ಎಲ್ಲಾದರು ಇರು…ಕೆನಡಾ ಸಂಸತ್ ನಲ್ಲಿ ಕನ್ನಡ ಕಲರವ; ವಿಡಿಯೋ ವೈರಲ್
ಮುದ್ದು ಕನ್ನಡದಲ್ಲಿ ಮಾತನಾಡುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ
Team Udayavani, May 20, 2022, 11:44 AM IST
ಟೊರೊಂಟೋ: ಕೆನಡಾ ಸಂಸತ್ತಿನಲ್ಲಿ ಕನ್ನಡ ಕಲರವ ಕೇಳಿಸಿದೆ! ಹೌದು, ಕೆನಡಾ ಸಂಸತ್ತಿನ ಸಂಸದ, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ಚಂದ್ರ ಆರ್ಯ ಎಂಬು ವರು ಕನ್ನಡದಲ್ಲೇ ಭಾಷಣ ಮಾಡುವ ಮೂಲಕ ಕನ್ನಡಾಭಿಮಾನ ಮೆರೆದಿದ್ದಾರೆ. ಈ ಬಗ್ಗೆ ಅವರೇ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಹೊಸ ಪ್ರಕರಣ: ಲಾಲು ಪ್ರಸಾದ್ ಯಾದವ್ ಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಸಿಬಿಐ ದಾಳಿ
ಚಂದ್ರ ಆರ್ಯ ಅವರು ಹೇಳಿದ್ದು ಇಷ್ಟು.. : “‘ಮಾನ್ಯ ಸಭಾಪತಿ, ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮುದ್ದು ಕನ್ನಡದಲ್ಲಿ ಮಾತನಾಡುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ.
ಕೆನಡಾ ದೇಶದ ಕನ್ನಡಿಗರು 2018ನೇ ಇಸವಿಯಲ್ಲಿ, ಕೆನಡಾದ ಈ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿದರು. ರಾಷ್ಟ್ರಕವಿ ಕುವೆಂಪು ಬರೆದಿರುವ ಮತ್ತು ನಟಸಾರ್ವಭೌಮ ಡಾ. ರಾಜಕುಮಾರ್ ಹಾಡಿರುವ ಭಾವಗೀತೆಯ ಕೆಲವು ಸಾಲುಗಳೊಂದಿಗೆ ನನ್ನ ಹೇಳಿಕೆಯನ್ನು ಮುಗಿಸುತ್ತಿದ್ದೇವೆ. ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗೂ ನೀನು ಕನ್ನಡಿಗನಾಗಿರು”.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.