ಸೋಂಕು ತಡೆಗೆ ನಿಯಮಾವಳಿ
ಕೊರೊನಾ ನಿಯಂತ್ರಣಕ್ಕೆ ಕಠಿನ ಕಾಯ್ದೆ ಜಾರಿ
Team Udayavani, Mar 12, 2020, 7:00 AM IST
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ “ಕರ್ನಾಟಕ ಸಾಂಕ್ರಾಮಿಕ ರೋಗ ಕೋವಿಡ್- 19 (ಕೊರೊನಾ ವೈರಸ್ ಡಿಸೀಸ್ – 2019) ನಿಯಂತ್ರಣ’ ನಿಯಮಾವಳಿ ಜಾರಿಗೊಳಿಸಿದೆ.
ಈ ನಿಯಮದಡಿ ಕೊರೊನಾ ಸೋಂಕಿಗೆ ಸಂಬಂಧಿಸಿ ದಂತೆ ಗಂಟಲು ದ್ರಾವಣ, ರಕ್ತ ಮಾದರಿ ಗಳನ್ನು ತೆಗೆಯಲು ಹಾಗೂ ಪರೀಕ್ಷಿಸಲು ಯಾವುದೇ ಖಾಸಗಿ ಪ್ರಯೋಗಾಲಯಗಳಿಗೆ, ಖಾಸಗಿ ಆಸ್ಪತ್ರೆಗಳಿಗೆ ಅಧಿಕಾರವಿಲ್ಲ. ಅಂತಹ ಎಲ್ಲ ಮಾದರಿಗಳನ್ನು ಭಾರತ ಸರಕಾರದ ಮಾರ್ಗ ಸೂಚಿ ಯಂತೆ ಸಂಗ್ರಹಿಸಿ ಸಂಬಂಧಿತ ಪ್ರಯೋ ಗಾಲಯಗಳಿಗೆ ಕಳುಹಿಸುವಂತೆ ಆಯಾ ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಎಲ್ಲ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ವೈರಸ್ ಶಂಕಿತ ರೋಗಿಗಳನ್ನು ಪ್ರತ್ಯೇಕ ವ್ಯವಸ್ಥೆ ಯಲ್ಲಿ ಇರಿಸಿ ಪರೀಕ್ಷೆ ಮಾಡಬೇಕು. ಆಸ್ಪತ್ರೆಗಳಲ್ಲಿ ತಪಾಸಣೆಯ ಸಂದರ್ಭದಲ್ಲಿ ಶಂಕಿತ ವ್ಯಕ್ತಿಯ ಪ್ರಯಾಣದ ಇತಿಹಾಸವನ್ನು ಹಾಗೂ ಅವರ ಸಂಪರ್ಕಕ್ಕೆ ಬಂದವರ ಮಾಹಿತಿಯನ್ನು ದಾಖಲಿಸಬೇಕು. ಸೋಂಕಿತ ವಿದೇಶಕ್ಕೆ ಹೋಗಿ ದ್ದರ ಮಾಹಿತಿ ಇದ್ದಲ್ಲಿ ಅವರನ್ನು 28 ದಿನಗಳ ನಿಗಾ ದಲ್ಲಿರಿಸಬೇಕು. ಕಳೆದ 14 ದಿನಗಳ ಹಿಂದೆ ಸೋಂಕಿತ ದೇಶಗಳಿಂದ ಆಗಮಿಸಿರುವ ಪ್ರಯಾಣಿಕರು ಹತ್ತಿರದ ಸರಕಾರಿ ಆಸ್ಪತ್ರೆಯಲ್ಲಿ ವರದಿ ಮಾಡಿಕೊಳ್ಳಬೇಕು. ಇಲ್ಲವೇ 104ಕ್ಕೆ ಕರೆ ಮಾಡಿ ತಿಳಿಸಬೇಕು. ಇಲ್ಲವಾದಲ್ಲಿ ಅದು ಅಪರಾಧವಾಗುತ್ತದೆ. ವಿದೇಶದಿಂದ ಬಂದವರು ಸೋಂಕು ಇಲ್ಲದಿದ್ದರೂ 14 ದಿನ ಮನೆಯಲ್ಲಿ ಇರಬೇಕು. ಸೋಂಕು ನಿಯಂತ್ರಣಕ್ಕಾಗಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಸಿಬಂದಿ ಮೇಲೆ ಹಲ್ಲೆ ಮಾಡಬಾರದು, ಅವರ ಮೇಲೆ ಕೇಸು ದಾಖಲಿ ಸುವಂತೆಯೂ ಇಲ್ಲ ಎಂದು ತಿಳಿಸಲಾಗಿದೆ.
ಕೊರೊನಾ ಶಂಕಿತ ವೃದ್ಧ ಸಾವು
ಬೆಂಗಳೂರು: ಕೊರೊನಾ ಸೋಂಕು ಶಂಕಿತ ವೃದ್ಧ (76) ಸೋಂಕು ಲಕ್ಷಣ ಜತೆಗೆ ಇತರ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವಿಗೀಡಾಗಿದ್ದಾರೆ.
