Ettinahole Project: ಬತ್ತಿದ ಕನಸುಗಳಿಗೆ ಎತ್ತಿನಹೊಳೆ ಜೀವಜಲ ಧಾರೆ!
ಇಂದು ಬಯಲುಸೀಮೆಯನ್ನು ಬಂಗಾರದ ಸೀಮೆ ಮಾಡುವ ಶುಭ ಗಳಿಗೆ
Team Udayavani, Sep 6, 2024, 6:15 AM IST
“ಬಯಲುಸೀಮೆ’ ಎಂಬ ಹೆಸರು ಕೇಳಿದಾಕ್ಷಣ ನಮ್ಮ ಮನಸ್ಸಿಗೆ ಬರಡು ಭೂಮಿಯ ಚಿತ್ರಣ ಬರುತ್ತದೆ. ಕೆಲವು ದಶಕಗಳಿಂದಲೇ ಬಯಲು ಸೀಮೆಯಲ್ಲಿ ನೀರಿನ ಕೊರತೆ ಕಂಡುಬಂದಿತ್ತು. ಬಯಲುಸೀಮೆಯ ಬಹುತೇಕ ಭಾಗ ಹಿಂದುಳಿಯುವಲ್ಲಿ ನೀರಾವರಿಯ ಕೊರತೆ ದೊಡ್ಡ ಪರಿಣಾಮ ಬೀರಿದೆ. ತರಕಾರಿ, ಹೂವು, ಹಣ್ಣು ಹಾಗೂ ರೇಷ್ಮೆ ಕೃಷಿ ಪ್ರಧಾನವಾಗಿರುವ ಬಯಲು ಸೀಮೆಗೆ ಜೀವಜಲವನ್ನು ಒದಗಿಸುವುದು ಅನೇಕ ದಶಕಗಳ ಕನಸು. ಕಾಂಗ್ರೆಸ್ ಸರಕಾರದ ಈ ಆಡಳಿತಾವಧಿ ಯಲ್ಲಿ, ಬಯಲುಸೀಮೆಗೆ ನೀರಿನ ಸಿಂಚನವಾಗಿದೆ. ಇದೇ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ನೀರು ಪೂರೈಕೆ ಕಾರ್ಯ.
“ಸ್ವರ್ಣ ಗೌರಿ’ ಮನೆಗೆ ಬರುತ್ತಾಳೆ ಎಂದರೆ ಎಲ್ಲ ಬಗೆಯ ಸಮೃದ್ಧಿ ಮನೆಯಲ್ಲಿ ನೆಲೆಯಾಗಲಿದೆ ಎಂದೇ ಅರ್ಥ. ಈ ಬಾರಿಯ ಗೌರಿ ಹಬ್ಬ ಅಂತಹ ಜಲ ಸಮೃದ್ಧಿಯನ್ನು ತರುತ್ತಿದೆ. ಈ ಭಗೀರಥ ಕಾರ್ಯವನ್ನು ಮಾಡುವ ಅವಕಾಶ ಕಾಂಗ್ರೆಸ್ ಸರಕಾರಕ್ಕೆ, ಅದು ಕೂಡ ನನಗೆ ದೊರಕಿರುವುದು ಪುಣ್ಯವೆಂದೇ ಭಾವಿಸಿದ್ದೇನೆ. ಒಂದು ಕಡೆ ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಜಧಾನಿ ಬೆಂಗಳೂರು. ಇದರ ಸುತ್ತಮುತ್ತ ನೀರಾವರಿಗೂ ಕಷ್ಟ ಪಡುವ ಜಿಲ್ಲೆಗಳು.
