ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

Team Udayavani, Sep 21, 2021, 9:36 PM IST

ಕೃಷಿ ಉತ್ಪನ್ನಗಳ ರಫ್ತಿಗೆ ಆದ್ಯತೆ ಅಗತ್ಯ: ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು: ರಾಜ್ಯ ಸರಕಾರಗಳು ಕೈಗಾರಿಕೆ ಇಲಾಖೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತಿಗೆ ಪ್ರತ್ಯೇಕ ಕೋಶ ತೆರೆಯುವ ಮೂಲಕ ಕೃಷಿ ರಫ್ತನ್ನು ಪ್ರೋತ್ಸಾಹಿಸಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಭಾಗವಾಗಿ ಕೇಂದ್ರ ವಾಣಿಜ್ಯ ಇಲಾಖೆಯು ಮಂಗಳವಾರ ಆಯೋಜಿಸಿದ್ದ ವಾಣಿಜ್ಯ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಾಣಿಜ್ಯ, ಕೈಗಾರಿಕಾ ಇಲಾಖೆಗಳು ಹೆಚ್ಚು ಐ.ಟಿ, ಬಿ.ಟಿ ವಲಯದ ಕಡೆಗೆ ಗಮನ ಹರಿಸುತ್ತವೆ. ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ರಫ್ತಿಗೂ ಆದ್ಯತೆ ನೀಡಬೇಕು. ಆಹಾರ ಸಂಸ್ಕರಣೆ ಮಾಡುವ ಮೂಲಕ ಮೌಲ್ಯವರ್ಧನೆ ಮಾಡಿದರೆ ದೇಶ ಮತ್ತು ಹೊರ ದೇಶಗಳ ಮಾರುಕಟ್ಟೆಗಳಲ್ಲಿ ರಾಜ್ಯದ ಕೃಷಿ ಉತ್ಪನ್ನಗಳು ಸ್ಥಾನ ಪಡೆದುಕೊಳ್ಳಲು ಅವಕಾಶ ಇದೆ ಎಂದರು.

ಸಿರಿಧಾನ್ಯ ಉತ್ಪಾದನೆ, ರಫ್ತು ಪ್ರೋತ್ಸಾಹಿಸಿ
2023ರ ವೇಳೆಗೆ ಕರ್ನಾಟಕದಿಂದ ಸಿರಿಧಾನ್ಯಗಳ ಉತ್ಪಾದನೆ ಮತ್ತು ರಫ್ತು ಪ್ರಮಾಣ ಹೆಚ್ಚಬೇಕು. ಕೃಷಿ ಕ್ಷೇತ್ರದ ಪ್ರಗತಿ ಮತ್ತು ರೈತ ಸಮುದಾಯದ ಕಲ್ಯಾಣಕ್ಕಾಗಿ ಕರ್ನಾಟಕ ಕೈಗೊಳ್ಳುವ ಕ್ರಮಗಳಿಗೆ ಅಗತ್ಯ ಸಹಕಾರ ನೀಡಲು ಕೇಂದ್ರ ಸರಕಾರ ಸಿದ್ಧ ಎಂದು ಹೇಳಿದರು.

ಇದನ್ನೂ ಓದಿ:ನ್ಯಾಯಾಲಯಗಳಲ್ಲಿ ಕನ್ನಡದ ಬಳಕೆ ಹೆಚ್ಚಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಫ್ತು ಮಾರುಕಟ್ಟೆ ವ್ಯಾಪ್ತಿ ವಿಸ್ತರಣೆ ಹಾಗೂ ಸುಧಾರಣೆಗೆ ಒತ್ತು ನೀಡಿ ಕೃಷಿ ರಫ್ತು ಕೇಂದ್ರ ಸ್ಥಾಪನೆಗೆ ರಾಜ್ಯ ಮುಂದಾಗಿದೆ. ನಮ್ಮ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚಿಸಲು ಮಾರ್ಕೆಟಿಂಗ್‌ ಮತ್ತು ರಫ್ತು ಪ್ರಚಾರ ಚಟುವಟಿಕೆ ಬಗ್ಗೆಯೂ ರಾಜ್ಯ ಗಮನ ಹರಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಜಾಗತಿಕವಾಗಿ ಉತ್ತಮ ವ್ಯಾಪಾರ ಸಂಬಂಧ ಕಾಯ್ದುಕೊಂಡಿರುವ ಕರ್ನಾಟಕವು ಕಾಫಿ, ಸಾಂಬಾರು ಪದಾರ್ಥಗಳು, ರೇಷ್ಮೆ, ಗೋಡಂಬಿ, ಕರಕುಶಲ ವಸ್ತುಗಳಿಗೆ ಹಿಂದಿನಿಂದಲೂ ಹೆಸರುವಾಸಿಯಾಗಿದೆ. ಇತ್ತೀಚಿನ ವರ್ಷಗಳಲ್ಲಿ ಎಂಜಿನಿಯರಿಂಗ್‌ ಸರಕುಗಳು, ಸಿದ್ಧ ಉಡುಪುಗಳು, ಚರ್ಮದ ಸರಕು, ರಾಸಾಯನಿಕಗಳು, ಖನಿಜ ಮತ್ತು ಅದಿರುಗಳ ರಫ್ತಿನಲ್ಲಿ ಪ್ರಮುಖ ಸ್ಥಾನ ಪಡೆದಿದ್ದೇವೆ. ಇದರ ಜತೆಗೆ, ಕೃಷಿ ಉತ್ಪನ್ನಗಳ ರಫ್ತಿಗೆ ಉದ್ಯಮಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.