Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಉದ್ಧವ್ ಶಿವಸೇನೆ ಏಕಾಂಗಿ ಸ್ಪರ್ಧೆ: ಸಂಜಯ್ ರಾವತ್
Team Udayavani, Jan 11, 2025, 9:31 PM IST
ಮುಂಬೈ: ಲೋಕಸಭೆ ಚುನಾವಣೆಗೆ ಮಾತ್ರವೇ “ಇಂಡಿಯಾ’ (ದಿ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇನ್‌ಕ್ಲೂಸಿವ್ ಅಲೈನ್ಸ್) ಒಕ್ಕೂಟ ಎಂಬ ಕಾಂಗ್ರೆಸ್ ಹೇಳಿಕೆ ಬೆನ್ನಲ್ಲೇ ರಾಷ್ಟ್ರಮಟ್ಟದಲ್ಲಿ ಇಂಡಿ ಮೈತ್ರಿಕೂಟದ ಇತರ ಪಕ್ಷಗಳ ನಾಯಕರಿಂದ ಅಪಸ್ವರ ಎದ್ದು ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ. ಈ ನಡುವೆ ಮಹಾರಾಷ್ಟ್ರದಲ್ಲಿನ ಮಹಾ ವಿಕಾಸ ಅಘಾಡಿ ಮೈತ್ರಿ ಕೂಡ ಮುಕ್ತಾಯದ ಹಂತದಲ್ಲಿದೆ.
ಶೀಘ್ರದಲ್ಲಿಯೇ ಅಲ್ಲಿ ನಡೆಯಲಿರುವ ಮುಂಬೈ, ಥಾಣೆ, ನಾಗ್ಪುರ ಮಹಾನಗರ ಪಾಲಿಕೆ ಚುನಾವಣೆ ಹಾಗೂ ಇತರೆ ಮುನ್ಸಿಪಲ್ ಕಾರ್ಪೊರೇಷನ್, ಜಿಲ್ಲಾ ಪರಿಷತ್, ಪಂಚಾಯತ್ ಚುನಾಣೆಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಉದ್ಧವ್ ಬಣದ ಶಿವಸೇನೆ ಶನಿವಾರ ಘೋಷಿಸಿಕೊಂಡಿದೆ.
. “ಮೈತ್ರಿಯಲ್ಲಿ ಹೋದರೆ ವೈಯಕ್ತಿಕವಾಗಿ ಪಕ್ಷಗಳ ಕಾರ್ಯಕರ್ತರಿಗೆ ಅವಕಾಶ ಸಿಗುವುದಿಲ್ಲ. ಇದರಿಂದ ಸಂಘಟನಾತ್ಮಕ ಪ್ರಗತಿಗೂ ತೊಡಕಾಗುತ್ತದೆ’ ಎಂದು ಉದ್ಧವ್ ಶಿವಸೇನೆ ಮುಖಂಡ ರಾವತ್ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಇಂಡಿಯಾ ಕೂಟಕ್ಕೆ ಒಬ್ಬ ಸಂಚಾಲಕನನ್ನು ನೇಮಿಸಲಾಗದ, ಅಸೆಂಬ್ಲಿ ಚುನಾವಣೆ ಬಳಿಕ ಸಭೆ ಕರೆಯಲಾಗದ ಕಾಂಗ್ರೆಸ್ ವಿರುದ್ಧವೂ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಜತೆಗೆ ಮತ್ತೆ ಉದ್ಧವ್ ಮೈತ್ರಿ?
ಬಿಜೆಪಿ ಜತೆಗೆ ಮತ್ತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉದ್ಧವ್ ಬಣ ಶಿವಸೇನೆ ಆಸಕ್ತಿ ಹೊಂದಿದೆ ಎನ್ನಲಾಗಿದೆ. ಈ ಬಗ್ಗೆ ಸಂಸದ ಸಂಜಯ ರಾವತ್ ಸುಳಿವು ನೀಡಿದ್ದಾರೆ. ರಾಜಕೀಯದಲ್ಲಿ ಏನು ಬೇಕಿದ್ದರೂ ಆಗಲು ಸಾಧ್ಯವಿದೆ. ಇಲ್ಲಿ ಯಾರೂ ಶಾಶ್ವತ ಶತ್ರುಗಳೂ ಅಲ್ಲ, ಶಾಶ್ವತ ಮಿತ್ರರೂ ಅಲ್ಲ’ ಎಂದು ಹೇಳಿದ್ದಾರೆ. “ಒಂದು ಕಾಲದಲ್ಲಿ ನಿತೀಶ್ ಕುಮಾರ್ ಬಿಜೆಪಿಯ ಕಟು ವಿರೋಧಿಯಾಗಿದ್ದರು. ಈಗ ಅವರೇ ಬಿಜೆಪಿ ಜತೆ ಕೈಜೋಡಿಸಿಲ್ಲವೇ? ಫಡ್ನವೀಸ್ ರಾಜಕೀಯಕ್ಕೆ ಬರುವ ಮೊದಲೇ ಶಿವಸೇನೆ ಮತ್ತು ಬಿಜೆಪಿ ಜತೆಗೆ ಮಿತ್ರತ್ವ ಇತ್ತು ಎಂದು ಹೇಳಿದ್ದಾರೆ.
ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಶಿವಸೇನೆ (ಯುಬಿಟಿ) ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಎನ್‌ಸಿಪಿಯ ಶರದ್ ಪವಾರ್ ಹಾಗೂ ಕಾಂಗ್ರೆಸ್ ನ ಸೋನಿಯಾ ಗಾಂಧಿಯೊಂದಿಗೆ 2019ರಲ್ಲಿ ಮೈತ್ರಿ ಏರ್ಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ
Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!
Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 153: ವೈಯಕ್ತಿಕ ಅಭಿಪ್ರಾಯ ಬೇರೆ, ಕರ್ತವ್ಯ ಬೇರೆ
BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
Chandan Shetty: ಕಾಟನ್ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.