತೀವ್ರತೆಯಲ್ಲಿ ಭೂಮಿ ಕಂಪಿಸಿದ್ದು, ಸಾವಿರಾರು ಮನೆ, ಕಟ್ಟಡಗಳು, ಶಾಲೆಗಳು, ಚರ್ಚುಗಳು, ಆಸ್ಪತ್ರೆಗಳು ನೆಲಕ್ಕುರುಳಿವೆ. ಶನಿವಾರದ ಕಂಪನವು 2010ರ ಜನವರಿಯಲ್ಲಿ 2.20 ಲಕ್ಷ ಮಂದಿ ಮೃತಪಟ್ಟ ಭೂಕಂಪಕ್ಕಿಂತಲೂ ಹೆಚ್ಚು ಪ್ರಬಲವಾಗಿತ್ತು ಎನ್ನಲಾಗಿದೆ.

ಭೂಕಂಪದ ತೀವ್ರತೆ ಕನಿಷ್ಠ ಎರಡು ನಗರಗಳಲ್ಲಿ ಹೆಚ್ಚಿದ್ದ ಕಾರಣ ಬಹಳಷ್ಟು ಮಂದಿ ಅವಶೇಷಗಳಡಿ ಸಿಲುಕಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರಂತದಲ್ಲಿ ಒಟ್ಟು 304 ಮಂದಿ ಮೃತಪಟ್ಟು, 1,800ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹೈಟಿಯ ಆಸ್ಪತ್ರೆಗಳೆಲ್ಲ ಗಾಯಾಳುಗಳಿಂದ ತುಂಬಿ ತುಳುಕುತ್ತಿವೆ. ಹಲವು ಬಹುಮಹಡಿ ಕಟ್ಟಡಗಳು ನೆಲಕ್ಕುರುಳಿವೆ. ವೈದ್ಯಕೀಯ ವಿದ್ಯಾರ್ಥಿಗಳು, ರೋಗಿಗಳು, ವೈದ್ಯರು ಇದ್ದ ಆಸ್ಪತ್ರೆಯ ಕಟ್ಟಡವೂ ಧ್ವಂಸಗೊಂಡಿದೆ.

ಭೂಕಂಪ ಸಂಭವಿಸಿದ್ದೆಲ್ಲಿ?: ಹೈಟಿಯ ಪಶ್ಚಿಮ ದಲ್ಲಿರುವ ಪೆಟಿಟ್‌ ಟೌಡಿ ನಿಪ್ಪೆಸ್‌ ಎಂಬ ನಗರದಿಂದ 5 ಮೈಲುಗಳಷ್ಟು ದೂರದಲ್ಲಿ ಭೂಮಿ ಕಂಪಿಸಿತ್ತು. ಪ್ರಬಲ ಭೂಕಂಪ 200 ಮೈಲು ದೂರದ ಜಮೈಕಾದಲ್ಲೂ ಅನುಭವಕ್ಕೆ ಬಂದಿತ್ತು ಎಂದು ಅಮೆರಿಕದ ಜಿಯೋಲಾಜಿಕಲ್‌ ಸರ್ವೇ ಹೇಳಿದೆ. ಇದಾದ ಬಳಿಕ 5.0 ಮತ್ತು 4.0 ತೀವ್ರತೆಯ 6 ಪಶ್ಚಾತ್‌ ಕಂಪನಗಳೂ ಸಂಭವಿಸಿವೆ. 2010ರಲ್ಲಿ ಸಂಭವಿಸಿದ್ದ ಹೈಟಿ ಭೂಕಂಪ 7.0 ತೀವ್ರತೆಯದ್ದಾಗಿತ್ತು. ಆ ದುರಂತದಲ್ಲಿ 2.20 ಲಕ್ಷ ಮಂದಿ ಸಾವಿಗೀಡಾಗಿದ್ದರು.

ಸಂಕಷ್ಟಗಳ ಸರಮಾಲೆ
ಕಳೆದ ತಿಂಗಳ ಜು. 7ರಂದು ಬಂಡುಕೋರರು ಅರಮನೆಯ ಒಳಕ್ಕೆ ನುಗ್ಗಿ ಹೈಟಿ ಅಧ್ಯಕ್ಷರನ್ನು ಹತ್ಯೆಗೈದಿದ್ದರು. ಇದರಿಂದ ಅಲ್ಲಿ ರಾಜಕೀಯ ಅಸ್ಥಿರತೆ ಮೂಡಿದೆ. ಇಂಥ ಬಿಕ್ಕಟ್ಟಿನ ಸಮಯದಲ್ಲೇ ಪ್ರಾಕೃತಿಕ ವಿಕೋಪ ಸಂಭವಿಸಿರುವುದು ಹೈಟಿ ನಾಗರಿಕರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಸೋಮವಾರ ಅಥವಾ ಮಂಗಳವಾರ ಭಾರೀ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದೂ ಅಲ್ಲಿನ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.