ಈ ಸಮಸ್ಯೆಯನ್ನು ನಿವಾರಿಸಲು ನಾನು ನೀರಾವರಿ ಕ್ಷೇತ್ರದ ಬಗ್ಗೆ ಹೆಚ್ಚು ಆಸಕ್ತಿ ವಹಿಸಿದೆ. ಕೃಷ್ಣರಾಜಸಾಗರ ಜಲಾಶಯ ಹಳೆ ಮೈಸೂರು ಭಾಗದ ಸಮಗ್ರ ಪ್ರಗತಿಗೆ ಹೇಗೆ ಕಾರಣವಾಗಿದೆ ಎಂಬುದನ್ನು ನಾನು ಚಿಕ್ಕಂದಿನಿಂದಲೂ ನೋಡಿದ್ದೇನೆ. ಇಂತಹ ಯೋಜನೆಯೊಂದನ್ನು ನಮ್ಮ ಬಯಲುಸೀಮೆಗೆ ನೀಡಬೇಕು ಎನ್ನುವುದು ನನ್ನ ಬಹುವರ್ಷಗಳ ಕನಸಾಗಿತ್ತು. ಅದನ್ನು ಎತ್ತಿನಹೊಳೆಯ ಮೂಲಕ ನೆರವೇರಿಸಿದ್ದೇನೆ ಎನ್ನುವುದು ನನ್ನ ಬದುಕಿನ ಸಾರ್ಥಕತೆಯ ಕ್ಷಣ.
ಈಡೇರಿದ ಸಂಕಲ್ಪ: ಚುನಾವಣೆಗೂ ಮುನ್ನವೇ ಎತ್ತಿನಹೊಳೆ ಯೋಜನೆಗೆ ಕಾಯಕಲ್ಪ ನೀಡಿಯೇ ತೀರುತ್ತೇನೆ ಎಂದು ಸಂಕಲ್ಪ ಮಾಡಿದೆ. ಅಂದುಕೊಂಡ ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೃಢ ನಾಯಕತ್ವದಲ್ಲಿ, ಕಾಮಗಾರಿಗಳಿಗೆ ವೇಗ ನೀಡಿ, ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮ ವಹಿಸಿದೆ. ಅದರ ಫಲಿತಾಂಶ ಇಂದು ನಮ್ಮೆಲ್ಲರ ಮುಂದಿದೆ.
ಬರಡು ಭೂಮಿ ತೊಡೆದು ಹಾಕುವ ಗಳಿಗೆ: ಎತ್ತಿನಹೊಳೆ ಯೋಜನೆಯ ಮೊದಲ ಹಂತದ ನೀರು ಪೂರೈಕೆಗೆ ಸೆಪ್ಟಂಬರ್ 6ರ ಶುಭ ಶುಕ್ರವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡ ಲಿ¨ªಾರೆ. ಹೆಬ್ಬನಹಳ್ಳಿ ವಿತರಣ ತೊಟ್ಟಿಯ 4ರಿಂದ 32 ಕಿ.ಮೀ. ದೂರದಲ್ಲಿ ಎಸ್ಕೇಪ್ ಚಾನೆಲ್ ರೂಪಿಸಿದ್ದು, ಅಲ್ಲಿಂದ ನಾಲೆಯ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಪೂರೈಸಲಾಗುತ್ತದೆ. ನವೆಂಬರ್ 1ರ ವೇಳೆಗೆ ಸುಮಾರು 5 ಟಿಎಂಸಿ ನೀರನ್ನು ಮೇಲಕ್ಕೆ ಎತ್ತಲಾಗುತ್ತದೆ. ಇದು ಬಯಲುಸೀಮೆ “ಬರಡು’ ಎಂಬ ಟೀಕೆಯನ್ನು ತೊಡೆದುಹಾಕುವ ಗಳಿಗೆ.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಒಂದೂವರೆ ವರ್ಷದೊಳಗೆ ಯೋಜನೆಯ ಮೊದಲ ಹಂತದ ನೀರು ಸರಬರಾಜು ಕಾರ್ಯ ಸಾಕಾರಗೊಂಡಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮಾತ್ರವಲ್ಲದೆ, ರಾಮನಗರದ ಕೆಲವು ಭಾಗ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೂ ಜೀವಜಲ ದೊರೆಯಲಿದೆ.
