Assembly Election; ಸೆಪ್ಟೆಂಬರ್‌ನಲ್ಲಿ ಜಮ್ಮು-ಕಾಶ್ಮೀರ ಚುನಾವಣೆ: ಕೇಂದ್ರ ಸಚಿವ
ಭಯೋತ್ಪಾದನೆ ಬೇರು ಸಹಿತ ಕಿತ್ತು ಹಾಕಲು ಮತದಾರರು ಬಿಜೆಪಿ ಅಧಿಕಾರಕ್ಕೆ ತರಬೇಕು: ಜಿ.ಕಿಶನ್ ರೆಡ್ಡಿ
Team Udayavani, Aug 6, 2024, 6:15 AM IST
ಆರ್‌ಎಸ್ ಪುರ: ಇದೇ ಸೆಪ್ಟಂಬರ್‌ನಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾ ವಣೆ ನಡೆಯಲಿದೆ ಎಂದು ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಸೋಮವಾರ ಹೇಳಿದ್ದಾರೆ. ಈ ಮೂಲಕ ಕಣಿವೆ ರಾಜ್ಯ ದಲ್ಲಿ ಸದ್ಯ ದಲ್ಲೇ ಚುನಾವಣೆ ನಡೆಯುವುದು ಖಾತ್ರಿ ಯಾದಂತಾಗಿದೆ.
370ನೇ ವಿಧಿಯನ್ನು ರದ್ದುಗೊಳಿಸಿ 5 ವರ್ಷ ಪೂರ್ಣಗೊಂಡ ಹಿನ್ನೆಲೆ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾ ಡಿ, “ಇದೇ ಸೆಪ್ಟಂಬರ್‌ನಲ್ಲಿ ಜಮ್ಮು -ಕಾಶ್ಮೀರ ವಿಧಾನ ಸಭೆ ಚುನಾವಣೆ ನಡೆಯಲಿದೆ. ಕೇಂದ್ರಾಡಳಿತ ಪ್ರದೇಶದ ಅಭಿವೃದ್ಧಿಯ ವೇಗವನ್ನು ಕಾಪಾಡಿಕೊ ಳ್ಳಲು ಹಾಗೂ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕಲು ಮತದಾರರು ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು’ ಎಂದು ಮನವಿ ಮಾಡಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಬಿಜೆಪಿಯ ಚುನಾವಣ ಉಸ್ತುವಾರಿಯೂ ಆಗಿರುವ ಕಿಶನ್, 370ನೇ ವಿಧಿ ರದ್ದಾದ ಬಳಿಕ ಕಳೆದ 5 ವರ್ಷಗಳಲ್ಲಿ ಜಮ್ಮು ಕಾಶ್ಮೀರ ದಲ್ಲಿ ಪಾಕಿಸ್ಥಾನ ಹಾಗೂ ಅದರ ಗುಪ್ತಚರ ಸಂಸ್ಥೆ ಐಎಸ್‌ಐನ ಚಟುವಟಿಕೆ ಇಳಿಮುಖವಾಗಿವೆ ಎಂದೂ ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್, ಎನ್‌ಸಿ ವಿರುದ್ಧ ಟೀಕಾಪ್ರಹಾರ ನಡೆಸಿದ ರೆಡ್ಡಿ, ಪಾಕಿಸ್ಥಾನ ಬೆಂಬಲಿತ ಭಯೋತ್ಪಾದನೆ ಯ ಮೂಲಕ ಜಮ್ಮು-ಕಾಶ್ಮೀರದಲ್ಲಿ “ಸಾವು ಹಾಗೂ ವಿನಾಶ’ ತಂದೊಡ್ಡಿದ್ದ 370ನೇ ವಿಧಿಯನ್ನು ಮತ್ತೆ ಜಾರಿ ಮಾಡುವ ಬಗ್ಗೆ ವಿಪಕ್ಷಗಳು ಹೇಳುತ್ತಿವೆ. ಬಿಜೆಪಿ ಶಾಂತಿ ಸ್ಥಾಪನೆ ಹಾಗೂ ಅಭಿವೃದ್ಧಿ ಗಾಗಿ ಶ್ರಮಿಸುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
UV Fusion: ನಿಸ್ವಾರ್ಥ ಜೀವ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.