ಉಚಿತ ಲಸಿಕೆ ಘೋಷಣೆ ನೀತಿ ಸಂಹಿತೆ ಉಲ್ಲಂಘನೆಯಲ್ಲ : ಚುನಾವಣಾ ಆಯೋಗ ಸ್ಪಷ್ಟನೆ
Team Udayavani, Oct 31, 2020, 8:44 PM IST
ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ರಾಜ್ಯದ ಜನತೆಗೆ ಉಚಿತವಾಗಿ ಕೊರೊನಾ ಲಸಿಕೆ ವಿತರಿಸುತ್ತೇವೆ ಎಂಬ ಬಿಜೆಪಿಯ ಆಶ್ವಾಸನೆಯು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಅಲ್ಲ ಎಂದು ಚುನಾವಣಾ ಆಯೋಗ ಶನಿವಾರ ಸ್ಪಷ್ಟಪಡಿಸಿದೆ.
ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ನೀಡಿದ ದೂರಿನ ಹಿನ್ನೆಲೆ ಆಯೋಗವು ಈ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರದಲ್ಲಿ ನೀತಿ ಸಂಹಿತೆಯ ಯಾವುದೇ ನಿಬಂಧನೆಯೂ ಉಲ್ಲಂಘನೆ ಆಗಿಲ್ಲ ಎಂದಿದೆ. ಇಂಥ ಆಶ್ವಾಸನೆಯು ತಾರತಮ್ಯದಿಂದ ಕೂಡಿದ್ದು, ಚುನಾವಣೆ ವೇಳೆ ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಗೋಖಲೆ ಆರೋಪಿಸಿದ್ದರು.
ನಡ್ಡಾ ಪ್ರಚಾರ:
ಬಿಹಾರದ ಸೋನೆಪುರ್‌ನಲ್ಲಿ ಶನಿವಾರ ಚುನಾವಣಾ ಪ್ರಚಾರ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ. “ಆರ್‌ಜೆಡಿ ಅರಾಜತಕೆಯ ಪಕ್ಷ, ಕಾಂಗ್ರೆಸ್ ದೇಶದ್ರೋಹಿ ಪಕ್ಷ. ಇದು ಬಿಹಾರದ ಮಹಾಘಟಬಂಧನ. ಇಂಥದ್ದೊಂದು ಮೈತ್ರಿಯು ರಾಜ್ಯದ ಅಭಿವೃದ್ಧಿ ಮಾಡಲು ಸಾಧ್ಯವೇ’ ಎಂದು ನಡ್ಡಾ ಪ್ರಶ್ನಿಸಿದ್ದಾರೆ. ಜತೆಗೆ, ನಿಮಗೆ ಲಾಟೀನ್ ಸರ್ಕಾರ ಬೇಕೇ ಅಥವಾ ಎಲ್‌ಇಡಿ ಸರ್ಕಾರ ಬೇಕೇ ನೀವೇ ನಿರ್ಧರಿಸಿ ಎಂದೂ ಹೇಳಿದ್ದಾರೆ.
ತೇಜಸ್ವಿ ಸಿಎಂ ಆದ್ರೆ ಅಚ್ಚರಿಯಿಲ್ಲ:
ಬಿಹಾರದಲ್ಲಿ ಒಂದು ಕಡೆ ಯಾವುದೇ ಬೆಂಬಲವಿಲ್ಲದ ಯುವ ನಾಯಕನಿದ್ದಾನೆ. ಸಿಬಿಐ, ಇಡಿಯಂಥ ಕೇಂದ್ರ ತನಿಖಾ ಸಂಸ್ಥೆಗಳು ಆತನ ಬೆನ್ನು ಬಿದ್ದಿವೆ. ಪ್ರತಿಪಕ್ಷಗಳನ್ನು ಹತ್ತಿಕ್ಕಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧವೇ ಆತ ತೊಡೆತಟ್ಟಿ ನಿಂತಿದ್ದಾನೆ. ಚುನಾವಣೆ ಬಳಿಕ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸಿಎಂ ಆದರೂ ಅಚ್ಚರಿಯಿಲ್ಲ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.