Delhi Liquor Scam: ಕೇಜ್ರಿವಾಲ್ ಬಳಿಕ ಇ.ಡಿಯಿಂದ AAP ಸಚಿವ ಕೈಲಾಶ್ ಗೆಹ್ಲೋಟ್ ವಿಚಾರಣೆ
ಜೈನ್, ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಕೂಡಾ ಜಾರಿ ನಿರ್ದೇಶನಾಲಯ ಈ ಮೊದಲು ಬಂಧಿಸಿತ್ತು.
Team Udayavani, Mar 30, 2024, 4:23 PM IST
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ (Kailash Gahlot) ಶನಿವಾರ (ಮಾರ್ಚ್ 30) ಜಾರಿ ನಿರ್ದೇಶನಾಲಯ ಕಚೇರಿಗೆ ಹಾಜರಾಗಿದ್ದು, ಅಧಿಕಾರಿಗಳು ಈ ಸಂದರ್ಭದಲ್ಲಿ ವಿಚಾರಣೆಗೊಳಪಡಿಸಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Gadag; ಎಲೆಕ್ಟ್ರೋಲ್ ಬಾಂಡ್ ವಿಷಯವಾಗಿ ಮೋದಿ ಶ್ವೇತ ಪತ್ರ ಹೊರಡಿಸಲಿ: ಎಚ್.ಕೆ ಪಾಟೀಲ
ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಬಂಧಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಅಬಕಾರಿ ನೀತಿ (Excise policy) ಸಿದ್ಧಪಡಿಸುವ ಸಂದರ್ಭದಲ್ಲಿ ಗೆಹ್ಲೋಟ್ ಅವರು ತಮ್ಮ ಅಧಿಕೃತ ನಿವಾಸವನ್ನು ಬಳಸಲು ಆಪ್ ನ ಸಂವಹನ ಉಸ್ತುವಾರಿ ವಿಜಯ್ ನಾಯರ್ ಅವರಿಗೆ ಅನುಮತಿ ನೀಡಿರುವುದಾಗಿ ತನಿಖಾ ಸಂಸ್ಥೆ ಆರೋಪಿಸಿದೆ.
ಅಲ್ಲದೇ ಗೆಹ್ಲೋಟ್ ಅವರು ಪದೇ, ಪದೇ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ್ದರು ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಈ ಮೊದಲು ದೂರಿದ್ದರು. ಸಿಎಂ ಕೇಜ್ರಿವಾಲ್ ಏಪ್ರಿಲ್ 1ರವರೆಗೆ ಇ.ಡಿ. (E.D) ಕಸ್ಟಡಿಯಲ್ಲಿರಲಿದ್ದಾರೆ.
ಅಬಕಾರಿ ನೀತಿ ಹಗರಣದಲ್ಲಿ ಕೇಜ್ರಿವಾಲ್ ಸೇರಿದಂತೆ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಮಾಜಿ ಸಚಿವ ಸತ್ಯೇಂದ್ರ ಜೈನ್, ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಕೂಡಾ ಜಾರಿ ನಿರ್ದೇಶನಾಲಯ ಈ ಮೊದಲು ಬಂಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.