ಸತತ ಜಾಗೃತಿ ಹಾಗೂ ಮುನ್ನೆಚ್ಚರಿಕೆ ಕ್ರಮದ ಫಲವಾಗಿ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿದ್ದು, ಒಂದು ಲಕ್ಷ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗಿದೆ.
ಈ ನಡುವೆ, ಕಲಬುರಗಿಯಲ್ಲಿ ವೃದ್ಧರೊಬ್ಬರು ಸಾವನ್ನಪ್ಪಿದ್ದು ಆತಂಕ ಸೃಷ್ಟಿಸಿತ್ತು. ಸೌದಿ ಅರೇಬಿಯಾ ದಿಂದ ಮರಳಿದ್ದ ಇವರು ಜ್ವರದಿಂದ ಬಳಲುತ್ತಿದ್ದು, ಕೊರೊನಾ ಸೋಂಕು ಪರೀಕ್ಷೆಗೆ ಒಳಪಟ್ಟಿದ್ದರು. ವರದಿ ಬರುವ ಮೊದಲೇ ಅವರು ಸಾವನ್ನಪ್ಪಿದ್ದಾರೆ.
ಕೊರೊನಾ ಶಂಕಿತ ವೃದ್ಧ ತೀವ್ರ ಅಸ್ತಮಾ, ಅಧಿಕ ರಕ್ತದೊತ್ತಡದಂತಹ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವ ರಿಗೆ ನ್ಯುಮೋನಿಯಾ ಕೂಡ ಇತ್ತು. ಸಾರ್ವಜನಿಕರು ಅನಗತ್ಯ ಭಯ ಪಡ ಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದರು.
ಭಯದಿಂದ ಬರಬೇಡಿ
ರಾಜ್ಯದ ಬಹುತೇಕ ಕಡೆ ನಮಗೂ ಕೊರೊನಾ ತಗಲಿರಬಹುದು ಎಂಬ ಭಯದಿಂದ ಆಸ್ಪತ್ರೆಗೆ ಬರುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅನಗತ್ಯ ಭಯಪಡದೆ ಸೋಂಕಿನ ಲಕ್ಷಣಗಳಿದ್ದರೆ ಮಾತ್ರ ಆಸ್ಪತ್ರೆ ಕಡೆ ಬನ್ನಿ. ಇಲ್ಲದಿದ್ದರೆ ವಿದೇಶದಿಂದ ಬಂದ 28 ದಿನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದು ಬಳಿಕ ಮುಕ್ತವಾಗಿ ಹೊರಗಡೆ ಓಡಾಟ ನಡೆಸಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಸಲಹೆ ನೀಡಿದರು.
ಸೋಂಕಿತರ ಸಂಖ್ಯೆ ಏರಿಕೆಯಾಗಿಲ್ಲ
ರಾಜ್ಯದ ಎರಡು ವಿಮಾನ ನಿಲ್ದಾಣ ಹಾಗೂ ಎರಡು ಬಂದರುಗಳಲ್ಲಿ ಜ. 21ರಿಂದ ಮಾ. 10ರ ವರೆಗೂ ಒಟ್ಟು ಒಂದು ಲಕ್ಷ ಪ್ರಯಾಣಿಕರನ್ನು ತಪಾಸಣೆ ಮಾಡಲಾಗಿದೆ. ಈ ಪೈಕಿ 1,142 ಮಂದಿಯನ್ನು ಅವಲೋಕನಕ್ಕೆ ನೋಂದಾಯಿಸಿಕೊಳ್ಳಲಾಗಿತ್ತು. ಇದರಲ್ಲಿ 287 ಮಂದಿಯ 28 ದಿನಗಳ ಅವಲೋಕನ ಅವಧಿ ಮುಕ್ತಾಯವಾಗಿದೆ. 526 ಮಂದಿ ಸೋಂಕು ಪರೀಕ್ಷೆ ಮಾಡಿದ್ದು, 441 ಮಂದಿ ವರದಿ ನೆಗೆಟಿವ್ ಬಂದಿವೆ. ಸದ್ಯ 11 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ನಾಲ್ವರು ಸೋಂಕಿತರನ್ನು ಹೊರತುಪಡಿಸಿ ರಾಜ್ಯದಲ್ಲಿ ಹೊಸದಾಗಿ ಯಾರಲ್ಲೂ ಕೊರೊನಾ ಸೋಂಕು ದೃಢಪಟ್ಟಿಲ್ಲ ಎಂದು ಸಚಿವ ಶ್ರೀರಾಮುಲು ಮಾಹಿತಿ ನೀಡಿದರು. ದೇಶದಲ್ಲಿ ಕೊರೊನಾ ಸೋಂಕು ತಗಲಿದವರ ಸಂಖ್ಯೆ ಬುಧವಾರ 66ಕ್ಕೆ ಏರಿಕೆಯಾಗಿದೆ.
ಸಾವಿನ ಸಂಖ್ಯೆ
ದೇಶ ಹೊಸ ಪ್ರಕರಣ ಒಟ್ಟು
ಚೀನ 22 3158
ಇಟಲಿ 168 631
ಇರಾನ್ 63 354
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.