ಎಥೆನಾಲ್ ಘಟಕ, ಸಕ್ಕರೆ ಉತ್ಪಾದನೆ ಮೂಲಕ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಯೋಜನೆ


Team Udayavani, Aug 8, 2021, 6:03 PM IST

ಎಥೆನಾಲ್ ಘಟಕ, ಸಕ್ಕರೆ ಉತ್ಪಾದನೆ ಮೂಲಕ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಯೋಜನೆ

ಬ್ರಹ್ಮಾವರ/ ಕೋಟ: ಸುಮಾರು ಹದಿನೈದು ವರ್ಷಗಳಿಂದ ಮುಚ್ಚಿರುವ ಹಾಗೂ ನೈಪಥ್ಯಕ್ಕೆ ಸರಿಯುತ್ತಿರುವ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯನ್ನು ಉಳಿಸಿಕೊಳ್ಳುವ ಹೋರಾಟ ಸಾಕಷ್ಟು ಬಾರಿ ನಡೆದಿದ್ದು ಇದೀಗ ಹೊಸ ಆಡಳಿತದ ಮಂಡಳಿ ಈ ನಿಟ್ಟಿನಲ್ಲಿ ಒಂದಷ್ಟು ಪೂರಕ ಚಟುವಟಿಕೆಯಲ್ಲಿ ತೊಡಗಿದೆ. ಹೀಗಾಗಿ ಸಕ್ಕರೆ ಕಾರ್ಖಾನೆಯ ಅಳವು-ಉಳಿವಿನ ಸಾಧ್ಯತೆಗಳ ಕುರಿತು ಚರ್ಚೆ ನಡೆಸುವ ಸಲುವಾಗಿ ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಾರ್ಖಾನೆ ಆಡಳಿತ ಮಂಡಳಿಯೊಂದಿಗೆ ಮಾಧ್ಯಮ ಸಂವಾದ ಕಾರ್ಯಕ್ರಮ ಆ.7ರಂದು ಬ್ರಹ್ಮಾವರ ಮದರ್ ಪ್ಯಾಲೇಸ್ ಸಭಾಂಗಣದಲ್ಲಿ ಜರಗಿತು.

ಕಾರ್ಖಾನೆ ಆಡಳಿತ ಮಂಡಳಿಯ ಅಧ್ಯಕ್ಷ ಬಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ 152 ಸಂಸ್ಥೆಗಳು ಎಥೆನಾಲ್ ಘಟಕ ಸ್ಥಾಪನೆಗೆ ಹೆಸರು ನೊಂದಾಯಿಸಿಕೊಂಡಿದ್ದು ಇದರಲ್ಲಿ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯೂ ಒಂದು. ಎಥೆನಾಲ್ ಘಟಕ ಸ್ಥಾಪನೆಗೆ ಸರಕಾರದಿಂದ ದೊಡ್ಡ ಮಟ್ಟದ ಸಹಕಾರ ದೊರೆಯುತ್ತದೆ ಹಾಗೂ ಅರ್ಥಿಕ ಸಂಸ್ಥೆಗಳು ನೆರವು ನೀಡಬೇಕೆಂಬ ಸೂಚನೆ ಇದೆ. ಘಟಕಕ್ಕೆ ಅಗತ್ಯವಿರುವ ಜಾಗ ಹಾಗೂ ಮೂಲ ಸೌಕರ್ಯಗಳು ನಮ್ಮಲ್ಲಿ ಇದೆ. ಹೀಗಾಗಿ ಸಕ್ಕರೆ ಉತ್ಪಾದನೆ ಮತ್ತು ಎಥೆನಾಲ್ ಘಟಕದೊಂದಿಗೆ ಕಾರ್ಖಾನೆ ಪುನರ್ ನಿರ್ಮಾಣಕ್ಕೆ ಈಗಾಗಲೇ ಪೂರಕ ತಯಾರಿಗಳು ನಡೆಯುತ್ತಿದ್ದು ಎಲ್ಲಾ ಅಂದುಕೊಂಡಂತೆ ನೆರವೇರಿದರೆ 2023ರ ಅಂತ್ಯದೊಳಗೆ ಕಾರ್ಖಾನೆ ಪುನಾರಂಭಗೊಳ್ಳಲಿದೆ ಎನ್ನುವ ಭರವಸೆ ನೀಡಿದರು.

