ಪ್ರಸಾದ ಭೋಜನದಿಂದ ಅನಾರೋಗ್ಯ ; 50 ದಾಟಿದ ಒಳರೋಗಿಗಳ ಸಂಖ್ಯೆ
Team Udayavani, Nov 14, 2021, 9:05 PM IST
ಸಾಗರ: ಇಲ್ಲಿನ ವಿನೋಬಾನಗರದಲ್ಲಿನ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಶುಕ್ರವಾರ ನಡೆದ ವರ್ಧಂತಿ ಉತ್ಸವದ ವೇಳೆ ಪ್ರಸಾದ ಭೋಜನ ಸ್ವೀಕರಿಸಿದವರ ಕೆಲವರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಇಲ್ಲಿನ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಒಳರೋಗಿಗಳ ಆರೋಗ್ಯವನ್ನು ಎಂಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಎಚ್.ಹಾಲಪ್ಪ ಹರತಾಳು ಶನಿವಾರ ತಡರಾತ್ರಿ ಭೇಟಿಯಾಗಿ ವಿಚಾರಿಸಿದರು. ಈ ನಡುವೆ ಶನಿವಾರ ದಾಖಲಾದವರಿಗೆ ಚಿಕಿತ್ಸೆ ಮುಂದುವರಿದ್ದು, ಭಾನುವಾರ ಸಹ ಕೆಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸಾದ ಭೋಜನ ಸ್ವೀಕರಿಸಿದ ಮೂರ್ತಿ, ಪ್ರೇಮಾ ದೇವಿದಾಸ್, ಆಶಾ ಕಾರ‍್ಯಕರ್ತೆ ಆಶಾ, ಜಗದೀಶ, ಸವಿತಾ ಸೇರಿದಂತೆ 50ಕ್ಕೂ ಹೆಚ್ಚು ಜನರು ಒಳರೋಗಿಗಳಾಗಿ ದಾಖಲಾಗಿದ್ದಾರೆ.
ಈ ಕುರಿತು ಶಾಸಕ ಹಾಲಪ್ಪ ಮಾತನಾಡಿ, ಕಳೆದ ಕೆಲವು ದಿನಗಳಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆಹಾರ ಸ್ವೀಕರಿಸಿದ ಹಲವರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ತಾಲೂಕಿನ ಗ್ರಾಮಾಂತರದಲ್ಲಿ ಸಹ ಖಾಸಗಿ ಕಾರ‍್ಯಕ್ರಮದಲ್ಲಿ ಆಹಾರ ಸೇವಿಸಿದವರಲ್ಲಿ ಸಮಸ್ಯೆ ಕಾಣಿಸಿಕೊಂಡ ಮಾಹಿತಿ ಇದೆ. ಅನಾರೋಗ್ಯ ಸಮಸ್ಯೆಗೆ ಕಾರಣ ಶೋಧವಾಗಬೇಕು ಎಂದರು.
ಕಾಯಿಲೆ ಕಾಣಿಸಿಕೊಂಡರೆ ಮನೆಯಲ್ಲಿಯೇ ಇರುವ ಬದಲು, ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆದುಕೊಳ್ಳಬೇಕು. ನೀರಿನ ಸಮಸ್ಯೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಆದರೆ ಜಿಲ್ಲೆಯಾದ್ಯಂತ ಮೊಸರು, ಮಜ್ಜಿಗೆ ಸಮಾನವಾಗಿ ಪೂರೈಕೆಯಾಗಿದೆ. ಜತೆಗೆ ಮಜ್ಜಿಗೆ, ಮೊಸರು ಸೇವಿಸದವರ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿಲ್ಲ ಎಂದು ಹೇಳಲಾಗುತ್ತಿದೆ. ಮಾದರಿ ಸಂಗ್ರಹಿಸಿ, ಪರಿಶೀಲನೆಗೆ ಕಳಿಸಲು ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ : ಕಳಪೆ ಕಾಮಗಾರಿ ಹಿನ್ನಲೆ : ತಾಟಗೇರಾದಲ್ಲಿ ಕಿರು ಸೇತುವೆ ಕಾಮಗಾರಿ ಸ್ಥಗಿತ
ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ. ಪ್ರಕಾಶ್ ಭೋಸ್ಲೆ, ಡಾ. ಕಾವ್ಯ, ನಗರಸಭಾಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ.ಮಹೇಶ್, ಸ್ಥಳೀಯ ವಾರ್ಡ್ ಸದಸ್ಯ ಕೆ.ಆರ್.ಗಣೇಶ್ ಪ್ರಸಾದ್, ಶ್ರೀಧರಭಟ್ಟ, ಆರೋಗ್ಯ ಇಲಾಖೆ ಸಿಬ್ಬಂದಿ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.