ಡಿಕೆಶಿ ಜತೆ ಹಣಕಾಸು ವ್ಯವಹಾರ; ಇ.ಡಿಯಿಂದ ಲಕ್ಷ್ಮೀ ಹೆಬ್ಬಾಳ್ಕರ್ ಸತತ ವಿಚಾರಣೆ
Team Udayavani, Sep 20, 2019, 5:35 PM IST
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಶುಕ್ರವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಧ್ಯಾಹ್ನ 12ಗಂಟೆಯಿಂದ ಸತತವಾಗಿ ವಿಚಾರಣೆಗೊಳಪಡಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ದೆಹಲಿಯ ಲೋಕನಾಯಕ ಭವನದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಬೆಳಗಾವಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಡಿಕೆಶಿ ನಡುವಿನ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದೆ.
ಇಂದು ರಾತ್ರಿ 8ಗಂಟೆವರೆಗೂ ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ. ಮತ್ತೊಂದೆಡೆ ನ್ಯಾಯಾಂಗ ಬಂಧನದಲ್ಲಿರುವ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತಂತೆ ವಿಚಾರಣೆ ಶನಿವಾರ ಬೆಳಗ್ಗೆ 11ಗಂಟೆಗೆ ನಡೆಯಲಿದೆ.
ನನಗೆ ಡಿಕೆ ಶಿವಕುಮಾರ್ ಅವರ ಜತೆ ಯಾವುದೇ ಹಣಕಾಸಿನ ವ್ಯವಹಾರ ಇಲ್ಲ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.