Fengal Effect: ದ.ಕನ್ನಡ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಎದುರಿಸಲು ಸಜ್ಜಾಗಿ: ಯು.ಟಿ.ಖಾದರ್
ತೀವ್ರ ಮಳೆ ಹಿನ್ನೆಲೆ ಹಿರಿಯ ಅಧಿಕಾರಿಗಳೊಂದಿಗೆ ಪರಿಸ್ಥಿತಿ ಅವಲೋಕನ ಸಭೆ ನಡೆಸಿದ ವಿಧಾನಸಭಾಧ್ಯಕ್ಷ
Team Udayavani, Dec 2, 2024, 10:32 PM IST
ಮಂಗಳೂರು: ಫೈಂಜಾಲ್ ಚಂಡಮಾರುತ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಸೋಮವಾರ ರೋಮ್ ನಿಂದ ನೇರವಾಗಿ ಕಲ್ಲಿಕೋಟೆ ಮೂಲಕ ಮಂಗಳೂರಿಗೆ ಆಗಮಿಸಿ ಜಿಲ್ಲೆಯ ಪ್ರಾಕೃತಿಕ ಸ್ಥಿತಿಗತಿ ಪರಿಶೀಲನೆ ನಡೆಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಜಿಲ್ಲೆಯ ವಿವಿಧ ತಾಲೂಕು ಅಧಿಕಾರಿಗಳಿಂದ ವೀಡಿಯೋ ಸಂವಾದ ಮೂಲಕ ಪ್ರಾಕೃತಿಕ ವಿಕೋಪದ ಮಾಹಿತಿ ಪಡೆದು ಗುಡ್ಡ ಸಮೀಪ ಮನೆಯಲ್ಲಿ ವಾಸ್ತವ್ಯದಲ್ಲಿರುವವರಿಗೆ ಮುಂದಿನ ಎರಡು ದಿನಗಳವರೆಗೆ ತಂಗದಂತೆ ತಿಳಿಸಬೇಕು, ರಸ್ತೆ, ವಿದ್ಯುತ್ ತೊಂದರೆಗಳ ಎದುರಿಸಲು ಅಗತ್ಯ ಯಂತ್ರೋಪಕರಣಗಳೊಂದಿಗೆ ಸನ್ನದ್ಧರಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ:
ಪ್ರಕೃತಿ ವಿಕೋಪ ತೀವ್ರವಾಗಿರುವುದರಿಂದ ರೆಸಾರ್ಟ್ಗಳಿಗೆ ಬರುವ ಪ್ರವಾಸಿಗರಿಗೆ ವಾಸ್ತವ್ಯ ಹೂಡದಂತೆ ಮನವರಿಕೆ ಮಾಡಬೇಕು. ಒಂದು ವೇಳೆ ರೆಸಾರ್ಟ್ ನಲ್ಲಿ ಉಳಿದುಕೊಂಡು ಪ್ರವಾಸಿಗರಿಗೆ ಯಾವುದೇ ಜೀವಹಾನಿಯಾದರೆ ಸಂಬಂಧಪಟ್ಟ ರೆಸಾರ್ಟ್ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಆನಂದ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮತ್ತಿತರರಿದ್ದರು.
ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಸೂಚನೆ
ಚಂಡಮಾರುತ ಪರಿಣಾಮ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ಫೈಂಜಾಲ್ ಚಂಡಮಾರುತ ಉಂಟಾಗಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಭಾರೀ ಮಳೆಯಿಂದ ಎದುರಾಗಬಹುದಾದ ಪರಿಸ್ಥಿತಿಗಳ ನಿರ್ವಹಿಸಲು ಎಲ್ಲ ರೀತಿಯಲ್ಲಿ ಸಜ್ಜಾಗಿರುವಂತೆ ದೂರವಾಣಿ ಮೂಲಕ ಸಚಿವ ದಿನೇಶ್ ಗುಂಡೂರಾವ್ ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.