ಅಮೃತ್‌ ಸರೋವರದಲ್ಲಿ ರಾಜ್ಯಕ್ಕೆ ಗರಿ

ದೇಶದಲ್ಲೇ 4ನೇ ಸ್ಥಾನ ಪಡೆದ ರಾಜ್ಯ | ಕಳೆದ ಏಪ್ರಿಲ್‌ನಲ್ಲಿ ಜಾರಿ

Team Udayavani, Feb 24, 2023, 9:50 AM IST

pond

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆಗಳಲ್ಲೊಂದಾದ “ಮಿಷನ್‌ ಅಮೃತ್‌ ಸರೋವರ್‌’ ಅನುಷ್ಠಾನದಲ್ಲಿ ಕರ್ನಾಟಕ ಗುರುತರ ಪ್ರಗತಿ ಸಾಧಿಸಿದ್ದು, ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದಿದೆ. ದೇಶದ 75ನೇ ಸ್ವಾತಂತ್ರೋÂತ್ಸವದ ಅಂಗವಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಈ ಯೋಜನೆಯನ್ನು ಕಳೆದ ಏಪ್ರಿಲ್‌ನಲ್ಲಿ ಜಾರಿಗೊಳಿಸಿತ್ತು. ದೇಶದ ಪ್ರತಿ ಜಿಲ್ಲೆಯಲ್ಲಿ 75 ಜಲಮೂಲಗಳನ್ನು ಅಭಿವೃದ್ಧಿಪಡಿಸಿ ಪುನರುಜ್ಜೀವನಗೊಳಿಸುವುದು ಯೋಜನೆ ಉದ್ದೇ ಶ. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಇದನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಂತೆ ಪ್ರತಿ ಜಿಲ್ಲೆಯಲ್ಲಿ ಒಂದು ಎಕರೆಗಿಂತ ಹೆಚ್ಚು ವಿಸೀ¤ರ್ಣವಿರುವ ಕನಿಷ್ಠ 75 ಕೆರೆಗಳನ್ನು ಅಭಿವೃದ್ಧಿಪಡಿಸುವ ಗುರಿ ಹಾಕಿಕೊಳ್ಳಲಾಗಿದೆ.

ಜಲಮೂಲಗಳ ರಕ್ಷಣೆ, ಅಂತರ್ಜಲ ಮಟ್ಟ ಹೆಚ್ಚಳ, ಕೆರೆಕಟ್ಟೆಗಳ ಸಂರಕ್ಷಣೆಗಾಗಿ ಕೆರೆಗಳನ್ನು ಪುನಶ್ಚೇತನಗೊಳಿಸುವುದು ಈ ಯೋಜನೆಯ ಪ್ರಮುಖ ಉದ್ದೇಶ. ಜಲಮೂಲಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ನೀಡುವ ಜಲ ಸಂರಕ್ಷಣೆಯ ಮಹತ್ವಾಕಾಂಕ್ಷಿ ಈ ಯೋಜನೆ ಅನುಷ್ಠಾನದಲ್ಲಿ ರಾಜ್ಯ ದೇಶದಲ್ಲೇ ಮುಂಚೂಣಿಯಲ್ಲಿರುವುದು ವಿಶೇಷ. “ಅಮೃತ್‌ ಸರೋವರ್‌’ ಅನುಷ್ಠಾನವನ್ನು ತೀವ್ರಗೊಳಿ ಸಲು ಕಳೆದ ಆಗಸ್ಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತರು, ಸ್ವಾತಂತ್ರೊÂತ್ಸವ ನಿಮಿತ್ತ ಆ.15 ರಂದು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 15 ಕೆರೆಗಳನ್ನಾದರೂ ಅಭಿವೃದ್ಧಿ ಪಡಿಸಬೇಕು ಹಾಗೂ ಕೆರೆಯ ದಡದಲ್ಲಿಯೇ ತ್ರಿವರ್ಣ ಧ್ವಜಾರೋಹಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದರು. ಜತೆಗೆ ನಿರಂತರ ಪ್ರಗತಿ ಪರಿಶೀಲನೆಯ ಕ್ರಮ ಸಹ ಯೋಜನೆಯ ತ್ವರಿತ ಪ್ರಗತಿಗೆ ಸಹಕಾರಿಯಾಗಿದೆ.