ಕಾರ್ಖಾನೆಯನ್ನು ಹೇಗೆ ಪುನರಾರಂಭಿಸುತ್ತೀರಿ ಎನ್ನುವ ಪ್ರಶ್ನೆಗೆ, ಈಗ ಇರುವ ಸಾಲ ಕೇವಲ 85 ಕೋಟಿ ರೂ ಮಾತ್ರ. ಅಸಲಿಗಿಂತ ಹೆಚ್ಚಿನ ಬಡ್ಡಿ ಮೊತ್ತ ಸೇರಿ ಇಷ್ಟೊಂದು ಸಾಲವಾಗಿದೆ. ಹೀಗಾಗಿ ಕೆಲವೊಂದು ಸಂಸ್ಥೆಗಳೊಂದಿಗೆ ಕಾನೂನು ಹೋರಾಟ ಚಾಲ್ತಿಯಲ್ಲಿದೆ ಹಾಗೂ ಸ್ಥಳೀಯ ಸಹಕಾರಿ ಸಂಘಗಳಲ್ಲಿ ಸೌರ್ಹಾದಯುತವಾಗಿ ಮಾತುಕತೆ ನಡೆಸಿ ರಿಯಾಯಿತಿಯೊಂದಿಗೆ ಸಾಲವನ್ನು ಇತ್ಯರ್ಥಪಡಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಹೊಸ ಕಾರ್ಖಾನೆ ನಿರ್ಮಿಸಲು 150ಕೋಟಿ ರೂ ಬೇಕಾಗಬಹುದು. ಕಾರ್ಖಾನೆಯ ಈಗಿರುವ ಯಂತ್ರೋಪಕರಣ ಸಂಪೂರ್ಣ ಗುಜರಿಗೆ ಹಾಕಬೇಕಿದ್ದು ಇದರಿಂದ 4-5ಕೋಟಿ ಆದಾಯ ಬರಲಿದೆ. ಎಥೆನಾಲ್ ಘಟಕ ಆರಂಭಿಸಲು ಸಹಕಾರಿ ಹಾಗೂ ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ನೀಡಬೇಕು ಎನ್ನುವ ಕೇಂದ್ರ ಸರಕಾರದ ನಿಯಮವಿದೆ. ಉದ್ಯಮಿಗಳಿಂದ ಷೆರ್ ಹೂಡಿಕೆಯ ಮೂಲಕ ಅರ್ಥಿಕ ನೆರವು ಪಡೆಯಲು ಎಲ್ಲಾ ತಯಾರಿ ನಡೆದಿದೆ. ಈ ಆದಾಯವನ್ನೆಲ್ಲ ಬಳಸಿಕೊಂಡು ಕಾರ್ಖಾನೆ ಪುನರಾರಂಭಿಸುತ್ತೇವೆ ಎಂದರು.