ನೀರಾವರಿ ಯೋಜನೆ ಪ್ರಗತಿ: 2027ಕ್ಕೆ ಯೋಜನೆಯ ಕಾಮಗಾರಿಯನ್ನು ಪೂರ್ಣಗೊಳಿಸು ವುದು ಕಾಂಗ್ರೆಸ್ ಸರಕಾರದ ಆದ್ಯತೆಯ ಮಹತ್ವ ಕಾಂಕ್ಷೆ. ಪ್ರಣಾಳಿಕೆಯಲ್ಲಿದ್ದ “ಕಾಂಗ್ರೆಸ್ ಬರಲಿದೆ, ಪ್ರಗತಿ ತರಲಿದೆ’ ಎಂಬ ಘೋಷಣೆಯಂತೆಯೇ ಈಗ ಎತ್ತಿನಹೊಳೆಯ ನೀರಿನ ಮೂಲಕ ನೀರಾವರಿಯ ಪ್ರಗತಿ ತರಲಾಗುತ್ತಿದೆ.
ಯೋಜನೆಯಡಿ ಒಟ್ಟು 24.01 ಟಿಎಂಸಿ ನೀರನ್ನು ಕುಡಿಯುವ ನೀರು ಹಾಗೂ ಕೆರೆಗಳನ್ನು ತುಂಬಿಸಲು ಬಳಸಿಕೊಳ್ಳಲಾಗುತ್ತದೆ. ಇದರಿಂದ ಬರ ಪೀಡಿತವಾದ 29 ತಾಲೂಕುಗಳ 6,657 ಗ್ರಾಮಗಳ 75.59 ಲಕ್ಷ ಜನರ ದಾಹ ತೀರಲಿದೆ. ಜತೆಗೆ 5 ಜಿಲ್ಲೆಗಳ 527 ಕೆರೆಗಳ ಅಂತರ್ಜಲ ಮರುಪೂರಣ ಕಾರ್ಯವೂ ನಡೆಯಲಿದೆ. ಇದಕ್ಕಾಗಿ ರಾಜ್ಯ ಸರಕಾರ
ಖರ್ಚು ಮಾಡುತ್ತಿರುವುದು ಬರೋಬ್ಬರಿ 23,251 ಕೋಟಿ ರೂ.!
ಬಿಜೆಪಿ ಸರಕಾರ ರಾಜಕೀಯ ಲಾಭದ ದೃಷ್ಟಿಯಿಂದ ದೂರದೃಷ್ಟಿಯಿಲ್ಲದೇ ಯೋಜನೆ ರೂಪಿಸಿತ್ತು. ಆದರೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ, ಯೋಜನೆಯ ಮೊತ್ತವನ್ನು ಹೆಚ್ಚಿಸಿ, 2014ರ ಫೆಬ್ರವರಿಯಲ್ಲಿ ಅನುಮೋದನೆ ನೀಡಿತು. ಅನಂತರ ಚಿಕ್ಕಬಳ್ಳಾಪುರದಲ್ಲಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಕಾಮಗಾರಿಗೆ ವೇಗ ನೀಡಿ ನೀರೆತ್ತುವ ಕಾರ್ಯವನ್ನು ನನಸು ಮಾಡಿದೆ.
ಇದು ಬಯಲುಸೀಮೆಯ ನೀರಾವರಿ ಕ್ರಾಂತಿ ಯಲ್ಲಿ ಆರಂಭದ ಹೆಜ್ಜೆ. ಈ ಹೆಜ್ಜೆಯನ್ನು ಇನ್ನಷ್ಟು ಮುಂದಕ್ಕೆ ಒಯ್ದು, ಎತ್ತಿನಹೊಳೆ ಯೋಜನೆಯನ್ನು ಈ ಸರಕಾರದ ಅವಧಿಯಲ್ಲೇ ಪೂರ್ಣ ಗೊಳಿಸುವುದು ನಮ್ಮ ಮುಂದಿನ ಗುರಿ ಮತ್ತು ಸವಾಲು. ಅದಕ್ಕಾಗಿ ಜನಬಲವೊಂದಿದ್ದರೆ ಸಾಕು.
ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.