ಅಮೃತ್‌ ಸರೋವರ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ದೇಶದಲ್ಲಿಯೇ ಮುಂಚೂಣಿಯಲ್ಲಿ ಇರುವುದು ಹೆಮ್ಮೆಯ ಸಂಗತಿ. ದಾವಣಗೆರೆ ಜಿಲ್ಲೆಯಲ್ಲಿಯೂ ಈ ಯೋಜನೆ ತ್ವರಿತವಾಗಿ ಅನುಷ್ಠಾನಗೊಳ್ಳುತ್ತಿದ್ದು, ಈಗಾಗಲೇ 119 ಕೆರೆಗಳ ಅಭಿವೃದ್ಧಿ ಕೈಗೊಳ್ಳಲಾಗಿದೆ. ಇದರಲ್ಲಿ 31 ಕೆರೆಗಳ ಅಭಿವೃದ್ಧಿ ಪೂರ್ಣಗೊಂಡಿದೆ.
●ಡಾ| ಎ. ಚನ್ನಪ್ಪ, ದಾವಣಗೆರೆ ಜಿಪಂ ಸಿಇಒ

ಏನೇನು ಕಾಮಗಾರಿ?: ಈ ಯೋಜನೆಯಡಿ ಗುರುತಿಸಿರುವ ಕೆರೆಗಳಲ್ಲಿ ಹೂಳು ತೆಗೆಯುವುದು, ಕೆರೆಯ ತೂಬು ನವೀಕರಿಸುವುದು, ಕೆರೆ ಸುತ್ತಲೂ ತಂತಿಬೇಲಿ ಅಳವಡಿಸುವುದು. ಕೆರೆಗೆ ನೀರು ಸರಾಗವಾಗಿ ಹರಿದುಬರಲು ಸುತ್ತಲಿನ ನಾಲೆಗಳ ಸುಧಾರಣೆ, ಕೆರೆ ದಂಡೆ ಅಭಿವೃದ್ಧಿ, ಕೆರೆ ದಂಡೆ ಮೇಲೆ ಪಾದಚಾರಿ ಪಥ ಅಭಿವೃದ್ಧಿ, ಸಸಿಗಳನ್ನು ನೆಡುವುದು, ದಡದಲ್ಲಿ ಉದ್ಯಾನವನ ನಿರ್ಮಾಣ, ಆಸನ ವ್ಯವಸ್ಥೆ ಸೇರಿದಂತೆ ಇನ್ನಿತರ ಕಾಮ ಗಾರಿ ಗಳನ್ನು ಕೈಗೊಳ್ಳಲಾಗುತ್ತಿದೆ. ಇನ್ನು ಹೊಸದಾಗಿಯೂ ಕೆರೆ ನಿರ್ಮಿಸಬಹುದಾಗಿದ್ದು, ಕನಿಷ್ಠ ನಾಲ್ಕು ಎಕರೆ ಕೃಷಿ ಭೂಮಿಗೆ ನೀರಾವರಿ ಒದಗಿಸುವಷ್ಟು ವಿಸ್ತಾರದ ಕೆರೆ ನಿರ್ಮಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಅಮೃತ್‌ ಸರೋವರ್‌’ ಯೋಜನೆಯಿಂದ ಗ್ರಾಮೀಣ ಕೆರೆಗಳು ಆಧುನಿಕ ಸ್ಪರ್ಶ ಪಡೆದುಕೊಂಡು ಸೌಂದರ್ಯ ಹೆಚ್ಚಿಸಿಕೊಳ್ಳುತ್ತಿವೆ.ಉದ್ಯೋಗ ಖಾತ್ರಿ ಯೋಜನೆಯಲ್ಲಿ ಈ ಕಾಮಗಾರಿ ಕೈಗೊಳ್ಳುವುದರಿಂದ ಗ್ರಾಮೀಣ ಜನರಿಗೂನಿರಂತರವಾಗಿ ಉದ್ಯೋಗ ಲಭಿಸುತ್ತಿದೆ.

1307 ಕೆರೆಗಳಿಗೆ ಕಾಯಕಲ್ಪ
ಅಮೃತ್‌ ಸರೋವರ್‌ ಯೋಜನೆಯಡಿ 1307 ಕೆರೆಗಳನ್ನು ಅಭಿವೃದ್ಧಿಗೊಳಿಸಿರುವ ಕರ್ನಾಟಕ ದೇಶದಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಯೋಜನಾನುಷ್ಠಾನದಲ್ಲಿ ದೇಶದಲ್ಲಿ ಮೊದಲ ಸ್ಥಾನ ಪಡೆದಿರುವ ಉತ್ತರ ಪ್ರದೇಶ 9125, ಎರಡನೇ ಸ್ಥಾನದಲ್ಲಿರುವ ಮಧ್ಯಪ್ರದೇಶ 2626 ಹಾಗೂ ಮೂರನೇ ಸ್ಥಾನದಲ್ಲಿರುವ ಜಮ್ಮು ಮತ್ತು ಕಾಶ್ಮೀರ 2419 ಜಲಮೂಲಗಳನ್ನು ಅಭಿವೃದ್ಧಿಪಡಿಸಿವೆ.

~ಎಚ್‌.ಕೆ ನಟರಾಜ

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.