ಸೀಮಾ ನಿರ್ಣಯ ಆಯೋಗ ರಚನೆ: ನಿರ್ಧಾರ ಸಮರ್ಥಿಸಿಕೊಂಡ ಸರ್ಕಾರ
Team Udayavani, Mar 5, 2022, 10:38 PM IST
ಬೆಂಗಳೂರು: ತಾ.ಪಂ. ಹಾಗೂ ಜಿ.ಪಂ. ಕ್ಷೇತ್ರಗಳ ಗಡಿಗಳನ್ನು ಗುರುತಿಸಿ, ಮೀಸಲಾತಿ ನಿಗದಿಪಡಿಸಲು ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚನೆ ಮಾಡಿರುವುದರಿಂದ ರಾಜ್ಯ ಚುನಾವಣಾ ಆಯೋಗದ ಸ್ವಾತಂತ್ರ್ಯ ಮತ್ತು ಕಾರ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.
ಸೀಮಾ ನಿರ್ಣಯ ಆಯೋಗ ರಚಿಸಲು ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರಕಾರ ಲಿಖಿತ ಹೇಳಿಕೆ ಸಲ್ಲಿಸಿದೆ.
ಕ್ಷೇತ್ರ ಪುನರ್‌ವಿಂಗಡಣೆ ಮಾಡುವುದು ಸಂವಿಧಾನದ ಪರಿಚ್ಛೇದ 243-ಕೆ ಅಡಿಯಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ವಹಿಸಿಕೊಡಲಾದ ಜವಾಬ್ದಾರಿ ಅಲ್ಲ. ರಾಜ್ಯ ಚುನಾವಣಾ ಆಯೋಗದ ಮೇಲಿನ ಭಾರ ಕಡಿಮೆ ಮಾಡಲು ಹಾಗೂ ತಾ.ಪಂ, ಜಿ.ಪಂ ಕ್ಷೇತ್ರಗಳ ಗಡಿ ಗುರುತಿಸುವ, ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕವಾಗಿ ಮತ್ತು ಸಾರ್ವಜನಿಕರ ಪಾಲ್ಗೊಳ್ಳುವಿಕೆ ಮೂಲಕ ನಡೆಸಲು ಪ್ರತ್ಯೇಕ ಆಯೋಗ ರಚಿಸಲಾಗಿದೆ. ಹಾಗಾಗಿ, ಸೀಮಾ ನಿರ್ಣಯ ಆಯೋಗದ ರಚನೆ ಪ್ರಶ್ನಿಸುವ ಮಾನ್ಯತೆ ಚುನಾವಣಾ ಆಯೋಗಕ್ಕೆ ಇಲ್ಲ ಎಂದು ಸರಕಾರ ಹೇಳಿದೆ. ಸರಕಾರದ ಲಿಖೀತ ಹೇಳಿಕೆಯನ್ನು ದಾಖಲಿಸಿಕೊಂಡ ಹೈಕೋರ್ಟ್ ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.