ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆನೆ ದಾಳಿ : ವ್ಯಕ್ತಿ ಸಾವು
Team Udayavani, Jul 27, 2021, 7:52 PM IST
ರಾಮನಗರ: ಆನೆ ದಾಳಿಯಿಂದಾಗಿ ಚನ್ನಪಟ್ಟಣ ತಾಲೂಕು ದೊಡ್ಡನಹಳ್ಳಿ ಗ್ರಾಮದ ಸತೀಶ್ (36) ಎಂಬುವರು ಮೃತಪಟ್ಟಿದ್ದಾರೆ.
ರಾಮನಗರ ಮತ್ತು ಚನ್ನಪಟ್ಟಣ ತಾಲೂಕುಗಳ ಗಡಿ ಗ್ರಾಮ ದೊಡ್ಡನಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘೋರ ಘಟನೆ ಸಂಭವಿಸಿದೆ. ಸತೀಷ್ ತಮ್ಮ ಮಾವಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ, ಹಠಾತ್ತನೆ 4 ಆನೆಗಳು ಕಾಣಿಸಿಕೊಂಡಿವೆ. ತಪ್ಪಿಸಿಕೊಳ್ಳಲು ಯತ್ನಿಸಿದ ಸತೀಶ್ ಅವರನ್ನು ಆನೆಯೊಂದು ದಾಳಿ ಮಾಡಿ ಸಾಯಿಸಿದೆ.
ಪದೇ ಪದೇ ನಡೆಯುತ್ತಿರುವ ಇಂತಹ ಘಟನೆಗಳಿಗೆ ಬೇಸತ್ತ ಗ್ರಾಮಸ್ಥರು ಡೀಸಿ ಕಚೇರಿಯ ಮುಂಭಾಗ ಶವ ಇಟ್ಟು ಪ್ರತಿಭಟಿಸಲು ಮುಂದಾಗಿದ್ದರು. ಆದರೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ಕೊಟ್ಟು ಸಮಾಧಾನ ಪಡಿಸಿ, ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ಆನೆ ದಾಳಿಯನ್ನು ತಡೆಯಲು ಕ್ರಮವಹಿಸುವುದಾಗಿ ಭರವಸೆ ನೀಡಿದ ನಂತರ ಶವವನ್ನು ಜಿಲ್ಲಾಸ್ಪತ್ರೆಗೆ ಪರೀಕ್ಷೆಗೆ ಕಳುಹಿಸಲಾಗಿದೆ.
ಇದನ್ನೂ ಓದಿ :ಸುಳ್ಳು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು: ಸಿದ್ದರಾಮಯ್ಯ ವಾಗ್ದಾಳಿ
ಗ್ರಾಮಸ್ಥರು ಮತ್ತು ರೈತರ ಆಕ್ರೋಶ
ಆನೆ ದಾಳಿಗೆ ತುತ್ತಾದ ಪ್ರಕರಣಕ್ಕೆ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಪದೇ ಪದೇ ಆನೆಗಳು ದಾಳಿ ಇಟ್ಟು ತಮ್ಮ ಪ್ರಾಣ, ಬೆಳೆ, ಆಸ್ತಿಯನ್ನು ಹಾಳುಗೆಡುವುತ್ತಿವೆ ಎಂದು ಗ್ರಾಮಸ್ಥರು ಮತ್ತು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ರೈತ ಸಂಘದ ಅಧ್ಯಕ್ಷ ಚಂದ್ರಶೇಖರ್ ಮತ್ತು ಪದಾಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು ತೀರಾ ಇತ್ತಿಚೆಗೆ ಕಾಡು ಪ್ರಾಣಿಗಳ ಹಾವಳಿ ತಡೆಯುವಂತೆ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಅರಣ್ಯ ಇಲಾಖೆ ತಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.