FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
ಆರೋಪಿ ಬೇಲ್‌ಗೆ ಜಡ್ಜ್ ಹೆಸರಲ್ಲಿ 50 ಲಕ್ಷ ರೂ.ಗೆ ಬೇಡಿಕೆ? ವಿಧಾನಸೌಧ ಪೊಲೀಸರಿಂದ ಕೇಸ್ ದಾಖಲು, ಎಫ್ಐಆರ್
Team Udayavani, Dec 26, 2024, 7:26 AM IST
ಬೆಂಗಳೂರು: ಅಪರಾಧ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು ಮಾಡುವ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪ ಕುರಿತು ಮಹಿಳಾ ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೈಕೋರ್ಟ್‌ನ ಕಾನೂನು ವಿಭಾಗದ ಜಂಟಿ ರಿಜಿಸ್ಟ್ರಾರ್ ಎಂ. ರಾಜೇಶ್ವರಿ ನೀಡಿದ ದೂರಿನ ಮೇರೆಗೆ ಹೈಕೋರ್ಟ್ ವಕೀಲೆ ದಯೀನಾಬಾನು ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) 318 (4) ವಂಚನೆಯಡಿ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎಫ್ಐಆರ್‌ನಲ್ಲಿ ಏನಿದೆ?
ಬಂಧಿತನಾಗಿದ್ದ 24 ವರ್ಷದ ವಿಷ್ಣುದೇವನ್‌ಗೆ ಜಾಮೀನು ಸಿಗದೆ 3 ವರ್ಷಗಳಿಂದ ಜೈಲಿನಲ್ಲಿದ್ದ ಮಗನನ್ನು ಜಾಮೀನಿನ ಮೇಲೆ ಬಿಡಿಸುವ ಕುರಿತಂತೆ ತಾಯಿ ಥೆರೆಸಾ, ನ್ಯಾಯವಾದಿ ಮರೀನಾ ಫೆರ್ನಾಂಡಿಸ್ ಅವರನ್ನು ಭೇಟಿ ಮಾಡಿ ವಾದ ಮಂಡಿಸಿ ಜಾಮೀನು ಕೊಡಿಸಲು ಕೇಳಿಕೊಂಡಿದ್ದರು. ಅದಕ್ಕೆ ಪ್ರತಿಯಾಗಿ ಮರೀನಾ 10 ಲಕ್ಷ ರೂ. ಪಡೆದಿದ್ದರು. ಆದರೆ ಜಾಮೀನು ಕೊಡಿಸಲು ವಿಫಲವಾಗಿದ್ದರು. ಥೆರೆಸಾ ತಾನು ನೀಡಿದ್ದ ಹಣವನ್ನು ವಾಪಸ್ ಕೇಳಿದಾಗ ವಕೀಲೆ 9 ಲಕ್ಷ ರೂ. ಮೊತ್ತದ 3 ಚೆಕ್ ಮಾತ್ರ ನೀಡಿದ್ದರು. ಆದರೆ ಹಣ ಹಿಂದಿರುಗಿಸಲಿರಲಿಲ್ಲ ಎಂದು ಎಫ್ಐಆರ್‌ನಲ್ಲಿ ಆರೋಪಿಸಲಾಗಿದೆ.
ಥೆರೆಸಾ ಅವರು ಮತ್ತೆ ಹಣ ವಾಪಸ್ ಕೇಳಿದಾಗ ವಕೀಲೆ ಮರೀನಾ, ಆರತಿ ಎಂಬವರನ್ನು ಪರಿಚಯಿಸಿದ್ದರು. ತಮಗೆ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಪರಿಚಯವಿರುವುದಾಗಿ ಹೇಳಿ ಮರೀನಾ 72 ಸಾವಿರ ರೂ. ಪಡೆದಿದ್ದರು. ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಮಧ್ಯೆ ಪರಿ ಚ ಯ ವಾದ ಮಹಿಳಾ ವಕೀಲೆ ದಯೀನಾಬಾನು ಹೈಕೋರ್ಟ್ ನ್ಯಾಯಾಧೀಶರೊಬ್ಬರು ಜಾಮೀನು ಕೊಡಿಸಲು 50 ಲಕ್ಷ ರೂ. ನಿರೀಕ್ಷಿಸುತ್ತಿದ್ದಾರೆ. ಹಣ ನೀಡಲು ಸಾಧ್ಯವಾಗದಿದ್ದರೆ ಜಾಮೀನು ಪಡೆಯಲು ಬೇರೊಬ್ಬ ವಕೀಲರನ್ನು ನೇಮಿಸಿಕೊಳ್ಳಿ ಎಂದು ಥೆರೆಸಾಗೆ ಹೇಳಿದ್ದರು ಎಂದು ಎಫ್ಐರ್‌ನಲ್ಲಿ ನಮೂದಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.