ಅಬ್ಬರದ ಪ್ರಚಾರಕ್ಕೆ ತೆರೆ : ನಾಳೆ ಬೆಳಗ್ಗೆ 7ರಿಂದಲೇ ಮೊದಲ ಹಂತದ ಮತದಾನ


Team Udayavani, Apr 17, 2019, 6:30 AM IST

abbarada-prachara

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿರುವ 14 ಕ್ಷೇತ್ರ ಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಅಂತಿಮ ದಿನ ವಾದ ಮಂಗಳವಾರ ಕಾಂಗ್ರೆಸ್‌-ಜೆಡಿಎಸ್‌ ಮತ್ತು ಬಿಜೆಪಿಯ ಘಟಾನುಘಟಿ ನಾಯಕರು ಬಹಿರಂಗ ಸಭೆ, ರೋಡ್‌ ಶೋ ನಡೆಸಿ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.

ನಾಳೆ (ಎ. 18) ಈ 14 ಕ್ಷೇತ್ರಗಳಲ್ಲಿ ಮತ ದಾನ ನಡೆಯಲಿರುವ ಹಿನ್ನೆಲೆಯಲ್ಲಿ ಕೊನೆಯ ಕ್ಷಣದ ಪ್ರಚಾರದಲ್ಲಿ ಹೆಚ್ಚುಕಡಿಮೆ ಎಲ್ಲ ನಾಯಕರು ಬ್ಯುಸಿಯಾಗಿದ್ದರು. ಮಂಗಳವಾರ ಬೆಳಗ್ಗೆಯಿಂದ ಸಂಜೆ 6 ಗಂಟೆಯವರೆಗೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ , ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ವಿಶ್ವನಾಥ್‌ ಬಿಡುವಿಲ್ಲದ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದರು.

ಅಮಿತ್‌ ಶಾ ಅವರು ತುಮಕೂರಿನಲ್ಲಿ ರೋಡ್‌ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಿದರು. ದೇವೇಗೌಡ ಅವರು ಸ್ಪರ್ಧೆ ಮಾಡಿರುವ ತುಮಕೂರು ಕ್ಷೇತ್ರದ ಸಿ.ಎಸ್‌.ಪುರ, ಕೊರಟಗೆರೆ, ಗುಬ್ಬಿಯಲ್ಲಿ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಜತೆ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಸಿದ್ದರಾಮಯ್ಯ ಅವರು ಕೊಳ್ಳೇಗಾಲ ಮತ್ತು ಟಿ. ನರಸೀಪುರ, ನರಸಿಂಹರಾಜ ಕ್ಷೇತ್ರಗಳಲ್ಲಿ ಪ್ರಚಾರ ಸಭೆ ನಡೆಸಿ ಮೈತ್ರಿಕೂಟ ಅಭ್ಯರ್ಥಿಗಳ ಪರ ಮತ  ಯಾಚಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರು ಸಹ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಕೊನೇ ದಿನ ರೋಡ್‌ ಶೋ ಮೂಲಕ ಮತಯಾಚನೆ ಮಾಡಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಬೆಂಗ ಳೂರು ಸೆಂಟ್ರಲ್‌ ಸಹಿತ ಬೆಂಗಳೂರಿನ ಕ್ಷೇತ್ರಗಳಲ್ಲಿ ಪಾಲ್ಗೊಂಡು ಮೈತ್ರಿಕೂಟ ಅಭ್ಯರ್ಥಿಗಳ ಪರ ಪ್ರಚಾರ ಮತಯಾಚನೆ ನಡೆಸಿದರು.

ಮೈಸೂರು, ಮಂಡ್ಯ, ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಕ್ಷೇತ್ರಗಳಲ್ಲಿ ಹೆಚ್ಚಿನ ನಾಯಕರು ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದರು.

ಚುನಾವಣ ಆಯೋಗದ ಅಧಿಕಾರಿಗಳು ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡಿದ್ದ ನಾಯಕರ ಮೇಲೆ ಕಣ್ಣಿಟ್ಟಿದ್ದರು. ಸಂಜೆ 6ರ ಬಳಿಕ ಅಭ್ಯರ್ಥಿಗಳು ಮತ್ತು ಮತದಾರರಲ್ಲದವರು ಕ್ಷೇತ್ರ ಬಿಟ್ಟು ಹೊರಡುವಂತೆ ಆಯೋಗ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ನಾಯಕರು ರಾಜಧಾನಿಯತ್ತ ಮುಖ ಮಾಡಿದರು.

ಎಲ್ಲೆಲ್ಲಿ ಮೊದಲ ಹಂತ?
ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜ ನಗರ ಮತ್ತು ಹಾಸನ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಇದರ ಬೆನ್ನಲ್ಲೇ ಎರಡನೇ ಹಂತದಲ್ಲಿ ಎ. 23ರಂದು ಮತದಾನ ನಡೆಯುವ ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳತ್ತ ಕಾಂಗ್ರೆಸ್‌-ಜೆಡಿಎಸ್‌ ಹಾಗೂ ಬಿಜೆಪಿ ಮುಖಂಡರು ಮುಖ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಸಹ ಆ ಕ್ಷೇತ್ರಗಳಲ್ಲಿ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Shirva1

Shirva: ಹಿಂದೂ ಜೂನಿಯರ್‌ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.