ಇದನ್ನೂ ಓದಿ :ಕಟಪಾಡಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು

ಜಿಲ್ಲೆಯಲ್ಲಿ ಕಬ್ಬು ಬೆಳೆಯುವುದನ್ನು ಈಗಾಗಲೇ ಸಂಪೂರ್ಣವಾಗಿ ನಿಲ್ಲಿಸಿದ್ದಾರೆ. ಆದ್ದರಿಂದ ಮುಂದೆ ಕಾರ್ಖಾನೆ ಆರಂಭಿಸಿದರೆ ಅಗತ್ಯ ಪ್ರಮಾಣದ ಕಬ್ಬು ಸಿಗಬಹುದೇ ಎನ್ನುವ ಮಾಧ್ಯಮದವರ ಪ್ರಶ್ನೆಗೆ, ಈಗಾಗಲೇ 2ಸಾವಿರ ಮಂದಿ ರೈತರು ಕಾರ್ಖಾನೆ ಆರಂಭಿಸಿದರೆ ಕಬ್ಬು ಬೆಳೆಯುವುದಾಗಿ ಭರವಸೆ ಪತ್ರ ನೀಡಿದ್ದಾರೆ ಹಾಗೂ ವಾರಾಹಿ ನೀರಾವರಿ ಪ್ರದೇಶದಲ್ಲೇ 10ಸಾವಿರ ಎಕ್ರೆ ಪ್ರದೇಶದಲ್ಲಿ ಕಬ್ಬು ಬೆಳೆಯಲು ಅವಕಾಶವಿದೆ. ಆದ್ದರಿಂದ ಕಾರ್ಖಾನೆ ಆರಂಭವಾದರೆ ಕಬ್ಬು ಸಿಗುತ್ತದೆ ಎಂದರು ಹಾಗೂ ಸರಕಾರ ಕಾರ್ಖಾನೆಯ ಸಾಲ ಮನ್ನಾ ಮಾಡಿ, ಹೊಸ ಸಾಲಕ್ಕೆ ಅಗತ್ಯವಿರುವ ನೆರವು ನೀಡಿದರೆ ತುಂಬಾ ಸಹಕಾರವಾಗುತ್ತದೆ ಎಂದರು.

ಕಾರ್ಖಾನೆಯ ಬಗ್ಗೆ ಕರಾವಳಿಯ ಜನರಲ್ಲಿ ಭಾವನಾತ್ಮಕ ಸಂಬಂಧವಿದೆ. 2006ರಲ್ಲಿ ಕಾರ್ಖಾನೆ ಸಂಪೂರ್ಣ ಮುಚ್ಚಿದ್ದು ಅನಂತರದಲ್ಲಿ ಕಾರ್ಖಾನೆ ಪುನರಾರಂಭವಾಗುವ ನಂಬಿಕೆಯನ್ನು ಜನರು ಕಳೆದುಕೊಂಡಿದ್ದಾರೆ, ಹೀಗಾಗಿ ಅವರಿಗೆ ಧೈರ್ಯ ತುಂಬುವ ಸಲುವಾಗಿ ಕಬ್ಬು ಬೆಳೆಸಿ ಎನ್ನುವ ಅಭಿಯಾನವನ್ನು ಅಕ್ಟೋಬರ್‌ನಲ್ಲಿ ಹಾಕಿಕೊಳ್ಳಲಿದ್ದೇವೆ ಹಾಗೂ 1500ಎಕ್ರೆ ಪ್ರದೇಶದಲ್ಲಿ ಕಬ್ಬು ಬೆಳೆಯಲು ಉತ್ತೇಜನ ನೀಡಲಿದ್ದೇವೆ. ಕಾರ್ಖಾನೆಯಲ್ಲಿ ಎರಡು ತಿಂಗಳು ಕಾರ್ಯಚರಿಸಲ್ಪಟ್ಟ ಆಲೆಮನೆಯಿಂದ 1.80ಲಕ್ಷ ರೂ ಲಾಭ ಬಂದಿದೆ. ಹೀಗಾಗಿ ಮುಂದೆ ದೊಡ್ಡಮಟ್ಟದಲ್ಲಿ ಬೆಲ್ಲದ ಘಟಕ ಅಳವಡಿಸಲಿದ್ದೇವೆ. ಕಾರ್ಖಾನೆ ಆರಂಭವಾಗುವ ತನಕ ರೈತರ ಕಬ್ಬನ್ನು ನಿರಂತರ ಬೆಲ್ಲ ತಯಾರಿಗೆ ಬಳಸಿಕೊಳ್ಳುತ್ತೇವೆ. ಈ ಮೂಲಕ ಹಂತ-ಹಂತವಾಗಿ ರೈತರಲ್ಲಿ ಭರವಸೆ ಮೂಡಿಸಲಿದ್ದೇವೆ ಎಂದರು.

ಜಾಗ ಮಾರಾಟ ಮಾಡುವ ಗುಮಾನಿ ಕುರಿತು ಪ್ರಶ್ನಿಸಿದಾಗ, ಇಲ್ಲ ಒಂದಿಂಚ್ಚು ಜಾಗವನ್ನು ಮಾರಾಟ ಮಾಡುವುದಿಲ್ಲ. ಸಕ್ಕರೆ ಉತ್ಪಾದನೆ, ಎಥೆನಾಲ್ ಉತ್ಪಾದನೆಯ ಜತೆಗೆ ಬೆಲ್ಲದ ಆಲೆಮನೆ, ಗಾಣದ ತೆಂಗಿನ ಎಣ್ಣೆ ಉತ್ಪಾದನೆ, ಭತ್ತ ಖರೀದಿ, ಭತ್ತದ ಮಿಲ್, ವಾಣಿಜ್ಯ ಸಂಕೀರ್ಣ ನಿರ್ಮಾಣ, ಹಿಟ್ಟು ತಯಾರಿಕೆ ಘಟಕ, ಗೋಡಾಮು ನಿರ್ಮಾಣ ಸೇರಿದಂತೆ ರೈತರಿಗೆ ಪೂರಕವಾದ ವಿವಿಧ ಯೋಜನೆಗಳನ್ನು ರೂಪಿಸಲಿದ್ದೇವೆ. ಇಲ್ಲಿನ ಒಂದಿಚ್ಚು ಜಾಗವನ್ನು ಮಾರಾಟ ಮಾಡುವುದಿಲ್ಲ ಎಂದರು.

ಜನಪ್ರತಿನಿಧಿಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ ಹಾಗೂ ಉಡುಪಿ ಜಿಲ್ಲೆಯ ೫ ಶಾಸಕರು, ಸಚಿವರು, ಎರಡು ಕ್ಷೇತ್ರಗಳ ಸಂಸದರು ಜತೆಯಾಗಿ ಸಭೆ ನಡೆಸಿ ಕಾರ್ಖಾನೆ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಳ್ಳುವ ಭರವಸೆ ನೀಡಿದ್ದು ಶೀಘ್ರದಲ್ಲೇ ಈ ಸಭೆ ನಡೆಯಲಿದೆ ಎಂದರು.

ಬ್ರಹ್ಮಾವರ ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಗೋಷ್ಠಿ ಉದ್ಘಾಟಿಸಿದರು. ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಉಪಾಧ್ಯಕ್ಷ ಉಮಾನಾಥ ಶೆಟ್ಟಿ, ನಿರ್ದೇಶಕ ಆಸ್ತಿಕ್ ಶಾಸ್ತ್ರಿ, ಸಂತೋಷ್ ಶೆಟ್ಟಿ ಬಾಲಾಡಿ, ಸನ್ಮತ್ ಹೆಗ್ಡೆ, ಸುಬ್ಬ ಬಿಲ್ಲವ, ರತ್ನಾಕರ ಗಾಣಿಗ, ಕಾರ್ಖಾನೆಯ ಮ್ಯಾನೇಜರ್ ಗೋಪಾಲಕೃಷ್ಣ, ಕಾನೂನು ಸಲಹೆಗಾರ ವಿಜಯ ಹೆಗ್ಡೆ, ಉದ್ಯಮಿ ಭರತ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಜಿಲ್ಲಾ ಸಂಘದ ಜತೆ ಕಾರ್ಯದರ್ಶಿ ರಾಜೇಶ್ ಸ್ವಾಗತಿಸಿ, ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿ, ತಾಲೂಕು ಸಂಘದ ಖಜಾಂಚಿ ಮೋಹನ್ ಉಡುಪ ವಂದಿಸಿದರು.

ಟಾಪ್ ನ್ಯೂಸ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

4

Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

Kudla namdu Ooru movie

Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು

3

Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.